Home ಜಗಳೂರಿನಲ್ಲಿ ನಾನೇ ಬಿಜೆಪಿ ಅಭ್ಯರ್ಥಿ : ಎಸ್‍.ವಿ.ರಾಮಚಂದ್ರ 
Homeರಾಜಕೀಯ

ಜಗಳೂರಿನಲ್ಲಿ ನಾನೇ ಬಿಜೆಪಿ ಅಭ್ಯರ್ಥಿ : ಎಸ್‍.ವಿ.ರಾಮಚಂದ್ರ 

Share
ಜಗಳೂರಿನಲ್ಲಿ ನಾನೇ ಬಿಜೆಪಿ ಅಭ್ಯರ್ಥಿ : ಎಸ್‍.ವಿ.ರಾಮಚಂದ್ರ 
Share

ಹರಪನಹಳ್ಳಿ : ದಾವಣಗೆರೆ ಜಿಲ್ಲೆ ಜಗಳೂರು ವಿದಾನಸಭಾ ಕ್ಷೇತ್ರದಿಂದ ನಾನೇ ಬಿಜೆಪಿ ಅಭ್ಯರ್ಥಿ, ಕಾರ್ಯಕರ್ತರು ಗೊಂದಲ ಮಾಡಿಕೊಳ್ಳಬೇಡಿ ಎಂದ  ಮಾಜಿ ಶಾಸಕ ಎಸ್.ವಿ.ರಾಮಚಂದ್ರ ಹೇಳಿದರು.

ಜಗಳೂರು ವಿದಾನಸಭಾ ಕ್ಷೇತ್ರಕ್ಕೆ ಒಳಪಡುವ ಹರಪನಹಳ್ಳಿ ತಾಲ್ಲೂಕಿನ ಉಚ್ಚಂಗಿದುರ್ಗ ಹಾಲಮ್ಮನ ತೋಪಿನಲ್ಲಿ  7 ಗ್ರಾಮ ಪಂಚಾಯಿತಿಯ ಬಿಜೆಪಿ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಿಜೆಪಿ ಪಕ್ಷದ ಕಾರ್ಯಕರ್ತರು ಯಾವುದೇ ಗೊಂದಲ ಮಾಡಿಕೊಳ್ಳದೇ ಗ್ರಾಮ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳ ಗೆಲ್ಲಿಸಲು ಸನ್ನದ್ಧರಾಗಬೇಕು ಎಂದರು.

ಶೀಘ್ರ ಗ್ರಾಮಗಳ ಹಂತದಲ್ಲಿ ಗ್ರಾಮ ಸಮಿತಿಗಳನ್ನು ರಚಿಸಿ, ಪಕ್ಷ ಸಂಘಟನೆಗೆ ಚಾಲನೆ ನೀಡಲಾಗುವುದು. ನಾನು ಅಧಿಕಾರದಲ್ಲಿ ಇರಲಿ, ಬಿಡಲಿ ಜನರ ಸೇವೆ ಮಾಡುತ್ತೇನೆ. ಕೇಂದ್ರದಲ್ಲಿ ನಮ್ಮದೇ ಸರ್ಕಾರವಿದೆ, ಯಾವುದೇ ಗ್ರಾಮದ ಕಾರ್ಯಕರ್ತರೂ ಆಹ್ವಾನಿಸಿದರೆ ಬರುವುದಾಗಿ ತಿಳಿಸಿದರು. ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಬೇವಿನಹಳ್ಳಿ ಕೆಂಚನಗೌಡ ಮಾತನಾಡಿ, ಪಕ್ಷದಲ್ಲಿ ಯಾವುದೇ ಗೊಂದಲವಿದ್ದರೂ ಪರಿಹರಿಸಿಕೊಂಡು, ನಮ್ಮ ಪಕ್ಷದ ಅಭ್ಯರ್ಥಿ ಗೆಲುವಿಗೆ ಶಿಸ್ತುಬದ್ಧವಾಗಿ ಕೆಲಸ ಮಾಡೋಣ ಎಂದು ಹೇಳಿದರು.

ಜಗಳೂರು ನೂತನ ಮಂಡಲ ಉಪಾಧ್ಯಕ್ಷ  ಪ್ರಶಾಂತ್ ಪಾಟೀಲ್ ಮಾತನಾಡಿ, ಕಾಂಗ್ರೆಸ್ ಪಕ್ಷ ಗೆಲುವಿನ ನಂತರ ಅರಸೀಕೆರೆ ಹೋಬಳಿ ನಿರ್ಲಕ್ಷ್ಯಕ್ಕೆ ಒಳಗಾಗಿದ್ದು, ಅಭಿವೃದ್ದಿ ಶೂನ್ಯವಾಗಿದೆ. ಅರಸೀಕೆರೆ ಬಸ್ ನಿಲ್ದಾಣ ಉದ್ಘಾಟನೆ ಆಗಿಲ್ಲ ಎಂದು ದೂರಿದರು. ಮಂಡಲ ಪದಾಧಿಕಾರಿಗಳ ಆಯ್ಕೆ : ಜಗಳೂರು ವಿದಾನಸಭಾ ಕ್ಷೇತ್ರದ ಅರಸೀಕೆರೆ ಹೋಬಳಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬೇವಿನಹಳ್ಳಿ ಕೆಂಚನಗೌಡ, ಜಗಳೂರು ಮಂಡಲ ಉಪಾಧ್ಯಕ್ಷರಾಗಿ ಪ್ರಶಾಂತ್ ಪಾಟೀಲ್, ಪ್ರಧಾನ ಕಾರ್ಯದರ್ಶಿ ಕಮ್ಮತ್ತಹಳ್ಳಿ ಮುರುಗೇಶ್, ಧರ್ಮನಾಯ್ಕ ಅವರನ್ನು ಆಯ್ಕೆ ಮಾಡಲಾಯಿತು.

ಮಾಜಿ ಪ್ರಧಾನ ಕಾರ್ಯದರ್ಶಿ ಕೆ.ಎಂ.ಮಂಜುನಾಥಯ್ಯ, ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಯರಬಳ್ಳಿ ಡಿ.ಸಿದ್ದಪ್ಪ, ಪುಣಬಗಟ್ಟಿ ಬಸವನಗೌಡ್ರು, ಶರಣಪ್ಪ, ಜಾತಪ್ಪ, ರಾಮಚಂದ್ರಪ್ಪ, ಯಶೋಧರ್ ನಾಯ್ಕ್, ಕಾವಲಹಳ್ಳಿ ಭರಮಣ್ಣ, ಸಿದ್ದಣ್ಣ, ಫಣಿಯಾಪುರದ ಲಿಂಗರಾಜ್, ಕೆಂಚನಗೌಡ, ಜಾತಪ್ಪ, ರಾಜನಾಯ್ಕ್, ಯುವರಾಜ್, ಭರಮನಗೌಡ, ಮಲ್ಲಿಕಾರ್ಜುನ, ಚಂದ್ರನಾಯ್ಕ ಇದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.