Home ಸುದ್ದಿಗಳು ಹಸ್ತಪ್ರತಿಗಳ ಸಂರಕ್ಷಣೆಗೆ ಸಹಕರಿಸಿ: ಡಿಸಿ ಕವಿತಾ ಎಸ್. ಮನ್ನಿಕೇರಿ
ಸುದ್ದಿಗಳು

ಹಸ್ತಪ್ರತಿಗಳ ಸಂರಕ್ಷಣೆಗೆ ಸಹಕರಿಸಿ: ಡಿಸಿ ಕವಿತಾ ಎಸ್. ಮನ್ನಿಕೇರಿ

Share
Share

ವಿಜಯನಗರ (ಹೊಸಪೇಟೆ) : ಶತಮಾನಗಳ ಇತಿಹಾಸವಿರುವ ಹಳೆಯ ಕೈಬರಹದ ಪಠ್ಯಗಳು, ಹಸ್ತಪ್ರತಿ ಮತ್ತು ದಾಖಲೆಗಳನ್ನು ಭಾರತದ ಜ್ಞಾನ ಪರಪಂರೆಯನ್ನು ಆದುನಿಕ ತಂತ್ರಜ್ಞಾನದ ಮೂಲಕ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ‘ಜ್ಞಾನ ಭಾರತಂ ಮಿಷನ್’ ಯೋಜನೆಗೆ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಹಾಗೂ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ತಿಳಿಸಿದ್ದಾರೆ.

ಈ ಯೋಜನೆಯಡಿ ಜಿಲ್ಲೆಯಾದ್ಯಂತ ಇರುವ ಪ್ರಾಚೀನ ಹಸ್ತಪ್ರತಿಗಳು, ಕೈಬರಹದ ಪಠ್ಯಗಳು ಮತ್ತು ಐತಿಹಾಸಿಕ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ ಶಾಶ್ವತವಾಗಿ ಸಂರಕ್ಷಿಸುವ ಗುರಿ ಹೊಂದಲಾಗಿದೆ. ದೇಶದ ಅಮೂಲ್ಯ ಜ್ಞಾನ ಸಂಪತ್ತನ್ನು ಒಂದೇ ವೇದಿಕೆಯಡಿ ತಂದು ‘ರಾಷ್ಟ್ರೀಯ ಹಸ್ತಪ್ರತಿ ಭಂಡಾರ’ ನಿರ್ಮಿಸುವುದು ಈ ಮಿಷನ್‌ನ ಮುಖ್ಯ ಉದ್ದೇಶ. ವಿಶೇಷ ಮೊಬೈಲ್ ಅಪ್ಲಿಕೇಶನ್ ಮೂಲಕ ಹಸ್ತಪ್ರತಿಗಳ ಮಾಹಿತಿಯನ್ನು ಅಪ್ಲೋಡ್ ಮಾಡಲಾಗುತ್ತದೆ. ಕರ್ನಾಟಕದಲ್ಲಿ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯು ಇದರ ನೋಡಲ್ ಇಲಾಖೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯವು ಸಮೀಕ್ಷೆಯ ಕ್ಲಸ್ಟರ್ ಕೇಂದ್ರವಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು, ಈ ಸಮಿತಿಯು ಮಠ, ದೇವಾಲಯ, ಗ್ರಂಥಾಲಯ, ಶೈಕ್ಷಣಿಕ ಸಂಸ್ಥೆ ಹಾಗೂ ಖಾಸಗಿ ವ್ಯಕ್ತಿಗಳ ಬಳಿ ಇರುವ ಹಸ್ತಪ್ರತಿ ಪತ್ತೆ ಹಚ್ಚುವ ಜವಾಬ್ದಾರಿ ಹೊತ್ತಿದೆ. ಸಮೀಕ್ಷೆಯು ಸಂಪೂರ್ಣವಾಗಿ ತಂತ್ರಜ್ಞಾನ ಆಧಾರಿತವಾಗಿದ್ದು ಹಸ್ತಪ್ರತಿಗಳ ಜಿಯೋಟ್ಯಾಗಿಂಗ್ ಮತ್ತು ಮೆಟಾಡೇಟಾ ದಾಖಲೀಕರಣ ಮಾಡಲಾಗುತ್ತಿದೆ. ರಾಜ್ಯದಲ್ಲಿ ಈಗಾಗಲೇ ಈ ಕಾರ್ಯವು ವೇಗವಾಗಿ ನಡೆಯುತ್ತಿದ್ದು, ಈವರೆಗೆ 17 ಜಿಲ್ಲೆಗಳಲ್ಲಿ ಏ.27ರವರೆಗೆ ಒಟ್ಟು 2,13,255 ಹಸ್ತಪ್ರತಿಗಳ ಮಾಹಿತಿ ಸಂಗ್ರಹಿಸಲಾಗಿದೆ. ಪ್ರಸ್ತುತ ವಿಜಯನಗರ ಜಿಲ್ಲೆಯಲ್ಲಿ ಸಮೀಕ್ಷಾ ಕಾರ್ಯವು ಪ್ರಗತಿಯಲ್ಲಿದೆ. ಈ ಸಮೀಕ್ಷಾ ಪ್ರಗತಿಯು ಮೇ ಅಂತ್ಯದವರೆಗೆ ಮುಂದುವರೆಯಲಿದೆ.
ಹಸ್ತಪ್ರತಿಗಳಿದ್ದರೆ ತಿಳಿಸಲು ಕೋರಿಕೆ: ವಿಜಯನಗರ ಜಿಲ್ಲೆಯ ವ್ಯಾಪ್ತಿಯ ಸಾರ್ವಜನಿಕರು, ಮಠ, ದೇವಸ್ಥಾನ, ವಿಶ್ವವಿದ್ಯಾನಿಲಯ ತಮ್ಮ ಬಳಿ ಪ್ರಾಚೀನ ಕಾಲದ ಹಸ್ತಪ್ರತಿಗಳು, ಬರವಣಿಗೆಯುಳ್ಳ ತಾಳೆಗರಿಗಳು ಲಭ್ಯವಿದ್ದಲ್ಲಿ ಕೂಡಲೇ ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಪುರತತ್ವ ಸಹಾಯಕ ಡಾ. ಆರ್.ಮಂಜನಾಯ್ಕ್ ಮೊ : 9945415518, ಪ್ರವಾಸೋದ್ಯಮ ಇಲಾಖೆ ಪ್ರವಾಸಿ ಅಧಿಕಾರಿ ಶ್ರೀಹರಿ ಮಾಸನೂರು ಮೊ :7892722443ಗೆ ಸಂಪರ್ಕಿಸಿ ಮಾಹಿತಿ ನೀಡುವ ಮೂಲಕ ಪ್ರಾಚೀನ ಕಾಲದ ಹಸ್ತಪ್ರತಿಗಳು ತಾಳೆಗರಿಗಳನ್ನು ಸಂರಕ್ಷಿಸುವ ಕಾರ್ಯದಲ್ಲಿ ಸಹಕರಿಸಲು ಕೋರಿದೆ.

