Home ರಾಘವೇಂದ್ರಮಠ : ನಾಡಿಗೆ ದಾಸ ಸಾಹಿತ್ಯ ಕೊಡುಗೆ
Homeಸುದ್ದಿಗಳು

ರಾಘವೇಂದ್ರಮಠ : ನಾಡಿಗೆ ದಾಸ ಸಾಹಿತ್ಯ ಕೊಡುಗೆ

Share
ರಾಘವೇಂದ್ರಮಠ : ನಾಡಿಗೆ ದಾಸ ಸಾಹಿತ್ಯ ಕೊಡುಗೆ
Share

ಹರಪನಹಳ್ಳಿ : ಸಮ ಸಮಾಜದ ನಿರ್ಮಾಣಕ್ಕಾಗಿ ನಾಡಿಗೆ ದೊಡ್ಡ ಕೊಡುಗೆ ನೀಡಿರುವ  ದಾಸ ಸಾಹಿತ್ಯ ಪ್ರಕಾರವನ್ನು ಹೆಚ್ಚು ಪ್ರಚುರಪಡಿಸುವ ಅಗತ್ಯವಿದೆ ಎಂದು ಬೆಂಗಳೂರು ಬಸವನಗುಡಿ ಸೌರಭ ದಾಸ ಸಾಹಿತ್ಯ ವಿದ್ಯಾಲಯದ ಪ್ರಾಚಾರ್ಯ ಪ್ರಮೋದಾಚಾರ್ಯರು ತಿಳಿಸಿದರು.

ನಗರದ ರಾಘವೇಂದ್ರ ಸ್ವಾಮಿ ಮಠದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಹರಿದಾಸರ ‘ದಾಸ’ ಪರೀಕ್ಷೆಗೆ ಚಾಲನೆ ನೀಡಿ ಅವರು ಮಾತನಾಡಿದರು.  ಹರಿದಾಸರ ಕೀರ್ತನಗಳ ಬಗ್ಗೆ ಸರ್ವಧರ್ಮೀಯರಿಗೂ ಅರಿವು ಮೂಡಿಸುವ ಮಹತ್ವ ಪಾತ್ರ ನಿರ್ವಹಿಸುತ್ತವೆ. ದೇಶದ ಸನಾತನ ಪರಂಪರೆಯನ್ನು ಹರಿದಾಸರು ತಮ್ಮ ಸಾಹಿತ್ಯ ಪ್ರಕಾರಗಳಲ್ಲಿ ಸಾಕಷ್ಟು ವಿಚಾರಗಳನ್ನು ತಿಳಿಸಿದ್ದಾರೆ. ತಂತ್ರಜ್ಞಾನ ಬೆಳೆದಂತೆ ಸಮ್ಮ‌ ಸನಾತನ ಪರಂಪರೆ, ಸಂಸ್ಕಾರದ ಬಗ್ಗೆ ಇಂದಿನ ಯುವ ಪೀಳಿಗೆಗೆ ಮತ್ತು ಎಲ್ಲಾ ಧರ್ಮದ ಜನಗಳಿಗೆ ತಿಳಿಸುವ ಅಗತ್ಯವಿದೆ ಎಂದರು.

ದಾಸರ ಕೀರ್ತನೆಗಳ ಮೇಲೆ ಪರೀಕ್ಷೆ ನಡೆಸಲಾಗುತ್ತಿದೆ, ಇದರಲ್ಲಿ ಕೇವಲ ಬ್ರಾಹ್ಮಣ ಸಮುದಾಯ ಮಾತ್ರ ಬರೆಯುವುದಷ್ಟೆ ಅಲ್ಲ ಎಲ್ಲ ವರ್ಗದ ಜನರು ಬರೆಯ ಬಹುದಾಗಿದೆ ಎಂದು ಅವರು ತಿಳಿಸಿದರು. ಮಾಲತಿ ಮಾಳಗಿ, ವೈದ್ಯ ನಾಗೇಶ್ ಭಟ್, ವ್ಯಾಸರಾಜ್ ಟಿ, ಪರಿಕ್ಷಾರ್ಥಿಗಳಾದ ವಸಂತ, ಅನಿತಾ, ಅರುಣಾ ನಾಗೇಶ್ ಭಟ್, ಪಂಕಜಾ, ಮಾಲಾ, ಮಂಜುಳಾ, ಶಾರದಾ, ಸುಮನಾ, ಮೇಧಾವತಿ, ಸೌಮ್ಯ, ಅರ್ಚನ, ರೂಪ, ಅಪರ್ಣ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.