Home ಸುದ್ದಿಗಳು ಕಲೆ ಹರಪನಹಳ್ಳಿ: ಅರಸೀಕೆರೆಯಲ್ಲಿ  ‘ಸಂಗ್ಯಾ ಬಾಳ್ಯ’ ನಾಟಕ 
ಕಲೆಮನರಂಜನೆ

ಹರಪನಹಳ್ಳಿ: ಅರಸೀಕೆರೆಯಲ್ಲಿ  ‘ಸಂಗ್ಯಾ ಬಾಳ್ಯ’ ನಾಟಕ 

Share
ಹರಪನಹಳ್ಳಿ: ಅರಸೀಕೆರೆಯಲ್ಲಿ  'ಸಂಗ್ಯಾ ಬಾಳ್ಯ' ನಾಟಕ 
Share

ಹರಪನಹಳ್ಳಿ: ಇತ್ತೀಚಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ಅಬ್ಬರದಿಂದಾಗಿ ಗ್ರಾಮೀಣ ಭಾಗದ ನಾಟಕ ಕಲೆಗಳು ಮರೆಯಾಗುತ್ತಿವೆ. ಇವುಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಅರಸೀಕೆರೆ ಗ್ರಾಮದ ಕೋಲ ಶಾಂತೇಶ್ವರ ಮಠದ ಶ್ರೀ ಶಾಂತಲಿಂಗ ದೇಶಿಕೇಂದ್ರ ಮಹಾಸ್ವಾಮಿಗಳು ತಿಳಿಸಿದರು.

ತಾಲೂಕಿನ ಅರಸೀಕೆರೆ ಗ್ರಾಮದ ಕೋಲ ಶಾಂತೇಶ್ವರ ರಥೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

  • ರಂಗಭೂಮಿಗೆ ಪ್ರೋತ್ಸಾಹ : ರಥೋತ್ಸವದ ಅಂಗವಾಗಿ ಮಠದಿಂದ ಪ್ರತಿವರ್ಷ ನಾಟಕ, ರಸಮಂಜರಿ ಹಾಗೂ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ.

  • ಸಂಗ್ಯಾ ಬಾಳ್ಯ ಪ್ರದರ್ಶನ : ಪ್ರಸಿದ್ಧ ಜಾನಪದ ನಾಟಕ ‘ಸಂಗ್ಯಾ ಬಾಳ್ಯ’  ಪ್ರದರ್ಶನಗೊಂಡು ಜನರ ಮನ ಗೆದ್ದಿತು. ಈ ಹಿಂದೆ ದಿವಂಗತ ಎಂ.ಪಿ. ಪ್ರಕಾಶ್ ಅವರು ಈ ನಾಟಕದ ಮೂಲಕ ರಂಗಭೂಮಿಗೆ ನೀಡಿದ ಕೊಡುಗೆಯನ್ನು ಶ್ರೀಗಳು ಸ್ಮರಿಸಿದರು.

  • ಕಲಾವಿದರಿಗೆ ಗೌರವ: ಕಲ್ಯಾಣ ಕರ್ನಾಟಕ ಒಕ್ಕೂಟದ ಜಿಲ್ಲಾಧ್ಯಕ್ಷ ಡಾ. ರಮೇಶ್ ಅಂಚಿನಮನೆ ಮಾತನಾಡಿ, ಜಿಲ್ಲೆಯ ಹಿರಿಯ ಕಲಾವಿದರನ್ನು ಗುರುತಿಸಿ ಹಂಪಿ ವಿವಿಯಲ್ಲಿ ಹಾಗೂ ಏಪ್ರಿಲ್ 27ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಸನ್ಮಾನ ಮಾಡಲಾಗುವುದು ಎಂದು ಮಾಹಿತಿ ನೀಡಿದರು. ಹಗರಿಬೊಮ್ಮನಹಳ್ಳಿ ತಾಲ್ಲೂಕು ಅಧ್ಯಕ್ಷ ಡಾ.ಉಮಾಶಂಕರ್, ಹರಪನಹಳ್ಳಿ ತಾಲ್ಲೂಕು ಅಧ್ಯಕ್ಷ ನಿಚ್ಚವ್ವನಹಳ್ಳಿ ಭೀಮಪ್ಪ, ಕೆ.ಬಿ.ಷಣ್ಮುಖಪ್ಪ ಭಾಗವತರು, ಎಚ್.ಪರಶುರಾಮಪ್ಪ, ಕೆರೆಗುಡಿಹಳ್ಳಿ ಹಾಲೇಶ್, ನೂರುಲ್ಲಾ ಸಾಹೇಬ್, ಕೆಂಚಪ್ಪ, ನಾಗಮ್ಮ ಮಾಲವಿ, ಚಂದ್ರಪ್ಪ, ಮಂಜಪ್ಪ, ಎ.ಬಿ.ಚಿದಾನಂದಗೌಡ, ಡಿ.ರಂಗಪ್ಪ, ಹೆಗ್ಗಪ್ಪ, ಹನುಮಂತಪ್ಪ ಇತರರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
nivrutta
Homeಕಲೆಕ್ರೀಡೆಶಿಕ್ಷಣ

