Home ಅಕ್ಟೋಬರ್ 2 ಮತ್ತು 4 ರಂದು ಕೆಇಎ ನೇಮಕಾತಿ ಪರೀಕ್ಷೆ: ಪಾರದರ್ಶಕತೆಗೆ ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಸೂಚನೆ
Homeಸುದ್ದಿಗಳು

ಅಕ್ಟೋಬರ್ 2 ಮತ್ತು 4 ರಂದು ಕೆಇಎ ನೇಮಕಾತಿ ಪರೀಕ್ಷೆ: ಪಾರದರ್ಶಕತೆಗೆ ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಸೂಚನೆ

Share
Share

ವಿಜಯನಗರ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಕ್ಟೋಬರ್ 2 ಮತ್ತು 4 ರಂದು ನಡೆಯಲಿರುವ ಭೂ ಮಾಪಕರ ಹಾಗೂ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ನಡೆಸುತ್ತಿದ್ದು, ಯಾವುದೇ ಪರೀಕ್ಷಾ ಅಕ್ರಮಗಳಿಗೆ ಆಸ್ಪದವಿಲ್ಲದಂತೆ ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಪಿ. ಎನ್. ಲೋಕೇಶ್ ತಿಳಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.

ಅಕ್ಟೋಬರ್ 2 ರಂದು ಭೂ ಮಾಪಕರ ಪರೀಕ್ಷೆ ನಡೆಯಲಿದ್ದು, ಹೊಸಪೇಟೆ ನಗರದ 7 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2,872 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕೆಇಎ ಹೊಸ ಪ್ರಯೋಗವೊಂದನ್ನು ಜಾರಿಗೆ ತಂದಿದ್ದು, ಅಭ್ಯರ್ಥಿಯ ಹೆಸರು ಮತ್ತು ರೋಲ್ ಸಂಖ್ಯೆ ಮುಂಚಿತವಾಗಿಯೇ ಮುದ್ರಿಸಿರುವ ವೈಯಕ್ತಿಕರಿಸಿದ ಒಎಂಆರ್ ಶೀಟ್ ನೀಡಲಾಗುತ್ತದೆ. ಮತ್ತು ಅಕ್ಟೋಬರ್ 4 ರಂದು ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ ನಡೆಯಲಿದ್ದು, ಹೊಸಪೇಟೆ, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಹಡಗಲಿ, ಹರಪನಹಳ್ಳಿ ವ್ಯಾಪ್ತಿಯ ಒಟ್ಟು 23 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಆಯೋಜಿಸಲಾಗಿದೆ. ಈ ಪರೀಕ್ಷೆಗೆ ಒಟ್ಟು 10,923 ಅಭ್ಯರ್ಥಿಗಳು ಹಾಜರಾಗಲಿದ್ದಾರೆ.

ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲಿ ಗರಿಷ್ಠ 24 ಅಭ್ಯರ್ಥಿಗಳಿಗೆ ಮಾತ್ರ ಆಸನದ ವ್ಯವಸ್ಥೆ ಮಾಡಲಾಗಿರುತ್ತದೆ. ಅಭ್ಯರ್ಥಿಗಳು ಕೊನೆಯ ಕ್ಷಣದ ಗೊಂದಲಗಳನ್ನು ತಪ್ಪಿಸಲು ನಿಗದಿತ ಸಮಯಕ್ಕಿಂತ ಮುಂಚಿತವಾಗಿಯೇ ಪರೀಕ್ಷಾ ಕೇಂದ್ರಕ್ಕೆ ಆಗಮಿಸಬೇಕು. ಪರೀಕ್ಷಾ ಕೊಠಡಿಗೆ ಪ್ರವೇಶಿಸುವ ಮುನ್ನ ಅಭ್ಯರ್ಥಿಗಳನ್ನು ನಿಖರ ತಪಾಸಣೆಗೆ ಒಳಪಡಿಸಲಾಗುತ್ತದೆ.

ಪ್ರಶ್ನೆಪತ್ರಿಕೆ ಹಾಗೂ ಒಎಂಆರ್ ಶೀಟ್‌ಗಳನ್ನು ಸುರಕ್ಷಿತವಾಗಿ ತಲುಪಿಸಲು ಮತ್ತು ಪರೀಕ್ಷೆ ಮುಗಿದ ತಕ್ಷಣ ಸುರಕ್ಷಿತವಾಗಿ ವಾಪಸ್ ತರಲು ಮಾರ್ಗ ಅಧಿಕಾರಿಗಳು, ಫ್ಲೈಯಿಂಗ್ ಸ್ಕ್ವಾಡ್ ಹಾಗೂ ವೀಕ್ಷಕರನ್ನು ನಿಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ತಿಮ್ಮಪ್ಪ ಸೇರಿದಂತೆ ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನ

ವಿಜಯನಗರ : ಪ್ರಸಕ್ತ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾಭೂಮಿಯಲ್ಲಿ ಅಕ್ಟೋಬರ್ 21 ರಂದು ನಡೆಯಲಿರುವ ಪ್ರವರ್ತನಾ...

Homeಸುದ್ದಿಗಳು

ಎಕರೆಗೆ 25 ಸಾವಿರ ಪರಿಹಾರಕ್ಕೆ ಒತ್ತಾಯ

ಹರಪನಹಳ್ಳಿ : ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸರ್ಕಾರ ತಕ್ಷಣವೇ ಎಕರೆಗೆ...

Homeಸುದ್ದಿಗಳು

ನನ್ನೊಳಗಿನ ಮೌನದ ಮಾತು’ ಕವನ ಸಂಕಲನ

ಹರಪನಹಳ್ಳಿ: ಇಂದಿನ ದಿನಗಳಲ್ಲಿ ಓದುಗರ ಕೊರತೆಯಿಂದಾಗಿ ಕಾವ್ಯದ ಅಭಿರುಚಿ ಕಡಿಮೆಯಾಗುತ್ತಿರುವುದು ಆತಂಕಕಾರಿ ಸಂಗತಿ ಎಂದು ಸಾಹಿತಿ...

Homeಸುದ್ದಿಗಳು

ಉಪನ್ಯಾಸಕ ಡಾ. ಅಜ್ಜಯ್ಯಗೆ ಅಂತರರಾಷ್ಟ್ರೀಯ ‘ಗೋಲ್ಡನ್ ಐಕಾನ್’ ಪ್ರಶಸ್ತಿ ಗರಿ

ಹರಪನಹಳ್ಳಿ : ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಅತ್ಯುತ್ತಮ ಪ್ರಬಂಧ ಮಂಡನೆ ಮಾಡಿದ ವಿಜಯನಗರ ಜಿಲ್ಲೆಯ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.