ವಿಜಯನಗರ : ನಗರದ ಜಿಲ್ಲಾ ಕ್ರೀಡಾಂಗಣ ಹತ್ತಿರವಿರುವ ಮುಖ್ಯ ನಗರ ಕೇಂದ್ರ ಗ್ರಂಥಾಲಯ ಪ್ರತಿ ಸೋಮವಾರ ಹಾಗೂ ಎರಡನೇ ಮಂಗಳವಾರ ಮತ್ತು ನಾಲ್ಕನೇ ಶನಿವಾರ ದಿನವು ಸಹ ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ಕಾರ್ಯನಿರ್ವಹಿಸಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಗ್ರಂಥಾಲಯವನ್ನು ಉಪಯೋಗಿಸಿಕೊಳ್ಳಬಹುದು ಎಂದು ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ವಿನೋದರಾಜ್ ಎಸ್. ತಿಳಿಸಿದ್ದಾರೆ.
Leave a comment