Home ಸುದ್ದಿಗಳು ಮತ್ತಿಹಳ್ಳಿ : ಕ್ಲಸ್ಟರ್ ಪ್ರತಿಭಾ ಕಾರಂಜಿ
ಸುದ್ದಿಗಳು

ಮತ್ತಿಹಳ್ಳಿ : ಕ್ಲಸ್ಟರ್ ಪ್ರತಿಭಾ ಕಾರಂಜಿ

Share
mattihalli, cluster, harapanahalli
Share

ಹರಪನಹಳ್ಳಿ : ತಾಲ್ಲೂಕಿನ ಮತ್ತಿಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಎನ್‍.ಶೀರನಹಳ್ಳಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿತು.

ಪ್ರಧಾನಮಂತ್ರಿ ಪೋಷಣ್ ಅಭಿಯಾನದ ಸಹಾಯಕ ನಿರ್ದೇಶಕ ನಾಗರಾಜ್ ಮಾತನಾಡಿ, ಮಕ್ಕಳಲ್ಲಿ ಅಡಗಿರುವ ಸುಪ್ತಪ್ರತಿಭೆ ಹೊರತರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ. ಶಿಕ್ಷಕರು ಅರ್ಹ ಮಕ್ಕಳನ್ನು ಗುರುತಿಸಿ, ಅವರಲ್ಲಿರುವ ಪ್ರತಿಭೆಗೆ ಪ್ರೋತ್ಸಾಹ ನೀಡಬೇಕು ಎಂದು ಸಲಹೆ ನೀಡಿದರು.

ಸಂಪನ್ಮೂಲಕ ಶಿಕ್ಷಕಿ ಕೆ.ರೇಖಾ ಮಾತನಾಡಿ, ಮಕ್ಕಳ ಪ್ರತಿಭೆಗೆ ಮಹತ್ವ ನೀಡಬೇಕು ಎಂದು ಹೇಳಿದರು. ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಗುರುಮೂರ್ತಿ,   ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕ ಬಂದೋಳು ಸಿದ್ದಪ್ಪ, ಎಸ್‍ಡಿಎಂಸಿ ಅಧ್ಯಕ್ಷ ಬಸವರಾಜ್, ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ್ ಪಾಟೀಲ್, ಶಿವಣ್ಣ, ಮಲ್ಲನಾಯ್ಕ, ಬಾಬನಗೌಡ, ಶ್ರೀಕಾಂತ್, ಶಿವರುದ್ರಯ್ಯ,  ಮಂಜುನಾಥ, ಚಿತ್ರಶಾಲಿನಿ, ಸಿಂಧೂ, ಜಯಶ್ರೀ, ಸೌಭಾಗ್ಯಮ್, ಕೆಂಚಪ್ಪ ಹಾಗೂ ವಿದ್ಯಾರ್ಥಿಗಳಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.