Home ವಿಶೇಷ ವರದಿಗಳು ಕಲ್ಯಾಣ ಕರ್ನಾಟಕದಲ್ಲೇ ಮೊದಲು: ಅತ್ಯಾಧುನಿಕ, ಸುಸಜ್ಜಿತ 100 ಹಾಸಿಗಗಳ ಆಸ್ಪತ್ರೆ ಜನನಿ ಯೋಗ & ಪ್ರಕೃತಿ ಚಿಕಿತ್ಸಾ ಕೇಂದ್ರ ಲೋಕಾರ್ಪಣೆಗೆ ಸಜ್ಜು
ವಿಶೇಷ ವರದಿಗಳು

ಕಲ್ಯಾಣ ಕರ್ನಾಟಕದಲ್ಲೇ ಮೊದಲು: ಅತ್ಯಾಧುನಿಕ, ಸುಸಜ್ಜಿತ 100 ಹಾಸಿಗಗಳ ಆಸ್ಪತ್ರೆ ಜನನಿ ಯೋಗ & ಪ್ರಕೃತಿ ಚಿಕಿತ್ಸಾ ಕೇಂದ್ರ ಲೋಕಾರ್ಪಣೆಗೆ ಸಜ್ಜು

Share
Janani Yoga & Nature Therapy Center Harapanahalli
Share

ಹರಪನಹಳ್ಳಿ: ಮಧ್ಯ ಕರ್ನಾಟಕದಲ್ಲೇ ಮೊಟ್ಟಮೊದಲ ಬಾರಿಗೆ 100 ಹಾಸಿಗೆಯ ಅತ್ಯಾಧುನಿಕ ಹಾಗೂ ಸುಸಜ್ಜಿತ ಜನನಿ ಯೋಗ & ಪ್ರಕೃತಿ ಚಿಕಿತ್ಸಾ ಕೇಂದ್ರ (ಆಸ್ಪತ್ರೆ) ಮತ್ತು ಸಂಶೋಧನಾ ಕೇಂದ್ರದ ಉದ್ಘಾಟನಾ ಸಮಾರಂಭ ನವೆಂಬರ್ 2ರಂದು ನಡೆಯಲಿದ್ದು, 3ರಿಂದ ಸಾರ್ವಜನಿಕ ಸೇವೆಗೆ ಮುಕ್ತವಾಗಲಿದೆ.

ಹರಪನಹಳ್ಳಿಯಿಂದ ಕೇವಲ ಒಂಬತ್ತು ಕಿಲೋಮೀಟರ್ ದೂರದ ಕೊಮಾರನಹಳ್ಳಿಯ ಹಚ್ಚ ಹಸಿರಿನ ಪ್ರಶಾಂತ ಪರಿಸರದಲ್ಲಿ ಆರೂವರೆ ಎಕರೆ ವಿಶಾಲ ಪ್ರದೇಶದಲ್ಲಿ ವ್ಯಾಪಿಸಿರುವ ಜನನಿ ಆಸ್ಪತ್ರೆ, ಕಲ್ಯಾಣ ಕರ್ನಾಟಕದ ಸಾಮಾಜಿಕ ಸ್ವಾಸ್ಥ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಕ ಎನಿಸಲಿದೆ ಎಂದು ಜಯ ಎಜ್ಯುಕೇಶನಲ್ ಟ್ರಸ್ಟ್ ಅಧ್ಯಕ್ಷೆ ಡಾ.ಜಯಶ್ರೀ ಪಾಟೀಲ್ ಮತ್ತ ಕಾರ್ಯದರ್ಶಿ ಡಾ.ಮಹೇಶ್ ಎಸ್.ಎನ್ ಹೇಳಿದ್ದಾರೆ.

ಈ ಭಾಗದ ಜನತೆ ಉತ್ತಮ ಆರೋಗ್ಯ ಸೌಲಭ್ಯವನ್ನು ಅರಸಿ ದೂರದ ಊರುಗಳಿಗೆ ಹೋಗುವುದನ್ನು ತಪ್ಪಿಸಿ, ಕೈಗೆಟುಕುವ ದರದಲ್ಲಿ ಮನೆಬಾಗಿಲಲ್ಲೇ ಅತ್ಯಾಧುನಿಕ ಸೌಲಭ್ಯಗಳು ಲಭಿಸುವಂತಾಗಬೇಕು ಎಂಬ ಉದ್ದೇಶದಿಂದ ಈ ಸೌಲಭ್ಯ ಅಭಿವೃದ್ಧಿಪಡಿಸಲಾಗಿದೆ.
ನವೆಂಬರ್ 2ರಂದು ನಡೆಯುವ ಉದ್ಘಾಟನಾ ಸಮಾರಂಭದ ಸಾನ್ನಿಧ್ಯವನ್ನು ಶ್ರೀಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರರಾದ ಶ್ರೀ ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸುವರು. ಹರಪನಹಳ್ಳಿ ತೆಗ್ಗಿನಮಠ ಸಂಸ್ಥಾನದ ಪಟ್ಟಾಧ್ಯಕ್ಷ ಶ್ರೀ ವರದಸದ್ಯೋಜಾತ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸುವರು ಎಂದು ಮುಖ್ಯ ವೈದ್ಯಾಧಿಕಾರಿ ಡಾ.ರಾಜೇಶ್ ಪಾದೇಕಲ್ ವಿವರಿಸಿದ್ದಾರೆ.

