Home ವ್ಯಕ್ತಿ ಕಾಣೆ ಪತ್ತೆಗೆ ಮನವಿ
Homeಸುದ್ದಿಗಳು

ವ್ಯಕ್ತಿ ಕಾಣೆ ಪತ್ತೆಗೆ ಮನವಿ

Share
Share

ವಿಜಯನಗರ : ತಾಲೂಕಿನ ಎಂ.ಪಿ. ಪ್ರಕಾಶ ನಗರ, ಸಾಯಿ ಕಾಲೋನಿಯ ನಿವಾಸಿ ಕೆ.ಎಂ. ನಾಗಬಸಯ್ಯ ತಂದೆ ಬಸಯ್ಯ ಸ್ವಾಮಿ ಸುಮಾರು 43 ವರ್ಷದ ವ್ಯಕ್ತಿ ಕಾಣೆಯಾಗಿದ್ದು, ಈ ಕುರಿತು ಬಳ್ಳಾರಿ ರೈಲ್ವೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಕೆ.ಎಂ. ನಾಗಬಸಯ್ಯ ಸುಮಾರು 5.5 ಅಡಿ ಎತ್ತರ, ಬಲವಾದ ಮೈಕಟ್ಟು, ದುಂಡು ಮುಖ, ಅಗಲವಾದ ಹಣೆ, ಬಲಗಡೆ ಮೂಗಿನ ಪಕ್ಕದಲ್ಲಿ ಪುಟ್ಟ ಕಪ್ಪು.

ಎಡಗಾಲಿನ ಪಾದದ ಮೇಲೆ ಹಳೆಯ ಗಾಯದ ಗುರುತು ಹೊಂದಿದ್ದು, ಗ್ರೇ ಬಣ್ಣದ ಆಫ್ ಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಮತ್ತು ನೀಲಿ ಬಣ್ಣದ ಕೈಗಡಿಯಾರ ಧರಿಸಿರುತ್ತಾನೆ. ಕಾಣೆಯಾದ ವ್ಯಕ್ತಿಯು ಕನ್ನಡ, ತೆಲುಗು ಹಾಗೂ ಹಿಂದಿ ಭಾಷೆ ಮಾತನಾಡುವನು. ಈ ಮೇಲ್ಕಂಡ ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಬಳ್ಳಾರಿ ರೈಲ್ವೇ ಪಿ.ಎಸ್. ಮೊ. ಸಂ: 9480802131, ಬೆಂಗಳೂರು ರೈಲ್ವೇ ಕಂಟ್ರೋಲ್ ರೂಂ ಸಂ: 9480802140 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.