Home ಕಂಚಿಕೇರಿ : ಹಳೆಯ ವಿದ್ಯಾರ್ಥಿಗಳಿಂದ ಗುರುಗಳಿಗೆ ಶೆಲ್ಯೂಟ್
Homeಸುದ್ದಿಗಳು

ಕಂಚಿಕೇರಿ : ಹಳೆಯ ವಿದ್ಯಾರ್ಥಿಗಳಿಂದ ಗುರುಗಳಿಗೆ ಶೆಲ್ಯೂಟ್

Share
ಕಂಚಿಕೇರಿ : ಹಳೆಯ ವಿದ್ಯಾರ್ಥಿಗಳಿಂದ ಗುರುಗಳಿಗೆ ಶೆಲ್ಯೂಟ್
Share

ಹರಪನಹಳ್ಳಿ  : ತಾಲ್ಲೂಕಿನ ಕಂಚಿಕೇರಿ ಗ್ರಾಮದಲ್ಲಿ  ಜರುಗಿದ ಸ್ನೇಹ ಸಮ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳು ಕಲಿಸಿದ ಶಿಕ್ಷಕರಿಗೆ ಶೆಲ್ಯೂಟ್ ಮಾಡಿ ಗುರು ನಮನ ಸಲ್ಲಿಸಿ, ಹಳೆಯ ನೆನಪು ಮೆಲುಕು ಹಾಕಿದರು.

ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 1996-97ನೇ ಸಾಲಿನ 7ನೇ ತರಗತಿ ವಿದ್ಯಾರ್ಥಿಗಳು, ಸಿದ್ದೇಶ್ವರ ವಸತಿ ಪ್ರೌಢಶಾಲೆಯ 2001ನೇ ಸಾಲಿನ 10ನೇ ತರಗತಿಯ ಸಹಪಾಠಿಗಳು ಸಮಾಗಮಗೊಂಡು, ಅಕ್ಷರ ಕಲಿಸಿದ ಶಿಕ್ಷಕರಿಗೆ ಸನ್ಮಾನಿಸಿ, ಅವರಿಗೆ ಶೆಲ್ಯೂಟ್ ಮಾಡುವ ಮೂಲಕ ಗಮನ ಸೆಳೆದರು.

ಪ್ರೌಢಶಾಲೆಯ ನಿವೃತ್ತ ಶಿಕ್ಷಕ ಡಿ.ವಿ.ತಿಮ್ಮಪ್ಪ, ಚನ್ನಬಸಪ್ಪ ಅವರು ಮಾತನಾಡಿ, ವಿದ್ಯಾರ್ಥಿಗಳು ಉನ್ನತ ಹುದ್ದೆ ಅಲಂಕರಿಸಿದಾಗ, ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಿದಾಗ ಮಾತ್ರ ಅಕ್ಷರ ಹೇಳಿಕೊಟ್ಟ ನನ್ನಂತ ಸಾವಿರಾರು ಶಿಕ್ಷಕರ ಕೆಲಸ ಸಾರ್ಥಕ ಎನಿಸುತ್ತದೆ. ಒಂದಿಲ್ಲೊಂದು ಹುದ್ದೆ, ಕೆಲಸ ಮಾಡುತ್ತಿರುವ ವಿದ್ಯಾರ್ಥಿಗಳ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು.

ಹಳೆಯ ವಿದ್ಯಾರ್ಥಿ ಶಂಕರನಾಯ್ಕ ಮಾತನಾಡಿ, ಇಲ್ಲಿ ಸೇರಿರುವ ಪ್ರತಿಯೊಬ್ಬರು ತಮಗೆ ಅಕ್ಷರ ಕಲಿಸಿದ ಗುರುಗಳಿಗೆ ಕೃತಜ್ಞತೆ ಸಲ್ಲಿಸಲು ಬಂದಿದ್ದಾರೆ. ಈ ಕಾರ್ಯಕ್ರಮ ಭಾವನೆಗಳ ಸಂಗಮ ಎಂದು ಬಣ್ಣಿಸಿದರು. ಹಳೆಯ ವಿದ್ಯಾರ್ಥಿ ಪಟ್ನಾಮದ ವೆಂಕಟೇಶ್ ಮಾತನಾಡಿ, ಸಹಪಾಠಿಗಳು ಒಂದೆಡೆ ಸೇರಿ ಗುರುಗಳಿಗೆ ವಂದಿಸುವುದರಿಂದ ಸಂಬಂಧಗಳು ಗಟ್ಟಿಗೊಳ್ಳುತ್ತವೆ. ಜೀವನದಲ್ಲಿ ಸರಿಯಾದ ಮಾರ್ಗ ಹಾಕಿಕೊಟ್ಟ ಗುರುವಿನ ಕೆಲಸ ಶ್ರೇಷ್ಠವಾಗಿದೆ ಎಂದರು. ಶಿಕ್ಷಕರಾದ ಕುಬೇರಪ್ಪ, ವೆಂಕಟೇಶಮೂರ್ತಿ, ತಿಮ್ಮಪ್ಪ, ಗುರುಸಿದ್ದಪ್ಪ, ಚನ್ನಬಸಪ್ಪ, ಜಗದೀಶ, ಸಿ.ಬಿ.ಬಸವರಾಜಪ್ಪ, ಸಾರಥಿ ಹನುಮಂತಪ್ಪ, ಎಂ.ಕುಸುಮ, ಬಾರಿಕರ ಹನುಮಕ್ಕ, ಕೆ.ಮಹಾದೇವಿ, ಹಳ್ಳಿ ವನಜಾಕ್ಷಿ , ಜ್ಯೋತಿ, ಶಂಕರ, ಯುವರಾಜ್ ಇದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಾಂಗ್ರೆಸ್ ಮುಖಂಡ ಶಶಿಧರ ಪೂಜಾರ ಜನ್ಮದಿನಾಚರಣೆ

ಹರಪನಹಳ್ಳಿ: ಇಲ್ಲಿನ ತಾಲ್ಲೂಕು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಶಶಿಧರ ಪೂಜಾರ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು...

Homeಸುದ್ದಿಗಳು

ರೋಗನಿರೋಧಕ ಶಕ್ತಿ ಹೆಚ್ಚಿಸಲು ತಾಯಿಯ ಎದೆಹಾಲು ಅತ್ಯಗತ್ಯ: ಡಿಹೆಚ್‌ಒ ಡಾ.ಟಿ.ಲಿಂಗರಾಜು

ವಿಜಯನಗರ (ಹೊಸಪೇಟೆ) : ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಹುಮುಖ್ಯವಾಗಿದೆ....

Homeಸುದ್ದಿಗಳು

ಸಂಪುಟ ವಿಸ್ತರಣೆ ಕೌತುಕಕ್ಕೆ ಇಂದು ತೆರೆ: ಸಂಜೆ ರಾಜಭವನದಲ್ಲಿ 20 ನೂತನ ಸಚಿವರ ಪದಗ್ರಹಣ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ...

Homeಶಿಕ್ಷಣ

ಬಿ.ಐ.ಇ.ಟಿ. ಯಲ್ಲಿ ನೈಲಿಟ್‌ನ 90 ಗಂಟೆಗಳ ‘ಚಿಪ್‌ಕ್ರಾಫ್ಟ್’ ಸೆಮಿಕಂಡಕ್ಟರ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ : ಬಾಪೂಜಿ ಇಂಜಿನಿಯರಿಂಗ್  ಮತ್ತು ತಾಂತ್ರಿಕ ಮಹಾವಿದ್ಯಾಲಯ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.