ಕಾಯಿಲೆ ಬಂದ ಬಳಿಕ ಚಿಕಿತ್ಸೆ ಪಡೆಯುವ ಬದಲು ರೋಗಗಳು ಬಾರದಂತೆ ನಮ್ಮ ದೇಹಸ್ವಾಸ್ಥ್ಯವನ್ನು ಕಾಪಾಡಿಕೊಳ್ಳುವುದು ಇಂದಿನ ಅಗತ್ಯವಾಗಿದ್ದು, ಸುಸ್ಥಿರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಜತೆಗೆ ಔಷಧರಹಿತವಾಗಿ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಆರೋಗ್ಯ ಸಾಧಕರಿಗೆ ಈ ಅತ್ಯಾಧುನಿಕ ವ್ಯವಸ್ಥೆ ವರದಾನ ಎನಿಸಲಿದೆ.

ಪ್ರಕೃತಿಯ ಜ್ಞಾನ ಮತ್ತು ಆಧುನಿಕ ಆರೈಕೆಯ ಸಮನ್ವಯದೊಂದಿಗೆ ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಉನ್ನತಿಗಾಗಿ ಸಲಕ ಸೌಕರ್ಯಗಳನ್ನು ಈ ಕೇಂದ್ರ ಒಳಗೊಂಡಿರುತ್ತದೆ. ಹಿಪ್ ಬಾತ್, ಸ್ಪೈನಲ್ ಬಾತ್, ಎನಿಮಾ, ಕೊಲೊನ್ ಹೈಡ್ರೊಥೆರಪಿ, ಅಂಡರ್‍ವಾಟರ್ ಮಸಾಜ್, ಸೋನಾ ಮತ್ತು ಸ್ಟೀಮ್‍ಬಾತ್, ಡುಶ್ ಪ್ಯಾಕ್, ಮ್ಯಾಗ್ನೆಟೊ ಥೆರಪಿ, ಫಿಜಿಯೋಥೆರಪಿ, ಅಕ್ಯುಪಂಕ್ಚರ್ & ಅಕ್ಯುಪ್ರೆಶರ್, ವ್ಯಾಯಾಮ ಚಿಕಿತ್ಸೆ, ಆಹಾರ ಚಿಕಿತ್ಸೆ, ಮಣ್ಣು ಚಿಕಿತ್ಸೆಯಂಥ ಸೌಲಭ್ಯಗಳು ಲಭ್ಯವಿದ್ದು, ವಿಶಾಲವಾದ, ಗಾಳಿ ಬೆಳಕು ಸಮೃದ್ಧವಾದ ಯೋಗ ಸಭಾಂಗಣ, ಸ್ವಚ್ಛ ಮತ್ತು ಸುರಕ್ಷಿತ ಕ್ರಿಯಾ ಕೊಠಡಿಗಳು ಇರುತ್ತವೆ ಎಂದು ಹೇಳಿದ್ದಾರೆ.

ಸಮಗ್ರ ಹಾಗೂ ಔಷಧರಹಿತ ಚಿಕಿತ್ಸೆ, ಅನುಭವ ಸಂಪನ್ನ ವೈದ್ಯರು ಮತ್ತು ಚಿಕಿತ್ಸಕರ ಸೇವೆ, ವೈಯಕ್ತಿಕ ಚಿಕಿತ್ಸಾ ಯೋಜನೆಗಳು, ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಚಿಕಿತ್ಸಾ ವ್ಯವಸ್ಥೆ, ಚೇತರಿಕೆ ಮತ್ತು ಪುನಶ್ಚೇತನಕ್ಕೆ ಪೂರಕ ಪ್ರಶಾಂತ ವಾತಾವರಣದಂಥ ಹಲವು ವೈಶಿಷ್ಟ್ಯಗಳನ್ನು ಹೊಂದಿದ್ದು, ಕೇಂದ್ರಕ್ಕೆ ಆಗಮಿಸುವ ಅತಿಥಿಗಳಿಗೆ ಪಿಕಪ್ ಮತ್ತು ಡ್ರಾಪ್ ವ್ಯವಸ್ಥೆಯೂ ಇರುತ್ತದೆ. ಸಾಮಾನ್ಯ ವಾರ್ಡ್, ವಿಶೇಷ ಕೊಠಡಿ ಮತ್ತು ಸುಸಜ್ಜಿತ ಕಾಟೇಜ್ ಹೀಗೆ ವೈವಿಧ್ಯಮಯ ಶ್ರೇಣಿಯ ವ್ಯವಸ್ಥೆಯಲ್ಲಿ ಅತಿಥಿಗಳು ತಮ್ಮ ಆದ್ಯತೆಯನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ವಿವರಗಳಿಗೆ: 93530-63097/ 8317363097 ಸಂಪರ್ಕಿಸಬಹುದು.

