Home ಹೋಬಳಿ ಮಟ್ಟದ ‘ಪ್ರಜಾಸೇವೆ ಆಂದೋಲನ’ಕ್ಕೆ ಚಾಲನೆ
Homeಸುದ್ದಿಗಳು

ಹೋಬಳಿ ಮಟ್ಟದ ‘ಪ್ರಜಾಸೇವೆ ಆಂದೋಲನ’ಕ್ಕೆ ಚಾಲನೆ

Share
Share

ಹರಪನಹಳ್ಳಿ: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅರಸೀಕೆರೆ ಗ್ರಾಮದಲ್ಲಿ ಕರ್ನಾಟಕ ಸರ್ಕಾರದ ಮಹತ್ವದ ಜನಪರ ಯೋಜನೆಯಾದ ‘ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ’ ಕಾರ್ಯಕ್ರಮಕ್ಕೆ ಹರಪನಹಳ್ಳಿ ಉಪವಿಭಾಗದ ಸಹಾಯಕ ಆಯುಕ್ತರಾದ ಸುರೇಶ ಕುಮಾರ.ಟಿ. ಅವರು ಚಾಲನೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹಿಂದೆ ವಿವಿಧ ಸರ್ಕಾರಿ ಕೆಲಸಗಳನ್ನು ಮಾಡಿಸಿಕೊಳ್ಳಲು ಸಾರ್ವಜನಿಕರು ಅಧಿಕಾರಿಗಳ ಹಾಗೂ ಸರ್ಕಾರಿ ಕಚೇರಿಗಳಿಗೆ ತೆರಳಬೇಕಾಗಿತ್ತು. ಇದೀಗ ಸರ್ಕಾರದ ಜನಪರ ಆಶಯದಂತೆ ಅಧಿಕಾರಿಗಳೇ ಜನರ ಮನೆಬಾಗಿಲಿಗೆ ಬಂದು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಸರ್ಕಾರಿ ಸೇವೆಗಳನ್ನು ಒದಗಿಸುತ್ತಿದ್ದಾರೆ. ಸಾರ್ವಜನಿಕರು ಸರ್ಕಾರದ ಈ ಉತ್ತಮ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಹರಪನಹಳ್ಳಿ ತಹಶೀಲ್ದಾರ್ ಗಿರೀಶ್ ಬಾಬು ಬಿ.ವಿ. ಮಾತನಾಡಿ *ಜನರ ಬಳಿಗೆ ಸರ್ಕಾರ – ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ* ಎಂಬ ಆಶಯದೊಂದಿಗೆ ಹಮ್ಮಿಕೊಂಡಿರುವ ‘ಪ್ರಜಾಸೇವೆ ಆಂದೋಲನ’ ಗ್ರಾಮೀಣ ಭಾಗದ ಜನರಿಗೆ ಸರ್ಕಾರಿ ಸೇವೆಗಳನ್ನು ಸುಲಭವಾಗಿ ತಲುಪಿಸುವಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದರು.

ತಾಲೂಕು ಪಂಚಾಯತ್ ನ ವೀರಣ್ಣ ಲಕ್ಕಣ್ಣವರ, ಟಿ.ಹೆಚ್.ಒ. ಅರವಿಂದ, ಆರ್.ಎಫ್.ಒ. ಗಿರೀಶ್, ಆರ್.ಐ. ನನ್ನೇಸಾಬ್, ವಿಶ್ವನಾಥ ಎನ್. ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಅರಸೀಕೆರೆ ಹೋಬಳಿಯ ಎಲ್ಲಾ ಪಿಡಿಒಗಳು ಹಾಗೂ ವಿಎಒಗಳು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಸಾರ್ವಜನಿಕರಾದ ಗುಡಿಹಳ್ಳಿ ಹಾಲೇಶ್, ಸಲಾಮ್ ಸಾಬ್, ಯೋಗೇಶ್.ಕೆ ಹಾಗೂ ನವೀನ.ಹೆಚ್. ಸೇರಿದಂತೆ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಹಾಗೂ ಯೋಜನೆಗಳ ಕುರಿತು ಮಾಹಿತಿ ಪಡೆದುಕೊಂಡರು. ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳ ಕುರಿತು ಮಾಹಿತಿ ನೀಡಿದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.