Home  ಹಗರಿ ಗಜಾಪುರ: ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕರೆ
Homeಶಿಕ್ಷಣ

 ಹಗರಿ ಗಜಾಪುರ: ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕರೆ

Share
Share

ಹರಪನಹಳ್ಳಿ : ಬಾಲ ಕಾರ್ಮಿಕ ಪದ್ಧತಿಯು ಸಮಾಜದ ದೊಡ್ಡ ಪಿಡುಗಾಗಿದ್ದು, ಪ್ರತಿಯೊಬ್ಬ ಮಗುವಿಗೂ ಶಿಕ್ಷಣ, ಆರೋಗ್ಯ ಹಾಗೂ ಸುರಕ್ಷಿತ ಬಾಲ್ಯ ಸಿಗುವಂತೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಚಿಗಟೇರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ (ಎಸ್.ಐ) ನಾಗರತ್ನಮ್ಮ ತಿಳಿಸಿದರು. ಇಲ್ಲಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ‘ಭಾವೈಕ್ಯತೆ ಸಮಾಜಮುಖಿ ಟ್ರಸ್ಟ್’ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ’ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮುಖ್ಯ ಅತಿಥಿಯಾಗಿದ್ದ ಬಿ. ಭಾಗ್ಯ ಮಾತನಾಡಿ, “18ನೇ ಶತಮಾನದ ಕೈಗಾರಿಕಾ ಕ್ರಾಂತಿಯ ವೇಳೆ ಮಕ್ಕಳನ್ನು ಕಡಿಮೆ ಕೂಲಿಗೆ ಅಪಾಯಕಾರಿ ಕೆಲಸಗಳಿಗೆ ದೂಡುವ ಮೂಲಕ ಈ ಪದ್ಧತಿ ಆರಂಭವಾಯಿತು. ಪೋಷಕರು ಮಕ್ಕಳನ್ನು ದುಡಿಮೆಗೆ ತಳ್ಳದೆ ಕಡ್ಡಾಯವಾಗಿ ಶಾಲೆಗೆ ಕಳುಹಿಸಬೇಕು” ಎಂದರು. ಮತ್ತೊಬ್ಬ ಗಣ್ಯರಾದ ಬಳಿಗನೂರು ಕೊಟ್ರೇಶ್ ಮಾತನಾಡಿ, ಬಡತನದ ನೆಪವೊಡ್ಡಿ ಮಕ್ಕಳಿಗೆ ಶಿಕ್ಷಣ ವಂಚಿತರನ್ನಾಗಿ ಮಾಡಬಾರದು.

ಮಕ್ಕಳ ಭವಿಷ್ಯ ಉಜ್ವಲಗೊಳಿಸಲು ಪೋಷಕರು ಮುಂದಾಗಬೇಕು ಎಂದು ಕರೆ ನೀಡಿದರು. ಇದೇ ವೇಳೆ ವಿದ್ಯಾರ್ಥಿಗಳಿಗೆ ಬಾಲ ಕಾರ್ಮಿಕ ಪದ್ಧತಿಯ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಶಿಕ್ಷಕ ಕುಮಾರಸ್ವಾಮಿ, ಶಿಕ್ಷಕ ವೃಂದ, ಭಾವೈಕ್ಯತೆ ಸಮಾಜಮುಖಿ ಟ್ರಸ್ಟ್‌ನ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಉಪ್ಪಾರ ನೌಕರರಿಂದ ಪ್ರತಿಭಾ ಪುರಸ್ಕಾರ

ಹರಪನಹಳ್ಳಿ: ಹಬ್ಬ ಹರಿದಿನಗಳ ಆಚರಣೆಯಲ್ಲಿ ಮೇಲ್ವರ್ಗದ ಸಮುದಾಯಗಳಿಗಿಂತ ಶೋಷಿತ ವರ್ಗದವರೇ ಹೆಚ್ಚು ದುಂದುವೆಚ್ಚ ಮಾಡುತ್ತಿರುವುದು ಕಳವಳಕಾರಿ...

Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.