Home ಸುದ್ದಿಗಳು ಹರಪನಹಳ್ಳಿ ನಗರಸಭೆಯಲ್ಲಿ ಕೆಲಸ ಕೊಡಿ ಸ್ವಾಮಿ 
ಸುದ್ದಿಗಳು

ಹರಪನಹಳ್ಳಿ ನಗರಸಭೆಯಲ್ಲಿ ಕೆಲಸ ಕೊಡಿ ಸ್ವಾಮಿ 

Share
ಹರಪನಹಳ್ಳಿ ನಗರಸಭೆ
Share

ಹರಪನಹಳ್ಳಿ : ನಗರಸಭೆಯ ಹೊರಗುತ್ತಿಗೆ ಪದ್ದತಿಯಡಿ ಪರಿಶಿಷ್ಟ ಜಾತಿಯ ಮಾದಿಗ ಸಮುದಾಯದ ನಿರುದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ನೇತೃತ್ವದಲ್ಲಿ ಪದಾಧಿಕಾರಿಗಳು ನಗರಸಭೆ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ ಪೌರಾಯುಕ್ತೆ ರೇಣುಕಾ ಎಸ್.ದೇಸಾಯಿ ಅವರಿಗೆ ಮನವಿ ಸಲ್ಲಿಸಿದರು.

ಹರಪನಹಳ್ಳಿ ನಗರದ 5ನೇ ವಾರ್ಡಿನಲ್ಲಿರುವ ಬಾಪೂಜಿ ನಗರದಲ್ಲಿ ಮಾದಿಗ ಜಾತಿಗೆ ಸೇರಿದ ಕುಟುಂಬಗಳು ವಾಸವಾಗಿವೆ. ಕೆಲ ಯುವಕರು ಒಂದಿಷ್ಟು ಶಿಕ್ಷಣ ಪಡೆದಿದ್ದು, ಕೆಲಸಕ್ಕಾಗಿ ಪರದಾಡುತ್ತಿದ್ದಾರೆ. ಇತ್ತ ಸರ್ಕಾರಿ ನೇಮಕಾತಿಯಲ್ಲೂ ಅವಕಾಶ ವಂಚಿತರಾಗಿದ್ದಾರೆ. ನಗರಸಭೆಗೆ ಹೆಚ್ಚಿನ ಪೌರ ಕಾರ್ಮಿಕರನ್ನು ಹೊರಗುತ್ತಿಗೆ ಪದ್ದತಿಯಡಿ ಕೆಲಸಕ್ಕೆ ಸೇರಿಸಿಕೊಳ್ಳುವ ಪ್ರಕ್ರಿಯೆ ಆರಂಭಿಸಿದಾಗ, ಈ ಕಾಲೊನಿ ನಿರುದ್ಯೋಗಿ ಯುವಕರಿಗೆ ಆಧ್ಯತೆ ನೀಡಬೇಕು ಎಂದು ತಾಲ್ಲೂಕು ಅಧ್ಯಕ್ಷ ಕೆ.ಸುಭಾಷ್ ಅವರು ಒತ್ತಾಯಿಸಿದರು.  ಉಪಾಧ್ಯಕ್ಷ ಬಿದ್ದಾಡಿ ನಾಗರಾಜ್, ಮಲ್ಲಿಕಾರ್ಜುನ, ಸಿ.,ಪ್ರಕಾಶ್, ರಮೇಶ ತೌಡೂರು, ಕೆ.ಕೋಟೆಪ್ಪ, ಆರ್.ಕೋಟೆಪ್ಪ, ಮುತ್ತಪ್ಪ, ಅಂಜಿನಪ್ಪ ಮಾಳಗಿ, ಶ್ರೀಕಾಂತ, ನಾಗರಾಜ್, ನಿಂಗಪ್ಪ, ನಾಗೇಂದ್ರಪ್ಪ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಉಪ್ಪಾರ ನೌಕರರಿಂದ ಪ್ರತಿಭಾ ಪುರಸ್ಕಾರ

ಹರಪನಹಳ್ಳಿ: ಹಬ್ಬ ಹರಿದಿನಗಳ ಆಚರಣೆಯಲ್ಲಿ ಮೇಲ್ವರ್ಗದ ಸಮುದಾಯಗಳಿಗಿಂತ ಶೋಷಿತ ವರ್ಗದವರೇ ಹೆಚ್ಚು ದುಂದುವೆಚ್ಚ ಮಾಡುತ್ತಿರುವುದು ಕಳವಳಕಾರಿ...

Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.