ವಿಜಯನಗರ, (ಹೊಸಪೇಟೆ) : ಕ್ರೀಡೆಯಲ್ಲಿ ಸೋಲು ಗೆಲುವು ಸಹಜ. ಅದರ ಬಗ್ಗೆ ಚಿಂತಿಸದೇ ಕ್ರೀಡೆಯಲ್ಲಿ ಆರೋಗ್ಯಯುತವಾದ ಸ್ಪರ್ಧಾತ್ಮಕ ಮನೋಭಾವ ಮುಖ್ಯ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನೌಕರರು ಕೆಲಸದ ಒತ್ತಡದ ಮಧ್ಯೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಸಹಕಾರಿಯಾಗಲಿದೆ. ಸ್ಪರ್ಧೆಯ ಸೋಲು ಗೆಲುವಿನ ಬಗ್ಗೆ ಗಮನ ಕೊಡದೆ ಎಲ್ಲರೂ ಸಕ್ರಿಯವಾಗಿ ಭಾಗವಹಿಸಿ ಕ್ರೀಡಾಕೂಟ ಯಶಸ್ವಿಗೊಳಿಸುವಂತೆ ತಿಳಿಸಿದರು.
ಡಿ ಗ್ರೂಪ್ ನೌಕರರ ಸಂಘದ ಅಜಯ್ ಮದಕರಿ ಹಂಪಿ ವಿರುಪಾಕ್ಷೇಶ್ವರ ದೇವಸ್ಥಾನದಿಂದ 5ನೇ ಬಾರಿಗೆ ಜಿಲ್ಲಾ ಕ್ರೀಡಾಂಗಣದ ಪುನಿತ್ ರಾಜ್‌ಕುಮಾರ್ ವೇದಿಕೆಗೆ ಜ್ಯೋತಿ ತರಲಾಯಿತು.
ಈ ವೇಳೆ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ , ವಿವಿಧ ತಾಲ್ಲೂಕು ಘಟಕದ ಅಧ್ಯಕ್ಷರುಗಳು ಉಪಸ್ಥಿತರಿದ್ದರು.
Leave a comment