Share

Leave a comment

Leave a Reply

Your email address will not be published. Required fields are marked *

Related Articles
Homeರಾಜಕೀಯಸುದ್ದಿಗಳು

ಅಡವಿಹಳ್ಳಿಯಲ್ಲಿ ಬಸವೇಶ್ವರ ದೇವಸ್ಥಾನದ ಕಳಸಾರೋಹಣ

ಹರಪನಹಳ್ಳಿ: ಮೊಬೈಲ್ಗೆ ಹೇಗೆ ನೆಟ್ವರ್ಕ್ ಟವರ್ ಮುಖ್ಯವೋ, ಹಾಗೆಯೇ ದೇವಸ್ಥಾನದ ಗೋಪುರಕ್ಕೆ ಕಳಸ ಬಹುಮುಖ್ಯ, ದೇವಸ್ಥಾನಗಳು...

Homeಸುದ್ದಿಗಳು

ಕೋಟೆ ಅಂಜನೇಯ ದೇವಸ್ಥಾನ ಜಾಗ ಒತ್ತುವರಿ ತೆರವುಗೊಳಿಸದಿದ್ದರೆ ಹೋರಾಟದ ಎಚ್ಚರಿಕೆ

ಹರಪನಹಳ್ಳಿ (ವಿಜಯನಗರ ಜಿಲ್ಲೆ ) : ಪಾಳೆಗಾರ ರಾಜಸೋಮಶೇಖರ ನಾಯಕರ ಕಾಲದ ನಿರ್ಮಾಣವಾದ ಕೋಟೆ ಅಂಜನೇಯ...

ssm dvg
ಸುದ್ದಿಗಳು

ಶಾಮನೂರು ಶಿವಶಂಕರಪ್ಪ ಜನ್ಮದಿನ: ಜೂನ್‌ 17ಕ್ಕೆ  ಉಚಿತ ಸಾಮೂಹಿಕ ವಿವಾಹ  

ಹರಪನಹಳ್ಳಿ : ಮಾಜಿ ಶಾಸಕ ದಿವಂಗತ ಶಾಮನೂರು ಶಿವಶಂಕರಪ್ಪ ಅವರ 96ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಜೂನ್...

vijaya vikrama
Homeಸುದ್ದಿಗಳು

ದೇಶದ ಬದಲಾವಣೆಯಲ್ಲಿ ಪತ್ರಕರ್ತರ ಪಾತ್ರ ದೊಡ್ಡದು : ಕೋಡಿಹಳ್ಳಿ ಭೀಮಪ್ಪ

ಹರಪನಹಳ್ಳಿ : ಪತ್ರಿಕೋದ್ಯಮದಲ್ಲಿ ನಿಷ್ಠೆ, ಧೈರ್ಯ ಮತ್ತು ಪ್ರಾಮಾಣಿಕತೆ ಇದ್ದರೆ ಸಮಾಜದ ದಿಕ್ಕು ಬದಲಾಯಿಸಲು ಸಾಧ್ಯವಾಗುತ್ತದೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.