ಕೊಟ್ಟೂರು : ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನಲ್ಲಿ ಇದೇ ಫೆಬ್ರವರಿ 12 ರಂದು ಕೊಟ್ಟೂರು ಜಾತ್ರಾ ಮಹೋತ್ಸವ ಜರುಗಲಿದೆ. ಜಾತ್ರಾ ಪ್ರಯುಕ್ತ ಯಾವುದೇ ಅಹಿತಕರ ಘಟನೆ ಜರುಗದಂತೆ, ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಕೊಟ್ಟೂರು ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಫೆಬ್ರವರಿ 11ರ ಸಂಜೆ 6 ಗಂಟೆಯಿಂದ ಫೆಬ್ರವರಿ 13 ರ ಸಂಜೆ 6 ಗಂಟೆಯವರೆಗೆ ಮದ್ಯದಂಗಡಿ, ಬಾರ್ ಅಂಡ್ ರೆಸ್ಟೊರೆಂಟ್ ಹಾಗೂ ಇತರೆ ಸ್ಥಳಗಳಲ್ಲಿ ಮದ್ಯ ಮಾರಾಟ ಸಾಗಾಣೆ ಮಾಡದಂತೆ ಮತ್ತು ಮದ್ಯದಂಗಡಿ ಮುಚ್ಚುವಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶಿಸಿದ್ದಾರೆ.
Leave a comment