Home ಸುದ್ದಿಗಳು ನ.27ಕ್ಕೆ ಪ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ : ಮೈತ್ರಿ ಕೃಷ್ಣನ್
ಸುದ್ದಿಗಳು

ನ.27ಕ್ಕೆ ಪ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ : ಮೈತ್ರಿ ಕೃಷ್ಣನ್

Share
KARMIKA,AICCTU
Share

ಹರಪನಹಳ್ಳಿ :  ಕಾರ್ಮಿಕರಿಗೆ 42 ಸಾವಿರ ಕನಿಷ್ಟ ವೇತನ ನೀಡಬೇಕು,ಗುತ್ತಿಗೆ ಪದ್ದತಿ ರದ್ದು ಮಾಡಿ ಕಾಯಂಗೊಳಿಸಬೇಕು ನಾಲ್ಕು ಕಾರ್ಮಿಕ ಸಂಹಿತೆ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ ನವೆಂಬರ್ 27 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಎಐಸಿಸಿಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೈತ್ರಿ ಕೃಷ್ಣನ್ ತಿಳಿಸಿದರು.

ಅವರಿಂದು ಮಾಧ್ಯಮ ಗೋಷ್ಠಿ ಯಲ್ಲಿ ಮಾತನಾಡಿ, ದಿನದಿಂದ ದಿನಕ್ಕೆ ಕಾರ್ಮಿಕ ವರ್ಗದ ಮೇಲೆ ಅನ್ಯಾಯ ಹೆಚ್ಚಾಗುತ್ತಿದೆ. ಕಾರ್ಮಿಕರ ಹೋರಾಟದ ಫಲವಾಗಿ ಅಸ್ತಿತ್ವಕ್ಕೆ ಬಂದ ಕಾರ್ಮಿಕ ಕಾನೂನುಗಳ ಬದಲಾವಣೆಗೆ ಕೇಂದ್ರ ಸರಕಾರ ವಿಭಿನ್ನ ದಾರಿಯಲ್ಲಿ ಹೊರಟಿದೆ. ಕೇಂದ್ರ ಸರಕಾರದ ಬದಲು, ರಾಜ್ಯ ಸರಕಾರಗಳು ಈ ಕಾನೂನು ಬದಲಾವಣೆಯಲ್ಲಿ ತೊಡಗಿವೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯದಲ್ಲಿ ಹಲವಾರು ಕಾನೂನುಗಳನ್ನು ಈಗಾಗಲೇ ಬದಲಾಯಿಸಲಾಗಿದೆ. ಉಳಿದ ರಾಜ್ಯಗಳು ಇದಕ್ಕೆ ಹೊರತಾಗಿಲ್ಲ. ಹಾಲಿ ಕಾರ್ಮಿಕ ಕಾನೂನುಗಳನ್ನು ನೇರವಾಗಿ ಉಲ್ಲಂಘಿಸಿ, ಕಾರ್ಪೊರೇಟ್ ಬಂಡವಾಳಕ್ಕೆ ಹಾಗೂ ಗುತ್ತಿಗೆ ಕಾರ್ಮಿಕ ಪದ್ಧತಿಗೆ ಭಾರಿ ಉತ್ತೇಜನ ನೀಡಲಾಗುತ್ತಿದೆ ದೇಶದಲ್ಲಿ ಶೇ.90ರಷ್ಟು ಕಾರ್ಮಿಕರು ಕನಿಷ್ಠ ವೇತನ ಹಾಗೂ ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ಭದ್ರತೆಯಿಂದ ವಂಚಿತರಾಗಿದ್ದಾರೆ ಎಂದು ದೂರಿದರು.

ಕಾರ್ಮಿಕರು ಸಂಘ ಕಟ್ಟುವ, ದುಡಿಮೆಯ ಹಕ್ಕುಗಳ ರಕ್ಷಣೆಗಾಗಿ ಮುಷ್ಕರ ನಡೆಸುವ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದಾರೆ. ?ಹೆಚ್ಚು ಕೂಲಿ ಕೇಳಿದರೆ ಕೆಲಸಕ್ಕೆ ಬರಬೇಡಿ ಎಂಬ ಬೆದರಿಕೆ ದೇಶಾದ್ಯಂತ ಕೇಳಿಬರುತ್ತಿದೆ. ಸರಕಾರಿ, ಅರೆ ಸರಕಾರಿ ಹಾಗೂ ಖಾಸಗೀ ಕ್ಷೇತ್ರದಲ್ಲೂ ಕಾರ್ಮಿಕರ ಹಕ್ಕುಗಳ ಹರಣ ಎಗ್ಗಿಲ್ಲದೇ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಮಿಕ ಹಿತ ರಕ್ಷಣಾ ಕಾಯ್ದೆ ಬದಲಾವಣೆ 