ನೌಕರರ ಹಿತರಕ್ಷಣೆಗೆ ಸಂಘ ಸದಾ ಬದ್ಧ: ಎನ್.ಜಿ. ಮನೋಹರ ಭರವಸೆ

ಹರಪನಹಳ್ಳಿ: "ಸರ್ಕಾರಿ ನೌಕರರಿಗೆ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದಂತೆ ನೋಡಿಕೊಳ್ಳಲು ರಾಜ್ಯ ನೌಕರರ ಸಂಘ ಹಾಗೂ ತಾಲೂಕು ಘಟಕವು ಸದಾ ನಿಮ್ಮ ಬೆನ್ನೆಲುಬಾಗಿ ನಿಲ್ಲಲಿದೆ" ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾದ ಎನ್.ಜಿ. ಮನೋಹರ ಅವರು ಭರವಸೆ ನೀಡಿದರು. ಇಲ್ಲಿನ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಭಾನುವಾರ ತಾಲೂಕು ಘಟಕದ ವತಿಯಿಂದ ಆಯೋಜಿಸಲಾಗಿದ್ದ ವಿವಿಧ ಇಲಾಖೆಗಳ ನಿವೃತ್ತ ನೌಕರರು, ನಿವೃತ್ತ ಶಿಕ್ಷಕರು ಹಾಗೂ ಬಡ್ತಿ ಹೊಂದಿದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. "ಶಿಕ್ಷಕರು ವೃತ್ತಿಯಿಂದ ನಿವೃತ್ತರಾಗುತ್ತಿದ್ದಾರೆಯೇ ವಿನಃ ಅವರ ಅನುಭವದಿಂದಲ್ಲ. ನಿವೃತ್ತಿಯ ನಂತರವೂ ನಾವು ಮತ್ತು ನಿವೃತ್ತ ನೌಕರರ ಸಂಘ ಸದಾ ನಿಮ್ಮ ಜೊತೆಗಿರುತ್ತೇವೆ. ನಿವೃತ್ತ ಜೀವನದಲ್ಲಿ ಪ್ರತಿಯೊಬ್ಬರೂ ಪ್ರತಿದಿನ ವ್ಯಾಯಾಮ, ಪುಸ್ತಕ ಓದುವುದು, ತೋಟಗಾರಿಕೆ, ಸಂಗೀತ, ಕಲೆ, ಯೋಗ ಅಥವಾ ವಾಕಿಂಗ್ ಮಾಡುವ ಮೂಲಕ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬೇಕು" ಎಂದು ಮನೋಹರ ಅವರು ಕಿವಿಮಾತು ಹೇಳಿದರು. ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ಲತಾ ಟಿ.ಎಚ್.ಎಂ ಮಾತನಾಡಿ, "ಮಹಿಳಾ ನೌಕರರಿಗೆ ಋತುಚಕ್ರದ ರಜೆ ಘೋಷಿಸುವಂತೆ ಸರ್ಕಾರಕ್ಕೆ ನಮ್ಮ ಸಂಘಟನೆಯು ಮೊದಲೇ ಧ್ವನಿಗೂಡಿಸಿ ಒತ್ತಾಯಿಸಿತ್ತು. ಹರಪನಹಳ್ಳಿ ತಾಲೂಕಿನಲ್ಲಿ ಈ ಹಿಂದೆ ನೌಕರರ ಪರವಾಗಿ ಇಂತಹ ಸಕ್ರಿಯ ಕಾರ್ಯಕ್ರಮಗಳು ನಡೆದಿರಲಿಲ್ಲ. ಆದರೆ ಪ್ರಸ್ತುತ ಅಧ್ಯಕ್ಷರಾದ ಮನೋಹರ್ ಅವರು ಹತ್ತಾರು ಜನಪರ ಕಾರ್ಯಕ್ರಮಗಳ ಮೂಲಕ ತಾಲೂಕು ಸಂಘಟನೆಯನ್ನು ಇಡೀ ರಾಜ್ಯಕ್ಕೆ ಮಾದರಿಯಾಗಿಸಿದ್ದಾರೆ. ಸಂಘಟನೆಗಳು ವೃತ್ತಿಯ ಜೊತೆಗೆ ಪ್ರವೃತ್ತಿಯಾಗಬೇಕೇ ಹೊರತು, ಸಂಘಟನೆಯೇ ವೃತ್ತಿಯಾಗಬಾರದು. ನಾವೆಲ್ಲರೂ ಸೇರಿ ತಾಲೂಕಿನ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸೋಣ" ಎಂದರು. ಮಂಜುನಾಥ ಪೂಜಾರ್ ಅವರು ಮಾತನಾಡಿ, "ಶಾಲೆಗಳಲ್ಲಿ ೩೦ ವರ್ಷಗಳಿಗೂ ಹೆಚ್ಚು ಕಾಲ ಸುದೀರ್ಘ ಸೇವೆ ಸಲ್ಲಿಸಿ, ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿರುವ ಶಿಕ್ಷಕರ ಸಮಯಪಾಲನೆ, ಕರ್ತವ್ಯ ನಿಷ್ಠೆ ಮತ್ತು ಮಕ್ಕಳೊಂದಿಗಿನ ಮಧುರ ಬಾಂಧವ್ಯ ನಿಜಕ್ಕೂ ಶ್ಲಾಘನೀಯ. ಇವರ ನಿವೃತ್ತ ಜೀವನ ಸುಖಕರವಾಗಿರಲಿ" ಎಂದು ಹಾರೈಸಿದರು. ಬಿಇಒ ಕಚೇರಿಯ ಇಸಿಒ ವೀರೇಶ್ ಮಾತನಾಡಿ, ನಿವೃತ್ತ ಹಾಗೂ ಬಡ್ತಿ ಪಡೆದ ಮುಖ್ಯ ಶಿಕ್ಷಕರನ್ನು ಕರೆಸಿ ಗೌರವಿಸುತ್ತಿರುವ ನೌಕರರ ಸಂಘದ ಕಾರ್ಯ ಸ್ತುತ್ಯರ್ಹ ಎಂದರು. ಶಿಕ್ಷಕ ಬಿ. ಆಂಜನೇಯ ಅವರೂ ಸಹ ವೇದಿಕೆಯಲ್ಲಿ ಅನಿಸಿಕೆಗಳನ್ನು ಹಂಚಿಕೊಂಡರು. ಇದೇ ವೇಳೆ ನಿವೃತ್ತ ಶಿಕ್ಷಕ ಸಲಾಂ ಅವರು "ಪ್ರೀತಿಯ ಗಾಳಿ ಬೀಸುತ್ತಿದೆ..." ಎಂಬ ಗೀತೆಯನ್ನು ಹಾಡಿ ನೆರೆದಿದ್ದವರನ್ನು ರಂಜಿಸಿದರು.  ಸರ್ಕಾರಿ ನೌಕರರ ಸಂಘದ ರಾಜ್ಯ...

