Home ಸುದ್ದಿಗಳು ಹೊಸಪೇಟೆ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಕೆ.ಜಿ.ಜಗದೀಶ್ ಸೂಚನೆ
ಸುದ್ದಿಗಳು

ಹೊಸಪೇಟೆ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಕೆ.ಜಿ.ಜಗದೀಶ್ ಸೂಚನೆ

Share
ZILLA -PANCHAYATH-VIJAYANAGARA-HOSAPETE
Share

ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಧಿಕಾರಿಗಳಿಗೆ ಎಚ್ಚರಿಕೆ.

ವಿಜಯನಗರ(ಹೊಸಪೇಟೆ) :  ಪರಿಶೀಲನಾ ಸಭೆಗೆ ವಿವಿಧ ಇಲಾಖೆಗಳ ಪ್ರಗತಿ ವರದಿಯಲ್ಲಿ ಅವೈಜ್ಞಾನಿಕವಾಗಿ ಅಂಕಿಅಂಶಗಳನ್ನು ನಮೂದಿಸಿ ನೆಪಮಾತ್ರಕ್ಕೆ ಸಲ್ಲಿಸಬೇಡಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮತ್ತು ಆಡಳಿತಾಧಿಕಾರಿ ಡಾ.ಕೆ.ಜಿ.ಜಗದೀಶ್ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ವತಿ ಹಮ್ಮಿಕೊಂಡಿದ್ದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಮತ್ತು ಆಡಳಿತಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು, ಜಿಲ್ಲೆಯಲ್ಲಿನ ಎಲ್ಲಾ ಆಸ್ಪತ್ರೆಗಳು, ಅಂಗನವಾಡಿ, ಸರ್ಕಾರಿ ಶಾಲೆಗಳು, ವಸತಿ ಶಾಲೆ ಸೇರಿದಂತೆ ವಸತಿ ನಿಲಯಗಳಲ್ಲಿ ಸಣ್ಣ ಪುಟ್ಟ ಕೆಲಸಗಳಿಗೆ ಶೌಚಾಲಯ ಸ್ವಚ್ಛತೆ, ಕಿಟಕಿ ಮತ್ತು ಗಾಜುಗಳ ದುರಸ್ಥಿ, ಬಾಗಿಲುಗಳ ರಿಪೇರಿ, ದುಸ್ಥಿತಿಯ ಸಿಂಕ್‌ಗಳು, ಆಸನ ವ್ಯವಸ್ಥೆ, ಅಡುಗೆ ಮನೆಯಲ್ಲಿ ಅಸ್ತವ್ಯಸ್ಥ, ಶುದ್ಧ ಕುಡಿಯುವ ನೀರಿನ ಘಟಕ, ಫ್ಯಾನ್‌ಗಳು ಹೀಗೆ ಅನುದಾನದ ಕೊರತೆ ನೆಪ ಹೇಳದೇ ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಎಲ್ಲಾ ಅಗತ್ಯಗಳನ್ನು ಪೂರೈಸಿ ಮೂಲಭೂತ ಸೌಲಭ್ಯಗಳನ್ನು ನೀಡಲು ಕರ್ತವ್ಯನಿರತರಾಗಬೇಕು. ಮುಂದಿನ ಬಾರಿ ಖುದ್ಧು ಎಲ್ಲಾ ಹಾಸ್ಟೆಲ್, ಅಂಗನವಾಡಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡುವೆ. ಸಚ್ಛತೆ ಮತ್ತು ಶಿಸ್ತುಬದ್ಧತೆ ಇದನ್ನು ಎಲ್ಲಾ ಇಲಾಖೆಗಳು ಕಡ್ಡಾಯವಾಗಿ ಪಾಲಿಸಬೇಕು. ನಿರ್ಲಕ್ಷಿಸಿದರೇ ಸೂಕ್ತ ಕ್ರಮ ವಹಿಸಲಾಗುವುದು.

