Home ಸುದ್ದಿಗಳು ಶಿಕ್ಷಕರ ಸಂಘದ ಚುನಾವಣೆ :  1 ತಿಂಗಳೊಳಗೆ ನಡೆಸಲು ಹೈಕೋರ್ಟ್ ಆದೇಶ
ಸುದ್ದಿಗಳು

ಶಿಕ್ಷಕರ ಸಂಘದ ಚುನಾವಣೆ :  1 ತಿಂಗಳೊಳಗೆ ನಡೆಸಲು ಹೈಕೋರ್ಟ್ ಆದೇಶ

Share
ಶಿಕ್ಷಕರ ಸಂಘದ ಚುನಾವಣೆ : 1 ತಿಂಗಳೊಳಗೆ ನಡೆಸಲು ಹೈಕೋರ್ಟ್ ಆದೇಶ
Share

ಹರಪನಹಳ್ಳಿ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ   ಚುನಾವಣೆ ಕುರಿತಂತೆ ಧಾರವಾಡ ಹೈಕೋರ್ಟ್ ಮಹತ್ವದ ಆದೇಶ ನೀಡಿದ್ದು, ಮುಂದಿನ ಒಂದು ತಿಂಗಳೊಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದೆ.

ಏನಿದು ಪ್ರಕರಣ ?

2020-25ನೇ ಸಾಲಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಆಡಳಿತ ಮಂಡಳಿಯ ಅವಧಿಯು 2025ರ ಡಿಸೆಂಬರ್ ಅಂತ್ಯಕ್ಕೆ ಮುಕ್ತಾಯವಾಗಿತ್ತು. ಆದರೆ, ಚುನಾವಣೆ ನಡೆಸದೆ ಅನಧಿಕೃತವಾಗಿ ಅಧಿಕಾರ ಮುಂದುವರಿಸಲು ಹಾಗೂ ಸಂಘದ ಜವಾಬ್ದಾರಿಗಳನ್ನು ನಿಭಾಯಿಸಲು ಹಳೆಯ ಪದಾಧಿಕಾರಿಗಳು ಯತ್ನಿಸುತ್ತಿದ್ದರು. ಇದನ್ನು ಪ್ರಶ್ನಿಸಿ ಕಂಪ್ಲಿ ತಾಲ್ಲೂಕಿನ ಶಿಕ್ಷಕ ನಾಗನಗೌಡ,  ಹರಪನಹಳ್ಳಿ ತಾಲ್ಲೂಕಿನ ಶಿಕ್ಷಕರಾದ ಷರೀಫ್ ಮಕರಬ್ಬಿ, ಮಂಜುನಾಥ ಪೂಜಾರ್ ಮತ್ತು ಮರಿಯಪ್ಪ ಅವರು ಧಾರವಾಡ ಹೈಕೋರ್ಟ್ ಮೆಟ್ಟಿಲೇರಿದ್ದರು.

ಅಧಿಕಾರಿಗಳ ವಾಗ್ದಾನ:

ಶಿಕ್ಷಕರು ಸಲ್ಲಿಸಿದ್ದ ಈ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, ಬೆಂಗಳೂರಿನ ಸಹಕಾರ ಸಂಘಗಳ ಉಪನಿಬಂಧಕರಿಗೆ (DR) ಖುದ್ದು ಹಾಜರಾಗುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿತ್ತು. ಮಾರ್ಚ್ 26, 2026 ರಂದು ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾದ ಅಧಿಕಾರಿಗಳು, “ಇಂದಿನಿಂದ ಕೇವಲ ಒಂದು ತಿಂಗಳ ಒಳಗಾಗಿ ಚುನಾವಣೆ ನಡೆಸಲಾಗುವುದು” ಎಂದು ನ್ಯಾಯಾಧೀಶರ ಮುಂದೆ ವಾಗ್ದಾನ ನೀಡಿದ್ದಾರೆ. ಅಧಿಕಾರಿಗಳ ಹೇಳಿಕೆಯನ್ನು ದಾಖಲಿಸಿಕೊಂಡಿರುವ ಕೋರ್ಟ್, ಮುಂದಿನ ವಿಚಾರಣೆಯನ್ನು ಒಂದು ತಿಂಗಳ ನಂತರ ಕೈಗೆತ್ತಿಕೊಳ್ಳುವುದಾಗಿ ಆದೇಶಿಸಿದೆ.

ಹೋರಾಟಗಾರರ ಪ್ರತಿಕ್ರಿಯೆ:

  • ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಷರೀಫ್ ಮಕರಬ್ಬಿ, ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂಘದ ಅವಧಿ ಮುಗಿದ ಕೂಡಲೇ ಚುನಾವಣೆ ನಡೆಸುವುದು ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ಕರ್ತವ್ಯ. ಐದು ವರ್ಷದ ನಂತರವೂ ಅಧಿಕಾರ ವಿಸ್ತರಿಸಿಕೊಳ್ಳುವ ಯತ್ನ ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ’ ಎಂದರು.
  • ಮಂಜುನಾಥ್ ಪೂಜಾರ್ ಮಾತನಾಡಿ, “ಇದು ಶಿಕ್ಷಕರ ಸತ್ಯ ಮತ್ತು ಪ್ರಾಮಾಣಿಕ ಹೋರಾಟಕ್ಕೆ ಸಂದ ಜಯ.”
  • ಶಿಕ್ಷಕ ನಾಗನಗೌಡ ಮಾತನಾಡಿ, ” ಹೈಕೋರ್ಟ್ ಆದೇಶದನ್ವಯ ಸಂಘದಲ್ಲಿ ಅನಧಿಕೃತವಾಗಿ ಅಧಿಕಾರ ಚಲಾಯಿಸುತ್ತಿರುವವರು ತಕ್ಷಣವೇ ತಮ್ಮ ಹುದ್ದೆಗಳಿಂದ ನಿರ್ಗಮಿಸಬೇಕು. ಹಾಗೂ ಪಾರದರ್ಶಕ ಚುನಾವಣೆಗೆ ಅವಕಾಶ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.

 

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Homeಸುದ್ದಿಗಳು

ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026ನೇ ಸಾಲಿಗೆ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟು ಜಿಲ್ಲಾ ಮಟ್ಟದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.