Home ಮುಂದಿನ ಮುಖ್ಯಮಂತ್ರಿ ಡಿ.ಕೆ‌.ಶಿವಕುಮಾರ
Homeರಾಜಕೀಯ

ಮುಂದಿನ ಮುಖ್ಯಮಂತ್ರಿ ಡಿ.ಕೆ‌.ಶಿವಕುಮಾರ

Share
Share

ಬೆಂಗಳೂರು:ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿದ್ದ ನಾಯಕತ್ವ ಬದಲಾವಣೆಯ ಬಿರುಸಿನ ಚರ್ಚೆಗಳಿಗೆ ಅಂತಿಮ ತೆರೆಬಿದ್ದಿದ್ದು, ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿಗಳ ಜೊತೆ ನಡೆದ ಬ್ರೇಕ್‌ಫಾಸ್ಟ್ ಮೀಟಿಂಗ್ (ಉಪಾಹಾರ ಕೂಟ) ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,

ಹೈಕಮಾಂಡ್ ಸೂಚನೆ ಮೇರೆಗೆ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 3 ಗಂಟೆಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಹೈಕಮಾಂಡ್ ಮಟ್ಟದಲ್ಲಿ ಈಗಾಗಲೇ ಚರ್ಚೆಯಾಗಿ ತೀರ್ಮಾನಕ್ಕೆ ಬರಲಾಗಿದೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ವರಿಷ್ಠರು ಸೂಚನೆ ಕೊಟ್ಟಿದ್ದಾರೆ ಎಂದು ಖುದ್ದು ಸಿದ್ದರಾಮಯ್ಯ ಅವರೇ ಸಭೆಯಲ್ಲಿ ತಿಳಿಸಿದ್ದಾರೆ. ವರಿಷ್ಠರ ನಿರ್ಧಾರಕ್ಕೆ ಅವರು ಒಪ್ಪಿಕೊಂಡಿದ್ದಾರೆ ಎಂದು ಅವರು ವಿವರಿಸಿದರು.

ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಹೈಕಮಾಂಡ್ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 3 ಗಂಟೆಗೆ ರಾಜಭವನಕ್ಕೆ ತೆರಳಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಈ ಮೂಲಕ ರಾಜ್ಯ ಕಾಂಗ್ರೆಸ್‌ನಲ್ಲಿ ಬಹುದಿನಗಳಿಂದ ನಡೆಯುತ್ತಿದ್ದ ಸಿಎಂ ಬದಲಾವಣೆ ಚರ್ಚೆಗೆ ಅಧಿಕೃತವಾಗಿ ಬ್ರೇಕ್ ಬಿದ್ದಂತಾಗಿದೆ.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರೋಗನಿರೋಧಕ ಶಕ್ತಿ ಹೆಚ್ಚಿಸಲು ತಾಯಿಯ ಎದೆಹಾಲು ಅತ್ಯಗತ್ಯ: ಡಿಹೆಚ್‌ಒ ಡಾ.ಟಿ.ಲಿಂಗರಾಜು

ವಿಜಯನಗರ (ಹೊಸಪೇಟೆ) : ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಹುಮುಖ್ಯವಾಗಿದೆ....

Homeಸುದ್ದಿಗಳು

ಸಂಪುಟ ವಿಸ್ತರಣೆ ಕೌತುಕಕ್ಕೆ ಇಂದು ತೆರೆ: ಸಂಜೆ ರಾಜಭವನದಲ್ಲಿ 20 ನೂತನ ಸಚಿವರ ಪದಗ್ರಹಣ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ...

Homeಶಿಕ್ಷಣ

ಬಿ.ಐ.ಇ.ಟಿ. ಯಲ್ಲಿ ನೈಲಿಟ್‌ನ 90 ಗಂಟೆಗಳ ‘ಚಿಪ್‌ಕ್ರಾಫ್ಟ್’ ಸೆಮಿಕಂಡಕ್ಟರ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ : ಬಾಪೂಜಿ ಇಂಜಿನಿಯರಿಂಗ್  ಮತ್ತು ತಾಂತ್ರಿಕ ಮಹಾವಿದ್ಯಾಲಯ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್...

Homeಸುದ್ದಿಗಳು

ನರೇಗಾ ಮಾದರಿ ಕಾಮಗಾರಿ ಮರುಸ್ಥಾಪನೆಗೆ ಆಗ್ರಹ

ಹರಪನಹಳ್ಳಿ : ಹೊಸದಾಗಿ ಜಾರಿಗೆ ತಂದಿರುವ ವಿಬಿಜಿ ರಾಮ್‍ಜಿ ಕಾಯ್ದೆಯಡಿ ಹಳೆಯ ನರೇಗಾ ಮಾದರಿ ಕಾಮಗಾರಿಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.