ಎಲ್‌ಕೆಜಿ, ಯುಕೆಜಿ ಮಾದರಿ ಬೌದ್ಧಿಕ ಶಿಕ್ಷಣ
ಅಂಗನವಾಡಿ ಕೇಂದ್ರಗಳಲ್ಲಿ 6 ತಿಂಗಳಿನಿಂದ 3 ವರ್ಷದೊಳಗಿನ ಮಕ್ಕಳಿಗೆ ಮನೆಗೆ ಅಹಾರ ಸಾಮಾಗ್ರಿಗಳನ್ನು ವಿತರಿಸುವ ಜತೆಗೆ ಮಕ್ಕಳ ಪೌಷ್ಠಿಕ ಬೆಳವಣಿಗೆಯನ್ನು ಗಮನಿಸಬೇಕು. ಅಂಗನವಾಡಿ ಕೇಂದ್ರಗಳಿಗೆ ಬರುವ 3 ವರ್ಷದಿಂದ 6 ವರ್ಷಗದೊಳಗಿನ ಮಕ್ಕಳಿಗೆ ಅಗತ್ಯ ಆಟಿಕೆ ಸಾಮಾಗ್ರಿಗಳನ್ನು ಒದಗಿಸುವ ಜತೆಗೆ ಕೇಂದ್ರದಲ್ಲಿ ಮಕ್ಕಳಿಗೆ ಹೊರಾಂಗಣದಲ್ಲಿ ಆಡಲು ಚಿಕ್ಕ ಮೈದಾನ ನಿರ್ಮಾಣಕ್ಕೆ ಆದ್ಯತೆ ನೀಡಿ. ಹೊಸಪೇಟೆ ವ್ಯಾಪ್ತಿಯಲ್ಲಿ ಕೆಎಂಆರ್‌ಸಿ ಅನುದಾನದಲ್ಲಿ ಚಿಕ್ಕ ಪ್ಲೇಗ್ರೌಂಡ್ ನಿರ್ಮಿಸಬಹುದು. ವಿವಿಧ ತಾಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ಸ್ಥಳೀಯ ಸಂಘ ಸಂಸ್ಥೆ ಸಹಕಾರದಲ್ಲಿ ನಿರ್ಮಿಸಲು ಮುಂದಾಗಬೇಕು. ಅಂಗನವಾಡಿಗಳಲ್ಲಿ ಮಕ್ಕಳಿಗೆ ಎಲ್‌ಕೆಜಿ, ಯುಕೆಜಿ ಮಾದರಿ ಬೌದ್ಧಿಕ ಶಿಕ್ಷಣ ನೀಡಬೇಕು. ಹಾಗಾದರೇ ಮುಂದೆ ಅವರು ಸರ್ಕಾರಿ ಶಾಲೆಗಳಿಗೆ ದಾಖಲಾಗುತ್ತಾರೆ ಇಲ್ಲವಾದರೇ ಬಡಪೋಷಕರು ಸಾಲ ಮಾಡಿಯಾದರೂ ಖಾಸಗಿ ನರ್ಸರಿಗಳಿಗೆ ಸೇರಿಸಲು ಆಸಕ್ತಿ ವಹಿಸುತ್ತಾರೆ. ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಳಜಿಗೆ ಅಂಗನವಾಡಿ ಮತ್ತು ಆರೋಗ್ಯ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.

