Home ಸುದ್ದಿಗಳು ಕಳಪೆ ಕಿಟ್ ವಿತರಣೆ ಆರೋಪ : ಪ್ರತಿಭಟನೆ
ಸುದ್ದಿಗಳು

ಕಳಪೆ ಕಿಟ್ ವಿತರಣೆ ಆರೋಪ : ಪ್ರತಿಭಟನೆ

Share
Share

ಹರಪನಹಳ್ಳಿ : ಕಳಪೆ ಕಾರ್ಮಿಕ‌ ಕಿಟ್ ವಿತರಿಸಲಾಗಿದೆ ಎಂದು ಆರೋಪಿಸಿ ಕರ್ನಾಟಕ ಪ್ರಗತಿಪರ ಕಟ್ಟಡ ಕಾರ್ಮಿಕರ ಪದಾಧಿಕಾರಿಗಳು ಸಾಮಾಗ್ರಿ ಸುಟ್ಟು ಹಾಕಿ ಸೋಮವಾರ ಪ್ರತಿಭಟನೆ ನಡೆಸಿದರು.

ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಜಮಾಯಿಸಿದ ಕಾರ್ಮಿಕರು ಹೆಲ್ಮೆಟ್, ಕೈಗವಸು, ಸೆಪ್ಟಿ ಜಾಕೆಟ್, ಸುರಕ್ಷಾ ಕವಚ, ಬ್ಯಾಗ್ ಗಳನ್ನು ಸುಟ್ಟು ಹಾಕಿ ಆಕ್ರೋಶ ವ್ಯಕ್ತಪಡಿಸಿ, ಉಪವಿಭಾಗಾಧಿಕಾರಿ ಸುರೇಶ್ ಕುಮಾರ ಅವರಿಗೆ ಮನವಿ ಸಲ್ಲಿಸಿದರು.ಜಿಲ್ಲಾ ಕಾರ್ಯದರ್ಶಿ ಸಂತೋಷ‌ ಗುಳೇದಹಟ್ಟಿ ಮಾತನಾಡಿ, ಕಾರ್ಮಿಕ ಇಲಾಖೆಯಡಿ ನೊಂದಾಯಿತ ಕಾರ್ಮಿಕರಿಗೆ ಕಳಪೆ ಗುಣಮಟ್ಟದ ಸಾಮಾಗ್ರಿ ವಿತರಿಸಿದ್ದಾರೆ. ವಿತರಣೆ ಮಾಡುವಾಗಲೂ ತಾರತಮ್ಯ ನೀತಿ ಅನುಸರಿಸಲಾಗಿದೆ ಎಂದು ದೂರಿದರು.

ರಾಜ್ಯಾಧ್ಯಂತ ಕಳಪೆ‌ ಕಿಟ್ ವಿತರಣೆಯಲ್ಲಿ ಆಗಿರುವ ಅವ್ಯವಹಾರ ತನಿಖೆ‌ ಮಾಡಬೇಕು ಎಂದು ಆಗ್ರಹಿಸಿದರು. ಕಾರ್ಮಿಕ‌ ನಿರೀಕ್ಷಕ ಪ್ರಕಾಶ್ ಗೌಡರ್ ಅವರೂ ಮನವಿ ಸ್ವೀಕರಿಸಿದರು. ಮುಖಂಡರಾದ ಸಂದೇರ ಪರಶುರಾಮ್, ರೆಹಮಾನ್, ರಾಮಪ್ಪ, ಖಲೀಂವುಲ್ಲಾ, ಬಾಲಚಂದ್ರ, ಗೋಣೇಶ, ಎಂ.ಕುಮಾರ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.