Home ಅಲ್ಪಸಂಖ್ಯಾತ : ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
Homeಶಿಕ್ಷಣ

ಅಲ್ಪಸಂಖ್ಯಾತ : ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Share
Share

ವಿಜಯನಗರ (ಹೊಸಪೇಟೆ) :  2026-27ನೇ ಸಾಲಿಗೆ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮ, ಪದವಿ, ಸ್ನಾತಕೊತ್ತರ ಪದವಿ, ತಾಂತ್ರಿಕ ಮತ್ತು ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯದ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಹಾಗೂ (1 ರಿಂದ 8 ನೇ ತರಗತಿ) ಶಾಲೆಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನವಾಗಿದೆ.

ಅರ್ಜಿಸಲ್ಲಿಸಲು ಆಸಕ್ತಿ ಇರುವ  ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಕಳೆದ ಸೆಮಿಸ್ಟರ್ ಅಥವಾ ವಾರ್ಷಿಕ ಪರೀಕ್ಷೆಯಲ್ಲಿ ಶೇ.50ರಷ್ಟು ಅಂಕ ಪಡೆದಿರಬೇಕು. ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿದ್ದು, ಪಿಯುಸಿ, ಡಿಪ್ಲೊಮಾ, ಇನ್ನಿತರೆ ಪದವಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪೋಷಕರ ಕುಟುಂಬದ ವಾರ್ಷಿಕ ಆದಾಯವು ರೂ.2 ಲಕ್ಷ ಹಾಗೂ 1 ರಿಂದ 8ನೇ ತರಗತಿ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಯಾ 1 ಲಕ್ಷ ಮೀರಿರಬಾರದು.

ವಿಶೇಷ ಸೂಚನೆ: ಶುಲ್ಕ ಮರುಪಾವತಿ ಯೋಜನೆ ಪ್ರಯೋಜನೆ ಪಡೆಯಲು ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮತ್ತು ಎನ್‌ಪಿಸಿಐ ಮ್ಯಾಪಿಂಗ್ ಆಕ್ಟಿವ್ ಆಗಿರುವ ಬಗ್ಗೆ ಖಚಿತ ಪಡಿಸಿಕೊಳ್ಳತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ  http://dom.karnataka.gov.in  ವೆಬ್ ಸೈಟ್ ಅಥವಾ ಜಿಲ್ಲಾ ಕಛೇರಿ ಮತ್ತು ಜಿಲ್ಲಾ ಹಾಗೂ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಅಥವಾ ಹೆಲ್ಪ್ ಡೆಸ್ಕ್ ನಂ. 8277799990, 8050435366, 9980237242, 7353696984, 8050435366, 9060330060 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.