Share

Leave a comment

Leave a Reply

Your email address will not be published. Required fields are marked *

Related Articles
darmastala yojane
Homeರಾಜಕೀಯವಿಶೇಷ ವರದಿಗಳು

ದೇವರ ತಿಮ್ಲಾಪುರದಲ್ಲಿ ನಡೆದ ಮದ್ಯವರ್ಜನ ಶಿಬಿರದ ಮಾಹಿತಿ ಇಲ್ಲಿದೆ

ಹರಪನಹಳ್ಳಿ :  "ಇದು ಕೇವಲ ಶಿಬಿರವಲ್ಲ, ಕುಟುಂಬಗಳನ್ನು ಕಟ್ಟುವ ಹಾಗೂ ಹೆಣ್ಣುಮಕ್ಕಳ ಕಣ್ಣೀರು ಒರೆಸುವ ಪವಿತ್ರ ಕಾರ್ಯ. ಅಂಧಕಾರದಲ್ಲಿದ್ದ ಬಾಳಿಗೆ ಬೆಳಕು ನೀಡುವ ಈ ಕಾರ್ಯ ಸಮಾಜಕ್ಕೆ ಮಾದರಿ ಎಂದು ನೀಲಗುಂದ ಗುಡ್ಡದ ವಿರಕ್ತಮಠದ ಚೆನ್ನಬಸವ ಶಿವಯೋಗಿ ಸ್ವಾಮೀಜಿ ತಿಳಿಸಿದರು. ನಗರದ ಹೊರವಲಯದ ದೇವರ ತಿಮ್ಮಾಲಪುರ ಗ್ರಾಮದ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ಸಮುದಾಯ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ '2060ನೇ ಮದ್ಯವರ್ಜನ ಶಿಬಿರ' ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.ಸಂಸಾರದಲ್ಲಿ ಸರಸ, ವಿರಸಗಳು ಬಂದು...

 ತಿಪ್ಪೆಹಳ್ಳಿ :  ‘ಮ್ಯಾಸ ನಾಯಕರ ಚಿನ್ನಹಗರಿ ಉತ್ಸವ'  ಜ.15ಕ್ಕೆ ನಿಗಧಿ
ವಿಶೇಷ ವರದಿಗಳು

 ತಿಪ್ಪೆಹಳ್ಳಿ :  ‘ಮ್ಯಾಸ ನಾಯಕರ ಚಿನ್ನಹಗರಿ ಉತ್ಸವ’  ಜ.15ಕ್ಕೆ ನಿಗಧಿ

ಹರಪನಹಳ್ಳಿ : ಕೂಡ್ಲಿಗಿ ತಾಲ್ಲೂಕು ಪೂಜಾರಹಳ್ಳಿ ಪಂಚಾಯಿತಿ ವ್ಯಾಪ್ತಿಯ ತಿಪ್ಪೆಹಳ್ಳಿ ಹತ್ತಿರ ಹರಿಯುವ ಚಿನ್ನಹಗರಿ ನದಿ...

ಡಾ.ಅಂಜಲಿ ನಿಂಬಾಳ್ಕರ
ವಿಶೇಷ ವರದಿಗಳು

ಡಾ.ಅಂಜಲಿ ನಿಂಬಾಳ್ಕರ ಯಾರು ಗೊತ್ತೆ ?

ಗೋವಾ-ಹೊಸದಿಲ್ಲಿ ನಡುವಿನ ವಿಮಾನ ಪ್ರಯಾಣದ ವೇಳೆ ಖಾನಾಪುರದ ಮಾಜಿ ಶಾಸಕಿಯಾದ ಡಾ.ಅಂಜಲಿ ನಿಂಬಾಳ್ಕರ್ ಅವರು ಅಮೇರಿಕಾದ...

ಮಧು ಬಂಗಾರಪ್ಪ?
ವಿಶೇಷ ವರದಿಗಳು

words ಟಾಕ್‌ : ಸರ್ಕಾರಿ ಶಾಲೆಗಳನ್ನು ಮುಚ್ಚಲು ಅಣಿಯಾದರೇ ಮಧು ಬಂಗಾರಪ್ಪ?

ಇಂಥದ್ದೊಂದು ಧಾವಂತದ ಸುದ್ದಿ ಶಿಕ್ಷಣ ಇಲಾಖೆ ಮೂಲಗಳಿಂದ ರಾಜ್ಯವ್ಯಾಪಿ ಪಸರಿಸುತ್ತಿದೆ. ಇದನ್ನು ಕೇಳಿಸಿಕೊಂಡು ಈಗಾಗಲೇ ಶಿಕ್ಷಣವನ್ನು...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.