Home ಮೈದೂರು ಗ್ರಾಮದಲ್ಲಿ ರೈತ ಧ್ವನಿ : ‘ಹಸಿರು ಸೇನೆ’ ನಾಮಫಲಕ ಉದ್ಘಾಟನೆ
Homeಕೃಷಿ

ಮೈದೂರು ಗ್ರಾಮದಲ್ಲಿ ರೈತ ಧ್ವನಿ : ‘ಹಸಿರು ಸೇನೆ’ ನಾಮಫಲಕ ಉದ್ಘಾಟನೆ

Share
Share

ಹರಪನಹಳ್ಳಿ:ತಾಲ್ಲೂಕಿನ ಮೈದೂರು ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೂತನ ಗ್ರಾಮ ಘಟಕದ ನಾಮಫಲಕ ಉದ್ಘಾಟನಾ ಸಮಾರಂಭವು ಸಡಗರದಿಂದ ನೆರವೇರಿತು.ಉದ್ಘಾಟಿಸಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಎನ್.ಭರಮಪ್ಪ ಮಾತನಾಡಿ, ರೈತರ ಸವಾಲುಗಳನ್ನು ಎದುರಿಸಲು ಮೈದೂರು ಗ್ರಾಮಕ್ಕೆ ಈಗ ಒಂದು ಮಿಲಿಟರಿ ಬಂದಿದೆ. ಆ ಮಿಲಿಟರಿಯ ಮತ್ತೊಂದು ಹೆಸರೇ ಹಸಿರು ಸೇನೆ ಎಂದರು.

ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ಎಚ್. ಬಸವರಾಜ್ ಮಾತನಾಡಿ, ನೆಲ, ಜಲ ಮತ್ತು ರೈತರ ಹಕ್ಕುಗಳ ರಕ್ಷಣೆಗಾಗಿ ರೈತ ಸಂಘದ ಹೋರಾಟ ನಿರಂತರ ಆಗಿರುತ್ತದೆ ಎಂದರು. ಹಸಿರು ಶಾಲನ್ನು ಧರಿಸಿದ್ದ ನೂರಾರು ರೈತರು ಒಟ್ಟಾಗಿ ರೈತ ಸಂಘದ ತತ್ವ ಮತ್ತು ಆದರ್ಶಗಳಿಗೆ ಬದ್ಧರಾಗಿರುವುದಾಗಿ ಪ್ರತಿಜ್ಞೆ ಮಾಡಿದರು. ಕೃಷಿ ಸಾಲ ಮನ್ನಾ, ಸಮರ್ಪಕ ವಿದ್ಯುತ್ ಸರಬರಾಜು, ಬೆಳೆಗಳಿಗೆ ವೈಜ್ಞಾನಿಕ ಬೆಲೆ ಹಾಗೂ ನೀರಾವರಿ ಸೌಲಭ್ಯಗಳ ಕುರಿತು ಸಮಾರಂಭದಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು.

ವೇದಿಕೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಕೆ. ಮರುಳಸಿದ್ದಪ್ಪ, ಅಂಕಲಿ ರಾಮಣ್ಣ, ಎಂ. ಕೊಟ್ರೇಶ್, ಎನ್. ನಾಗರಾಜ್, ನಬಿಸಾಬ್, ಶ್ರೀಧರ್ ಒಡೆಯರ್, ಎಚ್. ಬಸವರಾಜ, ಜಿ. ನಿಂಗಪ್ಪ, ಎ. ಜಗದೀಶ್, ಎಂ. ರವಿ ಸೇರಿದಂತೆ ಹಲವು ಪ್ರಮುಖರು ಹಾಗೂ ಗ್ರಾಮದ ರೈತ ಬಾಂಧವರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.