Home ಸುದ್ದಿಗಳು ಹರಪನಹಳ್ಳಿಯಲ್ಲಿ ಕೊರೆಗಾಂವ್‌ ವಿಜಯೋತ್ಸವ ಆಚರಣೆ 
ಸುದ್ದಿಗಳು

ಹರಪನಹಳ್ಳಿಯಲ್ಲಿ ಕೊರೆಗಾಂವ್‌ ವಿಜಯೋತ್ಸವ ಆಚರಣೆ 

Share
ಹರಪನಹಳ್ಳಿಯಲ್ಲಿ ಕೊರೆಗಾಂವ್‌ ವಿಜಯೋತ್ಸವ ಆಚರಣೆ 
Share

ಹರಪನಹಳ್ಳಿ : ದಲಿತ ಜನಾಂಗ ಮಾತ್ರವಲ್ಲದೇ ಎಲ್ಲಾ ಶೋಷಿತರ ವಿಮೋಚನೆಗಾಗಿ ಶಿಕ್ಷಣ, ಸ್ವಾಭಿಮಾನ, ಸಮಾನತೆಗಾಗಿ ಹೋರಾಟ ನಡೆಸಿದ ಕೋರೆಗಾಂವ್‌ ಯುದ್ದದ ಬಗ್ಗೆ ಎಲ್ಲರೂ ತಿಳಿದುಕೊಳ್ಳುವ ಅವಶ್ಯಕತೆ ಇದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ತಾಲ್ಲೂಕು ಅಧ್ಯಕ್ಷ ಕೆ.ಸುಭಾಷ್‌ ತಿಳಿಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಗುರುವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಆಯೋಜಿಸಿದ್ದ 208ನೇ ಭೀಮ ಕೊರೆಗಾಂವ್‌ ವಿಜಯೋತ್ಸವ ಆಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಭಾರತದ ಇತಿಹಾಸದಲ್ಲೇ ಹೆಸರಾದ ಕದನವೊಂದಿದ್ದರೆ ಅದು ಭೀಮ ಕೊರೆಗಾಂವ್‌ ಯುದ್ದ. 1818ರಲ್ಲಿ 28 ಸಾವಿರ ಮಂದಿಯ ವಿರುದ್ದ 500 ಮಂದಿ ಮಹರ್‌ ಸೈನಿಕರು ನಿರಂತರ 12 ಗಂಟೆ ಹೋರಾಟ ನಡೆಸಿ ಗೆಲುವು ಸಾಧಿಸಿದ ಯುದ್ದವಾಗಿದೆ ಎಂದು ಅಭಿಪ್ರಾಯಪಟ್ಟರು.

ಕೇಕ್‌ ಕತ್ತರಿಸಿ ಪರಸ್ಪರ ಸಿಹಿ ಹಂಚುವ ಮೂಲಕ ವಿಜಯೋತ್ಸವ ಸ್ಮರಿಸಿದರು. ಉಪಾಧ್ಯಕ್ಷ ನಾಗರಾಜ್ ಬಿದ್ದಾಡಿ,  ಡಿ.ಎಸ್.ಎಸ್.‌ ಮುಖಂಡ ಸಂತೋಷ್ ಪುಣಬಘಟ್ಟ, ಎ.ನಾಗೇಂದ್ರಪ್ಪ, ಇಸ್ಮಾಯಿಲ್‌ ಎಲಿಗಾರ, ಶಶಿಧರ ಪೂಜಾರ ಮಾತನಾಡಿದರು. ಗೌರವ ಅಧ್ಯಕ್ಷ ಪೂಜಾರ ನಿಂಗಪ್ಪ, ಕಾರ್ಯದರ್ಶಿ ಡಿ.ಛತ್ರಪತಿ, ಸಹ ಕಾರ್ಯದರ್ಶಿ ಜಿ.ಶ್ರೀಕಾಂತ, ನಗರ ಘಟಕ ಅಧ್ಯಕ್ಷ ಆರ್.ಕೋಟೆಪ್ಪ, ಖಜಾಂಚಿ ಮುತ್ತಪ್ಪ ಬಿದ್ದಾಡಿ, ಪಿ.ಮಲ್ಲಿಕಾರ್ಜುನ, ಬಿ.ನಾಗರಾಜ್‌, ಮೈಲಾರಿ, ಡಿ.ಭರಮಪ್ಪ, ಕೆ.ಪಕ್ಕೀರಪ್ಪ, ಎ.ಪ್ರಕಾಶ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Homeಸುದ್ದಿಗಳು

ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026ನೇ ಸಾಲಿಗೆ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟು ಜಿಲ್ಲಾ ಮಟ್ಟದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.