Home ಸುದ್ದಿಗಳು ಪರಿಶಿಷ್ಟ ಜಾತಿ ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಅಸ್ತು
ಸುದ್ದಿಗಳು

ಪರಿಶಿಷ್ಟ ಜಾತಿ ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಅಸ್ತು

Share
Share

ಬೆಂಗಳೂರು: ರಾಜ್ಯದ ಅಸ್ಪೃಶ್ಯ ಮಾದಿಗ ಸಮಾಜದ ಮೂರು ದಶಕಗಳ ಕಾಲದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಪರಿಶಿಷ್ಟ ಜಾತಿಯ (ಎಸ್‌ಸಿ) ಒಳಮೀಸಲಾತಿ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟವು ಶುಕ್ರವಾರ ಮಹತ್ವದ ತೀರ್ಮಾನ ಕೈಗೊಂಡಿದೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಪರಿಶಿಷ್ಟ ಜಾತಿಯ ಒಟ್ಟು ಶೇ 15ರಷ್ಟು ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಮಾಡದೆ, ಅದರೊಳಗೆ ಸಮಾನ ಹಂಚಿಕೆ ಮಾಡಲಾಗಿದೆ. ಎಡಗೈ, ಬಲಗೈ ಮತ್ತು ಸ್ಪೃಶ್ಯ ಸಮುದಾಯಗಳ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ” ಎಂದು ತಿಳಿಸಿದರು.

ಯಾರಿಗೆ ಎಷ್ಟು ಪಾಲು?

ಸಚಿವ ಸಂಪುಟದ ತೀರ್ಮಾನದಂತೆ ಪರಿಶಿಷ್ಟ ಜಾತಿಯ 101 ಉಪಜಾತಿಗಳನ್ನು ಮೂರು ಪ್ರಮುಖ ಗುಂಪುಗಳಾಗಿ ವಿಂಗಡಿಸಿ ಮೀಸಲಾತಿ ಹಂಚಲಾಗಿದೆ:

  • ದಲಿತ ಎಡಗೈ (ಮಾದಿಗ ಮತ್ತು ಇತರೆ 18 ಉಪಜಾತಿಗಳು): ಶೇ5.25
  • ದಲಿತ ಬಲಗೈ (ಹೊಲೆಯ ಮತ್ತು ಇತರೆ ಉಪಜಾತಿಗಳು): ಶೇ 5.25
  • ಸ್ಪೃಶ್ಯ (ಲಂಬಾಣಿಭೋವಿಕೊರಚಕೊರಮ) ಮತ್ತು ಇತರರು : ಶೇ.4.5

ಈ ಐತಿಹಾಸಿಕ ತೀರ್ಮಾನದಿಂದಾಗಿ ರಾಜ್ಯ ಸರ್ಕಾರಿ ಸೇವೆಯಲ್ಲಿ ಬಾಕಿ ಇರುವ ಸುಮಾರು 56,400 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಶೀಘ್ರವೇ ಚಾಲನೆ ಸಿಗುವ ನಿರೀಕ್ಷೆಯಿದೆ. ಸಭೆಯಲ್ಲಿ ಸಚಿವರಾದ ಮುನಿಯಪ್ಪ, ಜಿ. ಪರಮೇಶ್ವರ್, ಎಚ್.ಸಿ. ಮಹದೇವಪ್ಪ, ಎಚ್.ಕೆ. ಪಾಟೀಲ್,  ಸೇರಿದಂತೆ ದಲಿತ ಸಮುದಾಯದ ಪ್ರಮುಖ ನಾಯಕರು ಉಪಸ್ಥಿತರಿದ್ದರು.

 

 

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.