Home ಎಂ.ಪಿ.ಲತಾ ಅವರ 2026ನೇ ವರ್ಷದ ಕ್ಯಾಲೆಂಡರ್ ಬಿಡುಗಡೆ
Homeಸುದ್ದಿಗಳು

ಎಂ.ಪಿ.ಲತಾ ಅವರ 2026ನೇ ವರ್ಷದ ಕ್ಯಾಲೆಂಡರ್ ಬಿಡುಗಡೆ

Share
ಎಂ.ಪಿ.ಲತಾ ಅವರ 2026ನೇ ವರ್ಷದ ಕ್ಯಾಲೆಂಡರ್ ಬಿಡುಗಡೆ
Share

ಹರಪನಹಳ್ಳಿ : ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ಅವರು ಹೊರತಂದಿರುವ 2026ನೇ ಸಾಲಿನ  ಕ್ಯಾಲೆಂಡರ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹಮ್ಮದ್ ಖಾನ್ ಅವರು ಗುರುವಾರ ಬಿಡುಗಡೆ ಮಾಡಿದರು.

ತಾಲ್ಲೂಕಿನ ತಾವರಗುಂದಿಯಲ್ಲಿ ಮಕರ ಸಂಕ್ರಮಣ ನಿಮಿತ್ತ ಆಯೋಜಿಸಿದ್ದ ಜಾನಪದ ಸಂಕ್ರಾಂತಿ, ಮಕರ ಸಂಕ್ರಮಣ ಔತಣಕೂಟ ಸಮಾರಂಭದಲ್ಲಿ ಅವರು ಬಿಡುಗಡೆ ಮಾಡಿದರು. ಕ್ಯಾಲೆಂಡರ್ ನಲ್ಲಿ ಹಂಪಿ ಉತ್ಸವದ ರೂವಾರಿಯಾಗಿದ್ದ ಎಂ.ಪಿ.ಪ್ರಕಾಶ್ ಮತ್ತು ಹರಪನಹಳ್ಳಿಗೆ 371ಜೆ ಕಲ್ಪಿಸಲು ಹೋರಾಟ ಮಾಡಿ ಯಶಸ್ಸು ಕಂಡಿದ್ದ ಎಂ.ಪಿ.ರವೀಂದ್ರ ಮತ್ತು ಅವರ ತಾಯಿ ಎಂ.ಪಿ.ರುದ್ರಾಂಬ ಭಾವಚಿತ್ರಗಳಿವೆ. ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ತೆರಳಿ ಜನರೊಂದಿಗೆ ಚರ್ಚಿಸುವುದು, ಶಾಸಕಿ ಲತಾ ಅವರು ಹರಪನಹಳ್ಳಿ ವಿದಾನಸಭಾ ಕ್ಷೇತ್ರಕ್ಕೆ ತಂದು ಅನುಷ್ಠಾನಗೊಳಿಸುವ ಕಾಮಗಾರಿಗಳ ಭೂಮಿಪೂಜೆ ಪೊಟೊಗಳನ್ನು ಎಲ್ಲ ಪುಟಗಳಲ್ಲಿ ಅಳವಡಿಸಲಾಗಿದೆ.

ತಾಲ್ಲೂಕಿನಲ್ಲಿ ಜರುಗುವ ಪ್ರಮುಖ ಜಾತ್ರೆ, ಹಬ್ಬ ಹರಿದಿನಗಳ ಬಗ್ಗೆ ಶಾಸಕರು ಶುಭ ಕೋರಿರುವ ಮಾಹಿತಿ ನಮೂದಿಸಲಾಗಿದೆ. ಶಾಸಕರಾದ ಎಂ.ಪಿ.ಲತಾ ಮಲ್ಲಿಕಾರ್ಜುನ್, ಹೊನ್ನಾಳಿ ಶಾಸಕ ಡಿ.ಜೆ.ಶಾಂತನಗೌಡ, ವಕ್ಫ್ ಬೋರ್ಡ್ ಅಧ್ಯಕ್ಷ ಅನ್ವರ್, ಹುಡಾ ಅಧ್ಯಕ್ಷ ಹೆಚ್.ಎನ್.ಎಫ್.ಇಮಾಮ್ ನಿಯಾಜಿ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿಜಿಲ್ಲಾ ಪಂಚಾಯತ್ ಸಿಇಓ ನೋಂಗ್ಜಾಯ್ ಮಹಮದ್ ಅಲಿ ಅಕ್ರಂ ಷಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ, ಮುಖಂಡರಾದ ಎಚ್.ಎಂ.ಮಲ್ಲಿಕಾರ್ಜುನ, ಕೀರ್ತಿ ಕುಮಾರ, ಎಚ್.ಎಂ.ಗೌತಮ್ ಪ್ರಭು, ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಉದಯಶಂಕರ, ಮತ್ತೂರು ಬಸವರಾಜ, ಸಾಸ್ವಿಹಳ್ಳಿ ನಾಗರಾಜ್ ಇತರರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.