Home ಶಿಕ್ಷಣ ಬಳ್ಳಾರಿಯಲ್ಲಿ ಮಾ.23ಕ್ಕೆ ಪಂಚಾಚಾರ್ಯ ಯುಗಮಾನೋತ್ಸವ
ಶಿಕ್ಷಣ

ಬಳ್ಳಾರಿಯಲ್ಲಿ ಮಾ.23ಕ್ಕೆ ಪಂಚಾಚಾರ್ಯ ಯುಗಮಾನೋತ್ಸವ

Share
ವೀರಸೋಮೇಶ್ವರ ಸ್ವಾಮೀಜಿ
Share

ಹರಪನಹಳ್ಳಿ : ಜಗದ್ಗುರು ಪಂಚಪೀಠಾಧೀಶ್ವರರ ಸಾನ್ನಿಧ್ಯದಲ್ಲಿ ಬಳ್ಳಾರಿಯಲ್ಲಿ ಮಾರ್ಚ್ 23 ರಿಂದ ಮಾ.25ರ ವರೆಗೆ ಬಳ್ಳಾರಿಯಲ್ಲಿ ಜಗದ್ಗುರು ಪಂಚಾಚಾರ್ಯ ಯುಗಮಾನೋತ್ಸವ ಆಚರಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ವೀರಶೈವ ಪಂಚಪೀಠಗಳ ಒಕ್ಕೂಟ ಸಂಚಾಲಕರು ಆಗಿರುವ ಬಾಳೆಹೊನ್ನೂರು ರಂಭಾಪುರಿ ಪೀಠದ  ವೀರಸೋಮೇಶ್ವರ ಸ್ವಾಮೀಜಿ ತಿಳಿಸಿದರು.

ಮಂಗಳವಾರ ನಗರದ ತೆಗ್ಗಿನಮಠದ ಸಂಸ್ಥಾನದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರತಿ ವರ್ಷ ಚೈತ್ರ ಶುದ್ದ ಪಂಚಮಿಯಿಂದ ಚೈತ್ರ ಶುದ್ದ ಸಪ್ತಮಿವರೆಗೆ ನಾಡಿನ ನಾನಾ ಭಾಗಗಳಲ್ಲಿ ಪಂಚಾಚಾರ್ಯ ಯುಗಮಾನೋತ್ಸವ ಆಚರಿಸಿದೆ ಎಂದರು. ಹಲವಾರು ಕಾರಣಗಳಿಂದ ಸ್ಥಗಿತಗೊಂಡಿದ್ದ ಯುಮಾನೋತ್ಸವಕ್ಕೆ ಮರು ಆರಂಭಿಸಲು ತೀರ್ಮಾನಿಸಲಾಗಿದೆ. ಸಂಕಲ್ಪ ಕೈಗೊಂಡಿರುವ ಪಂಚಪೀಠಗಳಾದ ಉಜ್ಜಯನಿ, ಕೇದಾರ, ಶ್ರೀಶೈಲ, ಕಾಶಿಪೀಠ ಹಾಗೂ ರಂಭಾಪುರಿ ಪೀಠ ಪೀಠಾಧ್ಯಕ್ಷರುಗಳು ಪಾಲ್ಗೊಳ್ಳುವರು. ವೀರಶೈವ ಧರ್ಮ ಸಂಸ್ಕೃತಿ ಬೆಳೆದುಬಂದ ಪರಂಪರೆ, ಸಾಮಾಜಿಕ ಚಿಂತನಾ ಮಂಥನ ಘೋಷ್ಠಿಗಳು ಯುಗಮಾನೋತ್ಸವದಲ್ಲಿ ನಡೆಯುತ್ತವೆ. ಕಾರ್ಯಕ್ರಮದ ಯಶಸ್ಸಿಗೆ ಪಂಚಾಚಾರ್ಯ ಯುಗಮಾನೋತ್ಸವ ಸೇವಾ ಸಮಿತಿ ರಚಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಅಖಿಲ ಭಾರತ ಶಿವಾಚಾರ್ಯ ಸಂಸ್ಥೆಯ ಅಧ್ಯಕ್ಷ ಸಿಂದಗಿ ಸಾರಂಗಮಠದ  ಪ್ರಭುಸಾರಂಗದೇವ ಸ್ವಾಮೀಜಿ, ತೆಗ್ಗಿನಮಠದ ವರಸದ್ಯೋಜಾತ ಸ್ವಾಮೀಜಿ, ಆಡಳಿತಾಧಿಕಾರಿ ಟಿ.ಎಂ,ಚಂದ್ರಶೇಖರಯ್ಯ, ಎಂ.ಕೊಟ್ರೇಶಪ್ಪ, ಬಳ್ಳಾರಿ ಮಹಲಿಂಗಯ್ಯ, ಪ್ರಭುಸ್ವಾಮಿ, ಖೇಣಿ ಬಸಪ್ಪ, ಮೀನಹಳ್ಳಿ ಚಂದ್ರಶೇಖರ, ಬಾನಾಳ ಶೇಖರ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಶಿಕ್ಷಣ

ಬಿ.ಐ.ಇ.ಟಿ. ಯಲ್ಲಿ ನೈಲಿಟ್‌ನ 90 ಗಂಟೆಗಳ ‘ಚಿಪ್‌ಕ್ರಾಫ್ಟ್’ ಸೆಮಿಕಂಡಕ್ಟರ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ : ಬಾಪೂಜಿ ಇಂಜಿನಿಯರಿಂಗ್  ಮತ್ತು ತಾಂತ್ರಿಕ ಮಹಾವಿದ್ಯಾಲಯ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್...

Homeಶಿಕ್ಷಣ

ವಿದ್ಯಾರ್ಥಿ ದೆಸೆಯಲ್ಲೇ ದೊಡ್ಡಮಟ್ಟದ ಸಾಧನೆಯ ಗುರಿ ಇರಲಿ

ಹರಪನಹಳ್ಳಿ: ಶಿಕ್ಷಣ ಪಡೆಯುವಾಗಲೇ ವಿದ್ಯಾರ್ಥಿಗಳು ದೊಡ್ಡಮಟ್ಟದ ಸಾಧನೆಯ ಗುರಿ ಇಟ್ಟುಕೊಳ್ಳಬೇಕು ಎಂದು ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಪಿ. ಮಹಾಬಲೇಶ್ವರಗೌಡ್ರು ಕಿವಿಮಾತು ಹೇಳಿದರು. ನಗರದ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಎಚ್.ಪಿ.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ 2026 -27ನೇ...

Homeಶಿಕ್ಷಣ

ಪದವಿ ಹಾಗೂ ಸ್ನಾತಕೋತ್ತರ ಪದವಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026-27 ನೇ ಸಾಲಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿ...

Homeಶಿಕ್ಷಣ

ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ :

ದಾವಣಗೆರೆ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (ಸಾಮಾನ್ಯ ಪದವಿ ಮಟ್ಟದ ಕೋರ್ಸಿನವಿದ್ಯಾರ್ಥಿಗಳಿಗೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.