Home ರಾಜಕೀಯ ಆರ್.ಎಸ್.ಎಸ್. ಬಗ್ಗೆ ಸಿಎಂ ಹೇಳಿದ್ದೇನು ?
ರಾಜಕೀಯ

ಆರ್.ಎಸ್.ಎಸ್. ಬಗ್ಗೆ ಸಿಎಂ ಹೇಳಿದ್ದೇನು ?

Share
cm siddaramaiah harapanahalli
Share

ಹರಪನಹಳ್ಳಿ : ನೊಂದಾಣಿ ಆಗದ ಎಲ್ಲ ಸಂಘಟನೆ ನಿಷೇಧಿಸಲು ನಾವು ಹೇಳಿದ್ದೇವೆ ಹೊರತು ಬರೀ ಆರ್.ಎಸ್.ಎಸ್ ಎಂದು ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ಪುತ್ರ ಪಿ.ಟಿ.ಭರತ್ ಮದುವೆಗೆ‌ ಭಾನುವಾರ ಆಗಮಿಸಿದ್ದಾಗ ಸುದ್ದಿಗಾರರೊಂದಿಗೆ ಮಾತನಾಡಿದರು.

ಆರ್.ಎಸ್.ಎಸ್.ಬಗ್ಗೆ ಮಾತನಾಡಿಲ್ಲ ಆದರೆ ಅವರೂ ಈ ರೀತಿ ಅರ್ಥಮಾಡಿಕೊಂಡರೆ ಹೇಗೆ ಹೇಳೋದು ಎಂದಷ್ಟೆ ತಿಳಿಸಿದರು.

ಪರಪ್ಪನ ಅಗ್ರಹಾರದಲ್ಲಿ ಖೈದಿಗಳಿಗೆ ರಾಜ ಆತಿಥ್ಯ ಕೊಟ್ಟಿರುವ ಪ್ರಕರಣ‌ ಸಂಬಂಧ ಸೋಮವಾರ ಸಚಿವರು ಅಧಿಕಾರಿಗಳ ಸಭೆ ಕರೆದಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದು ಹೇಳಿದರು.

ಜೈಲಿನಲ್ಲಿ ಕಾನೂನು ಬಾಹಿರ ಚಟುವಟಿಕೆಗೆ ಅವಕಾಶ ಕೊಟ್ಟವರ ವಿರುದ್ಧ ಕ್ರಮ ಜರುಗಿಸಲಾಗುವುದು.
ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ಸಂಬಂಧ ಪ್ರಕರಣ ಹೈಕೋರ್ಟ್ ನಲ್ಲಿದೆ‌, ತೀರ್ಪಿನಂತೆ ಕ್ರಮವಹಿಸುವುದಾಗಿ ತಿಳಿಸಿದರು‌.

ಮೆಕ್ಕೆಜೋಳಕ್ಕೆ ಕೇಂದ್ರ ಸರ್ಕಾರ ಬೆಂಬಲ ಬೆಲೆ ಕೊಡಬೇಕು‌. ರಾಜ್ಯದಲ್ಲಿ 11 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಹಾನಿಯಾಗಿದ್ದು ರಾಜ್ಯ ಸರ್ಕಾರ ಪರಿಹಾರ ಕೊಡುತ್ತದೆ ಎಂದು ಹೇಳಿದರು‌.

ಕಬ್ಬು ಬೆಳೆಗೆ ಕನಿಷ್ಟ ಬೆಂಬಲ‌ ಬೆಲೆ ಕಾರ್ಖಾನೆ ಮಾಲೀಕರು ಕೊಡುತ್ತಾರೆ ಎನ್ನುವ ವಿಶ್ವಾಸವಿದೆ. ವಿರೋಧಿಸುವ ಮಾಲೀಕರಾಗಲಿ, ಬಸನಗೌಡ ಪಾಟೀಲ್ ಯತ್ನಾಳ್‌ ಆಗಲಿ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದರು.‌ ಗೃಹ ಸಚಿವ ಜಿ.ಪರಮೇಶ್ವರ. ಎಸ್.ಎಸ್.ಮಲ್ಲಿಕಾರ್ಜುನ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಝೆಡ್.‌ಜಮೀರ್ ಅಹ್ಮದ್ ಖಾನ್, ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ, ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ, ಎಚ್‌.ಆಂಜನೇಯ ಇದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
DKS BANGLORE
Homeರಾಜಕೀಯ

ಕೆ.ಎಚ್.ಮುನಿಯಪ್ಪಗೆ ಸಮಾಜ ಕಲ್ಯಾಣ, ಉಳಿದವರಿಗೆ ಯಾವ ಖಾತೆ ?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆ ಕೊನೆಗೂ...

Homeರಾಜಕೀಯ

ಬಿಜೆಪಿ ಹಿರಿಯ ನಾಯಕರ ದಂಡು: ಮತದಾರರ ಪಟ್ಟಿ ಪರಿಷ್ಕರಣೆ ಸಭೆಯಲ್ಲಿ ಶ್ರೀರಾಮುಲು, ಕರುಣಾಕರ ರೆಡ್ಡಿ ಭಾಗಿ :

ವಿಜಯನಗರ :  ಜಿಲ್ಲೆಯ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕದ ವತಿಯಿಂದ...

Homeರಾಜಕೀಯ

ಪೌರ ಕಾರ್ಮಿಕ ಡಿ.ಲಿಂಗಪ್ಪ ನಿವೃತ್ತಿ

ಹರಪನಹಳ್ಳಿ :  ನಗರಸಭೆಯಲ್ಲಿ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಡಿ.ಲಿಂಗಪ್ಪ ಅವರನ್ನು...

Homeರಾಜಕೀಯ

ಹಲುವಾಗಲು ಗ್ರಾಮಸ್ಥರಿಂದ ಎಂ.ಪಿ.ಲತಾ ಮಲ್ಲಿಕಾರ್ಜುನ ಅವರಿಗೆ ಮನವಿ :

ಹರಪನಹಳ್ಳಿ: ತಾಲ್ಲೂಕಿನ ಪ್ರಮುಖ ಹಾಗೂ ಐತಿಹಾಸಿಕ ಹಿನ್ನೆಲೆಯುಳ್ಳ ಹಲವಾಗಲು ಗ್ರಾಮದ ವಿವಿಧ ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.