Home ಅಂತರರಾಷ್ಟ್ರೀಯ ಯೋಗ ದಿನಾಚರಣೆ
Homeಶಿಕ್ಷಣ

ಅಂತರರಾಷ್ಟ್ರೀಯ ಯೋಗ ದಿನಾಚರಣೆ

Share
Share

ಕಡಗಂಚಿಯ ಮೌಂಟ್ ಕಾರ್ಮೆಲ್ ಸಿಬಿಎಸ್ಇ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ವ್ಯವಸ್ಥಾಪಕರಾದ ರೆ. ಫಾ. ಸಿಪ್ರಿಯನ್ ಫರ್ನಾಂಡಿಸ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಫಾ. ವಿಲಿಯಂ ಮಿರಾಂದ ಭಾಗವಹಿಸಿದ್ದರು. ಶಾಲೆಯ ಪ್ರಾಂಶುಪಾಲರಾದ ಫಾ. ಸಂದೀಪ್ ಗೋವಿಯಾಸ್, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಫಾ. ವಿಲಿಯಂ ಮಿರಾಂದ ಅವರು ಯೋಗದ ಉಗಮ, ಅದರ ಇತಿಹಾಸ ಹಾಗೂ ಇಂದಿನ ಜೀವನದಲ್ಲಿ ಯೋಗದ ಮಹತ್ವವನ್ನು ವಿವರಿಸಿದರು. ಯೋಗವು ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಆರೋಗ್ಯವನ್ನು ವೃದ್ಧಿಸುವುದರ ಜೊತೆಗೆ ಏಕಾಗ್ರತೆ, ಆತ್ಮವಿಶ್ವಾಸ ಮತ್ತು ಶಿಸ್ತು ಬೆಳೆಸಲು ಸಹಕಾರಿಯಾಗಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.

ನಂತರ ಶ್ರೀ ಶರಣಪ್ಪ ಸರ್ ಹಾಗೂ ಕೆಲವು ವಿದ್ಯಾರ್ಥಿಗಳು ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿದರು. ಅವರ ಮಾರ್ಗದರ್ಶನದಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಯೋಗಾಭ್ಯಾಸದಲ್ಲಿ ಸಕ್ರಿಯವಾಗಿ ಭಾಗವಹಿಸಿ ವಿವಿಧ ಆಸನಗಳನ್ನು ಅಭ್ಯಾಸ ಮಾಡಿದರು. ಕಾರ್ಯಕ್ರಮವು ಯೋಗದ ಮಹತ್ವದ ಬಗ್ಗೆ ಅರಿವು ಮೂಡಿಸುವುದರೊಂದಿಗೆ ಆರೋಗ್ಯಕರ ಜೀವನಶೈಲಿಯ ಸಂದೇಶವನ್ನು ಸಾರಿತು. ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.