ವಿವಿಧ ಇಲಾಖೆಗಳಡಿ ನಿರ್ವಹಿಸುವ ವಸತಿ ನಿಲಯಗಳಲ್ಲಿ ವಾರ್ಡನ್‌ಗಳು, ಅಡುಗೆ ಸಹಾಯಕರು, ಸಿಬ್ಬಂದಿಗಳು ಹಾಸ್ಟೆಲ್ ಮಕ್ಕಳೊಂದಿಗೆ ಉತ್ತಮ ಸಂಬಂಧವನ್ನು ವೃದ್ಧಿಸಿಕೊಳ್ಳಬೇಕು. ಮಕ್ಕಳಿಗೆ ಮನೆಯಲ್ಲಿರುವಂತೆ ಹಾಸ್ಟೆಲ್ ವಾತವಾರಣವನ್ನು ಸೃಷ್ಟಿಸಬೇಕು. ಇದಕ್ಕೆ ವಾರ್ಡನ್‌ಗಳ ಪಾತ್ರ ಮಹತ್ವದಾಗಿದೆ. ಶುಚಿತ್ವಕ್ಕೆ ಮೊದಲ ಆದ್ಯತೆ ನೀಡಿ. ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿರುವ ಊಟೋಪಾಚಾರವನ್ನು ಸಂತಸದಿಂದ ಪಡೆಯುವಂತಾಗಬೇಕು. ಈ ವೇಳೆ ಪಂಚಗ್ಯಾರಂಟಿ ಯೋಜನೆಗಳ ಸ್ಥಿತಿಗತಿ ಹಾಗೂ ಕ್ರಮವಹಿಸಬೇಕಾದ ಅಗತ್ಯತೆಗಳನ್ನು ಬಗ್ಗೆ ಚರ್ಚಿಸಲಾಯಿತು. ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಆಯುಷ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಭಿವೃದ್ಧಿ ಯೋಜನೆಗಳು ಮತ್ತು ಪ್ರಗತಿಯನ್ನು ಚರ್ಚಿಸಲಾಯಿತು. ಮುಂದಿನ ಸಭೆಯಲ್ಲಿ ಅಂಕಿಅಂಶಗಳ ವರದಿಗಿಂತ ನಿಮ್ಮ ಕೆಲಸದ ಪ್ರಗತಿಯನ್ನು ಅನಾವರಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ವೇದಿಕೆಯಲ್ಲಿ 

ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಕ್ರಮ್ ಅಲಿ ಷಾ, ಜಿಲ್ಲಾ ಅರಣ್ಯ ಉಪ ಸಂರಕ್ಷಣಾ ಅಧಿಕಾರಿ ಅನುಪಮ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ವೇದಿಕೆಯಲ್ಲಿದ್ದರು. ಸಭೆಯಲ್ಲಿ ಸಹಾಯಕ ಆಯುಕ್ತರಾದ ಪಿ.ವಿವೇಕಾನಂದ, ಕೃಷಿ ಇಲಾಖೆ ಜಂಟಿನಿರ್ದೇಶಕ ಡಿ.ಟಿ.ಮಂಜುನಾಥ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪಿ.ಜಿ.ಚಿದಾನಂದಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಂ.ವೈ.ಕಾಳೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಕೆ.ರವಿಕುಮಾರ್, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಪ್ರಭುಲಿಂಗ ತಳಕೇರಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಾಂಗ್ರೆಸ್ ಮುಖಂಡ ಶಶಿಧರ ಪೂಜಾರ ಜನ್ಮದಿನಾಚರಣೆ

ಹರಪನಹಳ್ಳಿ: ಇಲ್ಲಿನ ತಾಲ್ಲೂಕು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಶಶಿಧರ ಪೂಜಾರ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು...

Homeಸುದ್ದಿಗಳು

ರೋಗನಿರೋಧಕ ಶಕ್ತಿ ಹೆಚ್ಚಿಸಲು ತಾಯಿಯ ಎದೆಹಾಲು ಅತ್ಯಗತ್ಯ: ಡಿಹೆಚ್‌ಒ ಡಾ.ಟಿ.ಲಿಂಗರಾಜು

ವಿಜಯನಗರ (ಹೊಸಪೇಟೆ) : ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಹುಮುಖ್ಯವಾಗಿದೆ....

Homeಸುದ್ದಿಗಳು

ಸಂಪುಟ ವಿಸ್ತರಣೆ ಕೌತುಕಕ್ಕೆ ಇಂದು ತೆರೆ: ಸಂಜೆ ರಾಜಭವನದಲ್ಲಿ 20 ನೂತನ ಸಚಿವರ ಪದಗ್ರಹಣ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ...

Homeಸುದ್ದಿಗಳು

ನರೇಗಾ ಮಾದರಿ ಕಾಮಗಾರಿ ಮರುಸ್ಥಾಪನೆಗೆ ಆಗ್ರಹ

ಹರಪನಹಳ್ಳಿ : ಹೊಸದಾಗಿ ಜಾರಿಗೆ ತಂದಿರುವ ವಿಬಿಜಿ ರಾಮ್‍ಜಿ ಕಾಯ್ದೆಯಡಿ ಹಳೆಯ ನರೇಗಾ ಮಾದರಿ ಕಾಮಗಾರಿಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.