Home ಉಜ್ಜಯಿನಿ ಸಂಸ್ಥೆ ಕಾರ್ಯದರ್ಶಿ ಎಂ.ಎಂ.ಜೆ. ಹರ್ಷವರ್ಧನ ನಿಧನ: ಶಾಲಾ-ಕಾಲೇಜುಗಳಿಗೆ ಇಂದು ರಜೆ
Homeಸುದ್ದಿಗಳು

ಉಜ್ಜಯಿನಿ ಸಂಸ್ಥೆ ಕಾರ್ಯದರ್ಶಿ ಎಂ.ಎಂ.ಜೆ. ಹರ್ಷವರ್ಧನ ನಿಧನ: ಶಾಲಾ-ಕಾಲೇಜುಗಳಿಗೆ ಇಂದು ರಜೆ

Share
Share

ಕೊಟ್ಟೂರು:ಉಜ್ಜಯಿನಿ ಪೀಠದ ಜ್ಞಾನಗುರು ವಿದ್ಯಾಪೀಠ ಸಂಸ್ಥೆಯ ಕಾರ್ಯದರ್ಶಿ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ **ಎಂ.ಎಂ.ಜೆ. ಹರ್ಷವರ್ಧನ (64)** ಅವರು ಬುಧವಾರ ನಿಧನರಾಗಿದ್ದಾರೆ. ಮಾಜಿ ಸಚಿವ ದಿವಂಗತ ಎಂ.ಎಂ.ಜೆ. ಸದ್ಯೋಜಾತಪ್ಪ ಅವರ ಪುತ್ರರಾಗಿದ್ದ ಹರ್ಷವರ್ಧನ ಅವರು ಸಮಾಜಮುಖಿ ಕಾರ್ಯಗಳ ಮೂಲಕ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಒಳಗೊಂಡ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಹರ್ಷವರ್ಧನ ಅವರ ಅಂತ್ಯಕ್ರಿಯೆಯು ಗುರುವಾರ ಚಪ್ಪರದಹಳ್ಳಿಯಲ್ಲಿರುವ ಅವರ ಸ್ವಂತ ತೋಟದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಹರ್ಷವರ್ಧನ ಅವರ ಹಠಾತ್ ನಿಧನಕ್ಕೆ ನಾಡಿನ ಹಲವು ಗಣ್ಯರು ತೀವ್ರ ಕರಳು ಬೆಳಕಿನ ಸಂತಾಪ ಸೂಚಿಸಿದ್ದಾರೆ: ಉಜ್ಜಯಿನಿ ಪೀಠದ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ತೆಗ್ಗಿನಮಠದ ವರಸದ್ಯೋಜಾತ ಸ್ವಾಮೀಜಿ, ನೀಲಗುಂದ ಚೆನ್ನಬಸವ ಶಿವಯೋಗಿ ಸ್ವಾಮೀಜಿ, ಕೊಟ್ಟೂರು ಚಾನುಕೋಟಿ ಮಠದ ಸಿದ್ದಲಿಂಗ ಸ್ವಾಮೀಜಿ, ಸಂಡೂರು, ಕೂಡ್ಲಿಗಿ, ಹೊಸಪೇಟೆ, ಹಂಪಿ, ರಾಮಘಟ್ಟದ, ಅಡವಿಹಳ್ಳಿ, ನಿಚ್ಚವ್ವನಹಳ್ಳಿ, ಅರಸೀಕೆರೆ, ಕೂಲಹಳ್ಳಿ ಮಠದ ಸ್ವಾಮೀಜಿ ಅವರು ಸಂತಾಪ ಸೂಚಿಸಿದ್ದಾರೆ.

ಶಾಸಕರಾದ ಎಸ್.ಎಸ್.ಮಲ್ಲಿಕಾರ್ಜುನ, ಎಂ.ಪಿ.ಲತಾ ಮಲ್ಲಿಕಾರ್ಜುನ, ನೇಮಿರಾಜ ನಾಯ್ಕ, ಕೃಷ್ಣನಾಯ್ಕ, ಗವಿಯಪ್ಪ, ಎನ್.ಟಿ.ಶ್ರೀನಿವಾಸ, ಸಂಸದೆ ಪ್ರಭಾ ಮಲ್ಲಿಕಾರ್ಜುನ, ಮಾಜಿ ಸಚಿವರಾದ ಪಿ.ಟಿ.ಪರಮೇಶ್ವರ ನಾಯ್ಕ, ಜಿ.ಕರುಣಾಕರ ರೆಡ್ಡಿ, ಮಾಜಿ ಸಂಸದರಾದ‌ ಜಿ.ಎಂ.ಸಿದ್ದೇಶ್ವರ, ವೈ.ದೇವೇಂದ್ರಪ್ಪ, ಮಾಜಿ ಶಾಸಕರಾದ ನಂದಿಹಳ್ಳಿ ಹಾಲಪ್ಪ, ಭೀಮನಾಯ್ಕ, ಶಿರಾಜ್ ಶೇಕ್, ಮುಖಂಡರಾದ ಎನ್.ಕೊಟ್ರೇಶ್, ಕೋಡಿಹಳ್ಳಿ ಭೀಮಪ್ಪ, ಜಿ.ನಂಜನಗೌಡ, ವೈ.ಡಿ.ಅಣ್ಣಪ್ಪ, ಎಚ್.ಕೆ.ಹಾಲೇಶ, ಶಶಿಧರ ಪೂಜಾರ, ಜಯಪ್ರಕಾಶ ಸಾರಥಿ, ಉದಯಶಂಕರ, ಚಂದ್ರಶೇಖರ ಭಟ್, ಮುತ್ತಿಗಿ ವಾಗೀಶ, ಎಂ.ವಿ.ಅಂಜಿನಪ್ಪ, ಎಂ.ರಾಜಶೇಖರ,  ಕಣಿವಿಹಳ್ಳಿ ಮಂಜುನಾಥ, ಸುಧಾಕರ, ಷಣ್ಮುಖಪ್ಪ ಸೇರಿ ಹಲವರು ಕಂಬನಿ ಮಿಡಿದಿದ್ದಾರೆ.

ರಜೆ ಘೋಷಣೆ :
ಸಂಸ್ಥೆಯ ಗೌರವಾನ್ವಿತ ಕಾರ್ಯದರ್ಶಿಗಳ ಅಗಲಿಕೆಯ ಗೌರವಾರ್ಥವಾಗಿ, ಉಜ್ಜಯಿನಿ ಪೀಠದ ಅಡಿಯಲ್ಲಿ ಬರುವ ಎಲ್ಲಾ ಶಾಲಾ-ಕಾಲೇಜುಗಳಿಗೆ ಗುರುವಾರ (ಒಂದು ದಿನ) ರಜೆ ಘೋಷಿಸಲಾಗಿದೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.