Home ಶಿಕ್ಷಣ ಫೆ. 21ರಂದು ಬೃಹತ್ ಉದ್ಯೋಗ ಮೇಳ
ಶಿಕ್ಷಣಸುದ್ದಿಗಳು

ಫೆ. 21ರಂದು ಬೃಹತ್ ಉದ್ಯೋಗ ಮೇಳ

Share
Share
21ರಂದು ಬೃಹತ್ ಉದ್ಯೋಗ ಮೇಳ
ವಿಜಯನಗರ :
ಕರ್ನಾಟಕ ಸರ್ಕಾರ, ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಕೌಶಲಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ, ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ ಯೋಜನೆ, ಜಿಪಂ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ವಿಜಯನಗರ ಕಾಲೇಜು ಹಾಗೂ ರೈಟ್ವೇ ಸೊಲ್ಯೂಷನ್ ಹೊಸಪೇಟೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ವಿಜಯನಗರ ಕಾಲೇಜು ಆವರಣದಲ್ಲಿ ಫೆಬ್ರವರಿ 21ರಂದು ಉದ್ಯೋಗ ಮೇಳ ಆಯೋಜಿಸಲಾಗಿದೆ.
ಜಿಲ್ಲೆಯ ನಿರುದ್ಯೋಗಿ ಯುವಕ, ಯುವತಿಯರು ಮತ್ತು ಯುವನಿಧಿ ಫಲಾನುಭವಿಗಳು ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಮೇಳ ಆಯೋಜಿಸಲಾಗಿದೆ. ಮೇಳದಲ್ಲಿ 50 ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, 2000 ಕ್ಕೂ ಹೆಚ್ಚು ವಿವಿಧ ಹುದ್ದೆಗಳ ಉದ್ಯೋಗಾವಕಾಶ ಸಿಗಲಿದೆ. ಆಸಕ್ತ ಅರ್ಹ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಹಾಗೂ ಡಿಪ್ಲೊಮಾ, ನರ್ಸಿಂಗ್, ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.
ಫೆ. 21 ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ
ವಿಜಯನಗರ :
ನಗರದ ಉಪವಿಭಾಗ 1 ಮತ್ತು ಉಪವಿಭಾಗ – 2 ರಲ್ಲಿ ಇದೇ ಪೆಬ್ರವರಿ 21ರಂದು ಮದ್ಯಾಹ್ನ 4 ಗಂಟೆಯಿಂದ 5ರವರೆಗೆ ಆಯಾ ವಿಭಾಗದ ಕಚೇರಿಗಳಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ರ‍್ಪಡಿಸಲಾಗಿದೆ. ನಗರದ ವಿದ್ಯುತ್ ಗ್ರಾಹಕರು ಸಭೆಗೆ ಭಾಗವಹಿಸಿ ತಮ್ಮ ಕುಂದು ಕೊರತೆಗಳನ್ನು ಪರಿಹರಿಸಕೊಳ್ಳಬಹುದು ಎಂದು ಜೆಸ್ಕಾಂ ಸಹಾಯಕ ಕರ‍್ಯನರ‍್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ : ಮಹಾನಗರಪಾಲಿಕೆ ಮತ್ತು ಹರಿಹರ ನಗರಸಭೆಯಲ್ಲಿ ನೇರ ಪಾವತಿಯಡಿಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳನ್ನು...

Homeಸುದ್ದಿಗಳು

ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ : ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ...

Homeಸುದ್ದಿಗಳು

ಜುಲೈ 31ರಂದು ನೇರ ಸಂದರ್ಶನ

ವಿಜಯನಗರ(ಹೊಸಪೇಟೆ) : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ಜುಲೈ 31ರಂದು ಬೆಳಿಗ್ಗೆ 10ಗಂಟೆಗೆ...

Homeಸುದ್ದಿಗಳು

ಧಾರ್ಮಿಕ ದತ್ತಿ ಇಲಾಖೆ ದೇವಾಲಯಗಳಲ್ಲಿ ಪ್ರತಿ ತಿಂಗಳು ಹುಂಡಿ ಎಣಿಕೆ ಕಡ್ಡಾಯ

ವಿಜಯನಗರ (ಹೊಸಪೇಟೆ) : ಜಿಲ್ಲೆಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ 'ಎ' ಮತ್ತು 'ಬಿ'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.