Home ಸುದ್ದಿಗಳು ಇಎಸ್‍ಐ ಆಸ್ಪತ್ರೆ ಸ್ಥಾಪನೆಗೆ ಆಗ್ರಹಿಸಿ ಪ್ರತಿಭಟನೆ
ಸುದ್ದಿಗಳು

ಇಎಸ್‍ಐ ಆಸ್ಪತ್ರೆ ಸ್ಥಾಪನೆಗೆ ಆಗ್ರಹಿಸಿ ಪ್ರತಿಭಟನೆ

Share
ಇಎಸ್‍ಐ ಆಸ್ಪತ್ರೆ ಸ್ಥಾಪನೆಗೆ ಆಗ್ರಹಿಸಿ ಪ್ರತಿಭಟನೆ
Share

 ಹರಪನಹಳ್ಳಿ :  ಸಾವಿರಾರು ಕಾರ್ಮಿಕರ ಅನುಕೂಲಕ್ಕಾಗಿ ತಾಲ್ಲೂಕಿನಲ್ಲಿ ಇಎಸ್‍ಐ ಆಸ್ಪತ್ರೆ ತೆರೆಯಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್‍ ಯೂನಿಯನ್ಸ್ ವತಿಯಿಂದ ಕಾರ್ಮಿಕರು ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಿದರು.

ಹಿರೆಕೆರೆ ವೃತ್ತದಿಂದ ಆರಂಭವಾದ ಪ್ರತಿಭಟನೆ ಡಾ.ಬಿ.ಆರ್.ಅಂಬೇಡ್ಕರ ವೃತ್ತ ತಲುಪಿ, ತಹಶೀಲ್ದಾರ ಬಿ.ವಿ.ಗಿರೀಶ್ ಬಾಬು ಅವರಿಗೆ ಮನವಿ ಸಲ್ಲಿಸಿದರು. ನೊಂದಾಯಿತ ಕಾರ್ಮಿಕರ ಕುಟುಂಬಕ್ಕೆ ನಿವೇಶನ ಸಹಿತ ಮನೆ ಕಟ್ಟಿಸಿಕೊಡಬೇಕು.   ಹಡಗಲಿ, ಕೊಟ್ಟೂರು ತಾಲ್ಲೂಕು ಒಳಗೊಂಡು ಇಎಸ್‍ಐ ಆಸ್ಪತ್ರೆ ಹರಪನಹಳ್ಳಿಯಲ್ಲಿ ಸ್ಥಾಪಿಸಬೇಕು. ಕಾರ್ಮಿಕರಿಗೆ ಕಿಟ್ ಕೊಡುವ ಬದಲು ನೇರವಾಗಿ ಡಿಬಿಟಿ ಮೂಲಕ ಖಾತೆಗೆ ರೂ.3600 ಪಾವತಿಸುವ ವ್ಯವಸ್ಥೆ ಜಾರಿಗೆ ತರಬೇಕು ಎಂದು ಆಗ್ರಹಿಸಿದರು. ಪ್ರತಿ   5 ವರ್ಷಕ್ಕೊಮ್ಮೆ ನವೀಕರಣ ನಿಯಮ ಬದಲಾಯಿಸಬೇಕು ಎಂದು ಆಗ್ರಹಿಸಿದರು.

ತಹಶೀಲ್ದಾರ ಬಿ.ವಿ.ಗಿರೀಶ್ ಬಾಬು, ಕಾರ್ಮಿಕ ನಿರೀಕ್ಷಕ ಪ್ರಕಾಶ ಗೌಡ ಅವರು ಮನವಿ ಸ್ವೀಕರಿಸಿದರು. ಮುಖಂಡರಾದ ಸಂದೇರ ಪರಶುರಾಮ್, ಗುಳೇದಹಟ್ಟಿ ಸಂತೋಷ್, ಹುಲಿಕಟ್ಟೆ ಮೈಲಪ್ಪ, ಮಹಮ್ಮದ್ ರಫಿ, ಬಾಲ ಗಂಗಾಧರ, ಇಬ್ರಾಹಿಂ ಸಾಬ್, ಬಾಗಳಿ ರೇಣುಕಮ್ಮ, ಕಲೀಂ, ರಾಮಣ್ಣ, ಮಂಜು, ಜೋಗಿನ ನಾಗರಾಜ್, ಮೋಹನ್ ಕುಮಾರ, ವಿನಯ್, ಪ್ರಕಾಶ, ಕೃಷ್ಣಕುಮಾರ, ಕೆ.ಅಂಜಿನಿ, ರಾಘವೇಂದ್ರ ಇದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.