RAVICHANDRAN
Homeಕಲೆಮನರಂಜನೆ

 ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಸಿನಿಮಾ ರಾಯಭಾರಿ ವರ್ಣರಂಜಿತ, ವರ್ಣಾತಿತ ಕಲಾವಿದ

ದಾವಣಗೆರೆ: ಮನುಷ್ಯನಿಗೆ ನೆಮ್ಮದಿ ಕೊಡುವುದು ತಂದೆಯ ಹೆಗಲು, ನೆಮ್ಮದಿಯನ್ನು ಹೆಚ್ಚು ಮಾಡುವುದು ತಾಯಿಯ ಮಡಿಲು.  ರವಿಚಂದ್ರನ್...

chigateri-folk-artists-awareness-meeting
ಕಲೆಮನರಂಜನೆ

ಚಿಗಟೇರಿಯಲ್ಲಿ ಜಾನಪದ ಕಲಾವಿದರ ಜಾಗೃತಿ ಸಭೆ

ಹರಪನಹಳ್ಳಿ: ‘ಗ್ರಾಮೀಣ ಕಲಾವಿದರು ಎಂದರೆ ಹಳ್ಳಿಯ ನಾಡಿಮಿಡಿತವಿದ್ದಂತೆ. ಕಲೆ, ಸಾಹಿತ್ಯ, ಸಂಗೀತ ಮತ್ತು ನಾಟಕಗಳು ಕೇವಲ...

ಕ್ರೀಡೆಮನರಂಜನೆಸುದ್ದಿಗಳು

ಕೆಂಪು ಮಣ್ಣಿನ ಕಣದಲ್ಲಿ ಪೈಲ್ವಾನರ ಜಿದ್ದಾಜಿದ್ದಿ

ವಿಜಯನಗರ: ಐತಿಹಾಸಿಕ ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪಿಸುವಂತೆ, ಹಂಪಿಯ ಹೊಸಮಲಪನಗುಡಿಯ ವಿದ್ಯಾರಣ್ಯ ಪೀಠದ ಮೈದಾನದಲ್ಲಿ ಶನಿವಾರ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.