Home ಸುದ್ದಿಗಳು ಕಲೆ ಧರ್ಮದೇವರ ಬಗ್ಗೆ ನೀಲಗುಂದ ಶ್ರೀಗಳ ಮಾತು
ಕಲೆಸುದ್ದಿಗಳು

ಧರ್ಮದೇವರ ಬಗ್ಗೆ ನೀಲಗುಂದ ಶ್ರೀಗಳ ಮಾತು

Share
harapanahalli, adibasaveshara, neelagunda shri
Share

 ಹರಪನಹಳ್ಳಿ : ಧರ್ಮ, ದೇವರು ಮೇಲಿನ ನಂಬಿಕೆ ಧನಾತ್ಮಕ ಚಿಂತನೆಗಳನ್ನು ಹೆಚ್ಚಿಸುತ್ತವೆ ಎಂದು ನೀಲಗುಂದ ಗುಡ್ಡದ ವಿರಕ್ತಮಠದ ಚನ್ನಬಸವ ಶಿವಯೋಗಿ ಸ್ವಾಮೀಜಿ ಅನಿಸಿಕೆ ವ್ಯಕ್ತಪಡಿಸಿದರು.

ನಗರದ ಹರಿಹರ ರಸ್ತೆ ಆದಿಬಸವೇಶ್ವರ ನಗರದ ವರತೇಭೂತಪ್ಪ ಸ್ವಾಮಿ, ರೇಣುಕಾ ಯಲ್ಲಮ್ಮದೇವಿ ಕಾರ್ತಿಕೋತ್ಸವ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು. ದೀಪಾರಾಧನೆಯಿಂದ ಅಜ್ಞಾನ, ಅಂಧಕಾರ ತೊಲಗುತ್ತದೆ. ನಕಾರಾತ್ಮಕ ಶಕ್ತಿ ದೂರಮಾಡಿ ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಮನುಷ್ಯ ಮನುಷ್ಯರನ್ನು ಪ್ರೀತಿಸುವಂತಾಗಬೇಕು ಎಂದರು.

ಶ್ರೀ ಶರಣ ಬಸವ ಬುದ್ದ ಭೀಮಜೀ ವಿದ್ಯಾಸಂಸ್ಥೆ ಕಾರ್ಯದರ್ಶಿ ಗುಂಡಗತ್ತಿ ಕೊಟ್ರಪ್ಪ ಮಾತನಾಡಿ, ಭಕ್ತಿಯಲ್ಲಿ ಶ್ರದ್ಧೆಯಿದ್ದರೆ ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.   ಪ್ರಧಾನ ಅರ್ಚಕ ವಿ.ಸಣ್ಣ ಅಜ್ಜಯ್ಯ, ಬೆಣ್ಣಿಹಳ್ಳಿ ಪಂಚಾಕ್ಷರಿ, ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪುರಸ್ಕೃತ  ಕೆ.ಉಚ್ಚೆಂಗೆಪ್ಪ, ಗೊಂದಲಿಗರ ಸಮಾಜದ ರಾಜ್ಯಾಧ್ಯಕ್ಷ ಗೊಂದಾಳಿ ಗೋಪಾಲ ಮಾತನಾಡಿದರು. ಅರಸಿಕೇರಿ ಕೊಟ್ರಯ್ಯ, ಅಜ್ಜಯ್ಯ ಸ್ವಾಮಿ, ವೀರಣ್ಣ, ಪ್ರಾಂಶುಪಾಲ ಕಲ್ಯಾಣದವರ್, ಇಬ್ರಾಹಿಂ ಸಾಹೇಬ್, ರೇಣುಕಾಬಾಯಿ, ಕೃಷ್ಣಪ್ಪ, ಹೆಗ್ಗಪ್ಪ, ಮೈಲಾರಪ್ಪ, ಚಿಗಟೇರಿ ಕರಿಬಸಪ್ಪ, ರಾಮಚಂದ್ರಪ್ಪ, ಮಾರುತಿ ಹಾಗೂ ಆದಿಬಸವೇಶ್ವರ ನಗರವಾಸಿಗಳಿದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Homeಸುದ್ದಿಗಳು

ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026ನೇ ಸಾಲಿಗೆ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟು ಜಿಲ್ಲಾ ಮಟ್ಟದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.