Home ಸುದ್ದಿಗಳು ಒನಕೆ ಓಬವ್ವ ಅಸಾಮಾನ್ಯ ಸಾಹಸಿ
ಸುದ್ದಿಗಳು

ಒನಕೆ ಓಬವ್ವ ಅಸಾಮಾನ್ಯ ಸಾಹಸಿ

Share
onake obavva jayanti, harapanahalli
Share

ಹರಪನಹಳ್ಳಿ : ಸಾಮಾನ್ಯ ಗೃಹಿಣಿಯಾಗಿದ್ದ ಒನಕೆ ಓಬವ್ವ ಅಸಾಮಾನ್ಯ ಸಾಹಸ ಬೆಚ್ಚಿ ಬೀಳಿಸುತ್ತದೆ ಎಂದು ಕೊಟ್ಟೂರು ಸರ್ಕಾರಿ ಪಿಯು ಕಾಲೇಜ್ ಉಪನ್ಯಾಸಕ  ಜಿ.ಕರಿಬಸಪ್ಪ ಹೇಳಿದರು.

ನಗರದ ತಾಲ್ಲೂಕು ಆಡಳಿತ ಸೌಧದಲ್ಲಿ ಜರುಗಿದ ಒನಕೆ ಓಬವ್ವ ಜಯಂತಿ ಸಮಾರಂಭದಲ್ಲಿ ಅವರು ಉಪನ್ಯಾಸ ನೀಡಿದರು. ಗುಡೆಕೋಟೆ ಪಾಳೆಗಾರರಲ್ಲಿ ಕಹಳೆಯವರಾಗಿ ಸೇವೆ ಸಲ್ಲಿಸುತ್ತಿದ್ದ ಛಲವಾದಿ ಜನಾಂಗದ ಚೆನ್ನಪ್ಪನ ಮಗಳಾಗಿ ಜನಿಸಿದ್ದ ಓಬವ್ವ ಸ್ವಾಮಿನಿಷ್ಠೆ, ಸಮಯಸ್ಪೂರ್ತಿ, ತ್ಯಾಗಕ್ಕೆ ಹೆಸರಾಗಿದ್ದಾರೆ. ಸಂಕಷ್ಟಗಳಲ್ಲಿಯೇ ಬೆಳೆದಿದ್ದ ಓಬವ್ವ ಸಾಮಾನ್ಯ ಮಹಿಳೆ ಅಷ್ಟೆ, ಆದರೆ ಇತಿಹಾಸದಲ್ಲಿ ಅವರ ಸಾಹಸವನ್ನು ಯಾರೂ ಮರೆಯದಂತೆ ದಾಖಲಿಸಿದ್ದಾರೆ ಎಂದು ಅವರ ಹೋರಾಟವನ್ನು ಸ್ಮರಿಸಿದರು.

ಉದ್ಘಾಟಿಸಿದ ಉಪವಿಬಾಗಾಧಿಕಾರಿ ಚಿದಾನಂದ ಗುರುಸ್ವಾಮಿ, ಒನಕೆ ಓಬವ್ವ ಅವರ ಸಾಹಸಗಳನ್ನು ಕೇಳಿದರೆ ಮಹಿಳೆ, ಪುರುಷರಲ್ಲಿ ಸ್ಪೂರ್ತಿಯ ಚಿಲುಮೆ ಚಿಮ್ಮುತ್ತದೆ. ಓಬವ್ವಳ ಸಾಹಸಮಯ ಜೀವನ ಆದರ್ಶವಾಗಿದೆ ಎಂದರು. ಛಲವಾದಿ ಸಮಾಜದ ಸಾಧಕರು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.   ತಹಶೀಲ್ದಾರ ಗಿರೀಶ್ ಬಾಬು, ಛಲವಾದಿ ಸಮಾಜದ ಮುಖಂಡ ಗುಂಡಗತ್ತಿ ಕೊಟ್ರಪ್ಪ ಮಾತನಾಡಿದರು. ಬಿಸಿಎಂ ವಿಸ್ತರಣಾಧಿಕಾರಿ ಭೀಮಪ್ಪ, ಕೃಷಿ ಸಹಾಯಕ ನಿರ್ದೇಶಕ ವಿ.ಸಿ.ಉಮೇಶ್,  ಡಾ.ಬಿ.ಆರ್.ಅಂಬೇಡ್ಕರ ಸಂಘದ ಅಧ್ಯಕ್ಷ ಕೆ.ಸುಭಾಷ್, ಛಲವಾದಿ ಸಮಾಜದ ಮುಖಂಡು, ಪದಾಧಿಕಾರಿಗಳು ಹಾಗೂ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.