Home ಫೆ.28 ರಿಂದ ಮಾರ್ಚ್ 17 ರವರೆಗೆ ಪಿಯು ಪರೀಕ್ಷೆ
Homeಶಿಕ್ಷಣ

ಫೆ.28 ರಿಂದ ಮಾರ್ಚ್ 17 ರವರೆಗೆ ಪಿಯು ಪರೀಕ್ಷೆ

Share
Share

ವಿಜಯನಗರ :  
ಇದೇ ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಜರುಗಲಿದ್ದು, ಈ ನಿಟ್ಟಿನಲ್ಲಿ ಜಿಲ್ಲಾಡಳಿತ ವತಿಯಿಂದ ಅಗತ್ಯ ಸಿದ್ದತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಮಾಹಿತಿ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಅವರು ಮಾಹಿತಿ ನೀಡಿದರು.
ಪರೀಕ್ಷಾ ಪಾವಿತ್ರ್ಯತೆಗೆ ಧಕ್ಕೆಯಾಗದಂತೆ ಎಲ್ಲಾ ಪರೀಕ್ಷಾ ಕೇಂದ್ರಗಳಿಗೂ ಸಿಸಿಟಿವಿ ಕ್ಯಾಮೆರಾ ಅಳವಡಿಸುವುದರ ಜತೆಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪೊಲೀಸ್ ಭದ್ರತೆಯಲ್ಲಿಯೇ ಪ್ರಶ್ನೆಪತ್ರಿಕೆಗಳು ಕೇಂದ್ರಗಳಿಗೆ ತಲುಪಲಿವೆ. ಇದಕ್ಕಾಗಿ ನೋಡಲ್ ಅಧಿಕಾರಿಗಳನ್ನು ಸಹ ನೇಮಕ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷೆ ಕೇಂದ್ರಗಳಲ್ಲಿ ಉತ್ತಮ ವಾತಾವರಣ, ಕುಡಿಯುವ ನೀರು, ಶೌಚಾಲಯ ಸೇರಿ ಅಗತ್ಯ ಮೂಲಭೂತ ಸೌಕರ್ಯ ಮತ್ತು ಕುಳಿತುಕೊಳ್ಳಲು ಸೂಕ್ತ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದ ಅವರು. ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷಾ ಮುಖ್ಯಸ್ಥರು ಹೊರತುಪಡಿಸಿ ಉಳಿದವರಿಗೆ ಮೊಬೈಲ್ ಬಳಕೆ ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದರು.
ಪರೀಕ್ಷೆ ವೇಳೆ ವಿದ್ಯಾರ್ಥಿಗಳು ನಿಗಧಿತ ಸಮಯಕ್ಕಿಂತ ಮುಂಚೆ ಹಾಜರಿರಬೇಕು. ಮಕ್ಕಳಿಗೆ ಸಮಸ್ಯೆಯಾಗದಂತೆ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಸಾರಿಗೆ ಇಲಾಖೆಗೆ ನಿರ್ದೇಶನ ನೀಡಲಾಯಿತು. ಕಳೆದ ಬಾರಿಗಿಂತಲೂ ಹೆಚ್ಚಿನ ಫಲಿತಾಂಶ ನೀಡುವ ಸಲುವಾಗಿ ಸಂಜೆ ಪರಿಹಾರ ಬೋಧನೆ ನಡೆಸಲಾಗಿದೆ. ಇಲಾಖೆ ವತಿಯಿಂದ 2 ಪೂರ್ವ ಸಿದ್ದತಾ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಗೆ ಉತ್ತಮ ಫಲಿತಾಂಶದೊಂದಿಗೆ  15 ರೊಳಗೆ ಸ್ಥಾನ ಪಡೆಯುವ ನಿರೀಕ್ಷೆ ಇದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ವಿಶ್ವಾಸ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಪರೀಕ್ಷೆ ಬಗ್ಗೆ ಭಯ ಭೀತರಾಗದೆ, ಧೈರ್ಯವಾಗಿ ಎದುರಿಸಬೇಕು. ಪರೀಕ್ಷೆ ಎಂಬುದು ಹಬ್ಬವಿದ್ದಂತೆ ಖುಷಿಯಿಂದ ಬರೆಯಲು ಕಿವಿ ಮಾತು ಹೇಳಿದರು.
23 ಪರೀಕ್ಷಾ ಕೇಂದ್ರಗಳಲ್ಲಿ 14801 ವಿದ್ಯಾರ್ಥಿಗಳು ಪರೀಕ್ಷೆಗೆ:
ಜಿಲ್ಲೆಯ ಹೊಸಪೇಟೆ ತಾಲ್ಲೂಕಿನಲ್ಲಿ 7, ಹಗರಿಬೊಮ್ಮನಹಳ್ಳಿ 3, ಹೂವಿನಹಡಗಲಿ 3, ಹರಪನಹಳ್ಳಿ 5, ಕೂಡ್ಲಿಗಿ 2, ಕೊಟ್ಟೂರು 3 ಸೇರಿ ಒಟ್ಟು 23 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಫೆಬ್ರವರಿ 28 ರಿಂದ ಜರುಗಲಿರುವ ಪರೀಕ್ಷೆ-1ರಲ್ಲಿ 7235 ಬಾಲಕಿಯರು, 5143 ಬಾಲಕರು ಸೇರಿ ಒಟ್ಟು 14801 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಈ ಪೈಕಿ ಹೊಸದಾಗಿ 12378, ಪುನರಾವರ್ತಿತರಾಗಿ 1915, ಖಾಸಗಿಯವರು 500 ಹಾಗೂ ವಿಷಯಾಧಾರಿತ ಅಂಕಗಳನ್ನು ಹೆಚ್ಚಿಸಿಕೊಳ್ಳುವ ದೃಷ್ಠಿಯಿಂದ ಮೊತ್ತೊಮ್ಮೆ 8 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ:
ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲಿನ ಜೆರಾಕ್ಸ್ ಅಂಗಡಿ, ಕಂಪ್ಯೂಟರ್ ಕೇಂದ್ರಗಳನ್ನು ಮುಚ್ಚುವಂತೆ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ  ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಡಿಡಿಪಿಯು ನಾಗರಾಜ್ ಹವಾಲ್ದಾರ್ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.