ಟ್ರೇಡ್ ಯೂನಿಯನ್ ಕಾಯ್ದೆ-1926, ಗುತ್ತಿಗೆ ಕಾರ್ಮಿಕ (ರದ್ದತಿ, ನಿಯಂತ್ರಣ) ಕಾಯ್ದೆ-1970, ಕಾರ್ಖಾನೆಗಳ ಕಾಯ್ದೆ- 1948, ಕೈಗಾರಿಕಾ ವಿವಾದ ಕಾಯ್ದೆ-೧೯೪೭, ಕನಿಷ್ಠ ವೇತನ ಕಾಯ್ದೆ-1948 ಮುಂತಾದವುಗಳಲ್ಲಿರುವ ಕಾರ್ಮಿಕರ ಪರವಾದ ಅಂಶಗಳನ್ನು ತೆಗೆದು ಹಾಕುವ ನಿರ್ಧಾರ ಮೋದಿ ಸರಕಾರದ್ದಾಗಿದೆ. ಮೋದಿ ಸರಕಾರದ ಈ ಕಾರ್ಮಿಕ ವಿರೋಧಿ ಕ್ರಮಕ್ಕೆ ಕಾಂಗ್ರೆಸ್ ಮುಂತಾದ ಪಕ್ಷಗಳು ಬೆಂಬಲ ಸೂಚಿಸಿವೆ. ಕಾರ್ಮಿಕ ವರ್ಗ ಹೋರಾಡಿ ಪಡೆದಿದ್ದ ಕಾರ್ಮಿಕ ಹಿತ ರಕ್ಷಣಾ ಕಾಯ್ದೆಗಳನ್ನು ಬದಲಾವಣೆ ಮಾಡಲಾಗಿದೆ.

ಜಿಲ್ಲಾಧ್ಯಕ್ಷರು   ಸಂದೇರ್ ಪರಶುರಾಮ್,  ಜಿಲ್ಲಾ ಕಾರ್ಯದರ್ಶಿ ಸಂತೋಷ ಗುಳೇದಟ್ಟಿ,  ರಾಜು, ಮೈಲಪ್ಪ ಕ, ಹುಲಿಕಟ್ಟಿ ಇಬ್ರಾಹಿಂ ಸಾಬ್, ಪಿಕೆ ರೇಣುಕಮ್ಮ ಗೌರಮ್ಮ ಮರಿಯಮ್ಮ ಲತಾ ಬಾಗಳಿ, ಕುಮಾರ ಹ್ಯಾರಡ, ಜೋಗಿನ ನಾಗರಾಜ, ಕಲ್ಲುಕುಟುಗರ ರಾಘವೇಂದ್ರ, ರಾಮಕ್ಕನಹಳ್ಳಿ ಅಜ್ಜಪ್ಪ, ರೇವಣಸಿದ್ದಪ್ಪ, ಬಸವರಾಜಪ್ಪ ಅರಸೀಕೆರೆ, ಜಿಲ್ಲಾ ಮುಖಂಡರು  ಮಹಮ್ಮದ್ ರಫೀಕ್, ಸಿಗಡಿ ರಾಮಪ್ಪ, ಕಲೀಮ್, ಇದ್ಲಿ ತಿಮ್ಮಪ್ಪ, ಅನ್ವರ್ ಭಾಷಾ, ಮಂಜುನಾಥ್, ಇರ್ಫಾನ್ ಗುಣಿಕೇರಿ, ಬಾಬು ಬಾಣಗೇರಿ, ಪರಮೇಶ್ ನಾಯಕ್ ಅಡವಿ ಮಲ್ಲನ್ಕೆರಿ ತಾಂಡ, ಕೊಟ್ರೇಶ್, ಲೋಕೇಶ್, ಮಲ್ಲಿಕಾರ್ಜುನ, ಸುಜಲಾನ್ ಕಾರ್ಮಿಕರು,ಸಂತೋಷ್ ಅಲಮರಸಿಕೆರಿ ಆಸ್ಪತ್ರೆ ಕಾರ್ಮಿಕರ ಮುಖಂಡರು, ಗೋಣೆಪ್ಪ,ಕುಮಾರ್ ಮ್ಯಾಸರಗೇರಿ, ಮಕರಬ್ಬಿ ದಾದು ಐಬಿ ಸರ್ಕಲ್, ನಜೀರ್ ಬತ್ತಿ ಸಾಬ್ ಹೊಂಬಳಗಟ್ಟಿ ಇದ್ದರು.

“ಗುತ್ತಿಗೆ ಪದ್ದತಿ ರದ್ದುಗೊಳಿಸುವ ಬದಲು ದೇಶದೆಲ್ಲೆಡೆ ಗುತ್ತಿಗೆ ಪದ್ಧತಿ ತಲೆ ಎತ್ತಿ ನಿಂತಿದೆ. ಸರಕಾರಿ, ಅರೆ ಸರಕಾರಿ ಹಾಗೂ ಖಾಸಗೀ ವಲಯಗಳಲ್ಲಿ ರಾಜಾರೋಷವಾಗಿ ಜಾರಿಯಲ್ಲಿಡಲಾಗಿದೆ. ಬಂದರು, ರೇಲ್ವೆ, ವಿಮಾನಯಾನ, ಸಾರಿಗೆ, ವಿದ್ಯುತ್ ಉತ್ಪಾದನೆ ಹಾಗೂ ಸರಬರಾಜು, ನೀರಾವರಿ ಹಾಗೂ ಕುಡಿಯುವ ನೀರು ಸರಬರಾಜು ಪೌರಸೇವಾ ಮುಂತಾದ ಕ್ಷೇತ್ರಗಳು ಖಾಸಗಿಕರಣಕ್ಕೆ ಒಳಗಾಗುತ್ತಿವೆ” 

ಮೈತ್ರಿ ಕಷ್ಣನ್‌, ರಾಜ್ಯ ಕಾರ್ಯದರ್ಶಿಎಐಸಿಸಿಟಿಯು

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.