Home ಶಿಕ್ಷಣ ವಸತಿ ಕಾಲೇಜು ಪ್ರವೇಶ: ಒಳಮೀಸಲಾತಿ ಕೈಬಿಟ್ಟಿದ್ದಕ್ಕೆ ಆಕ್ರೋಶ
ಶಿಕ್ಷಣಸುದ್ದಿಗಳು

ವಸತಿ ಕಾಲೇಜು ಪ್ರವೇಶ: ಒಳಮೀಸಲಾತಿ ಕೈಬಿಟ್ಟಿದ್ದಕ್ಕೆ ಆಕ್ರೋಶ

Share
Share

ಹರಪನಹಳ್ಳಿ :   ಪರಿಶಿಷ್ಟ ಸಮುದಾಯಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಒಳಮೀಸಲಾತಿಗೆ ಕಲ್ಪಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ ಆದರೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ಅಡಿಯಲ್ಲಿ ಪಿಯುಸಿ ದಾಖಲಾತಿಗೆ ಅರ್ಜಿ ಆಹ್ವಾನಿಸಿದ ಅಧಿಸೂಚನೆಯಲ್ಲಿ ಉಪ ವರ್ಗೀಕರಣಕ್ಕೆ ಅವಕಾಶ ಕಲ್ಪಿಸದೇ ಇರುವುದಕ್ಕೆ ದಲಿತ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ  104 ವಸತಿ ಕಾಲೇಜುಗಳಲ್ಲಿ 2026-27ನೇ ಸಾಲಿನ ಪ್ರಥಮ ಪಿಯುಸಿ ದಾಖಲಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಏಪ್ರಿಲ್ 29ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.  ಈ ಪ್ರವೇಶ ಪ್ರಕ್ರಿಯೆಯಲ್ಲಿ ಪರಿಶಿಷ್ಟ ಜಾತಿಯ ಸೀಟುಗಳನ್ನು ಉಪ ವರ್ಗೀಕರಣವಿಲ್ಲದೆ ಹಂಚಿಕೆ ಮಾಡಲು ನಿರ್ದೇಶಿಸಲಾಗಿದೆ.

ಮೇ 4ಕ್ಕೆ ಮೊದಲ ಆಯ್ಕೆ ಪಟ್ಟಿ ಪ್ರಕಟವಾಗಲಿದ್ದು, ಮೇ 29ರಿಂದ ತರಗತಿಗಳು ಆರಂಭವಾಗಲಿವೆ. ಈ ಬಾರಿ 31 ಶಾಲೆಗಳನ್ನು ಪಿಯು ಕಾಲೇಜುಗಳಾಗಿ ಉನ್ನತೀಕರಿಸಲಾಗುತ್ತಿದ್ದು, ವಿಜ್ಞಾನ ವಿಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.   ಆದೇಶ ಪರಿಷ್ಕರಿಸುವಂತೆ ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಸಂಚಾಲಕ ಕೆ.ಸುಭಾಷ್‌ ಮತ್ತು ಜಿಲ್ಲಾ ಸಂಘಟನಾ ಸಂಚಾಲಕ ಯಲ್ಲಪ್ಪ ಸವಣೂರು  ಆಗ್ರಹಿಸಿದ್ದಾರೆ.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Homeಸುದ್ದಿಗಳು

ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026ನೇ ಸಾಲಿಗೆ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟು ಜಿಲ್ಲಾ ಮಟ್ಟದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.