Home ಶಿಕ್ಷಣ ಕಂಚಿಕೇರಿ‌ ಸಮತಾ ವಿದ್ಯಾಲಯದಲ್ಲಿ ‘ಸಮತಾ‌ ಸಂಭ್ರಮ’
ಶಿಕ್ಷಣ

ಕಂಚಿಕೇರಿ‌ ಸಮತಾ ವಿದ್ಯಾಲಯದಲ್ಲಿ ‘ಸಮತಾ‌ ಸಂಭ್ರಮ’

Share
ಕಂಚಿಕೇರಿ‌ ಸಮತಾ ವಿದ್ಯಾಲಯದಲ್ಲಿ 'ಸಮತಾ‌ ಸಂಭ್ರಮ'
Share

ಹರಪನಹಳ್ಳಿ : ಗ್ರಾಮೀಣ‌ ಪ್ರದೇಶದ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವ ಜೊತೆಗೆ ಸುಸಂಸ್ಕೃತರನ್ನಾಗಿ ಮಾಡಿ ಎಂದು ದಾವಣಗೆರೆ ನಗರಸಭೆ ಮಾಜಿ ಅಧ್ಯಕ್ಷ ಯಶವಂತರಾವ್ ಜಾದವ್ ಸಲಹೆ ನೀಡಿದರು.ತಾಲ್ಲೂಕಿನ ಕಂಚಿಕೇರಿ ಗ್ರಾಮದಲ್ಲಿ ಸಮತಾ ವಿದ್ಯಾಲಯದಲ್ಲಿ ಈಚೆಗೆ ಆಯೋಜಿಸಿದ್ದ‌ ಸಮತಾ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು‌ ಮಾತನಾಡಿದರು.

ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಬೇಕು. ಇದಕ್ಕೆ ದಾಸರಾದರೆ ತಮ್ಮ ಭವಿಷ್ಯವೇ ಹಾಳಾಗುತ್ತದೆ. ಅಂಕಗಳಿಕೆ ಮಾತ್ರ‌ ಮಾನದಂಡ ಮಾಡಿಕೊಳ್ಳದೇ, ಆದರ್ಶ ಪ್ರಜೆಗಳಾಗಿ ಎಂದು ಹೇಳಿದರು.ಸಾನ್ನಿದ್ಯವಹಿಸಿದ್ದ ನೀಲಗುಂದ ಗುಡ್ಡದ ವಿರಕ್ತಮಠದ ಚನ್ನಬಸವ ಶಿವಯೋಗಿ ಸ್ವಾಮೀಜಿ ಮಾತನಾಡಿ, ಮಕ್ಕಳು ಉತ್ತಮ ಅಂಕಗಳಿಕೆ ಜೊತೆಗೆ, ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು. ಉತ್ತಮ ಪ್ರಜೆಗಳಾದರೆ, ಅದಕ್ಕಿಂತ‌ ಹಿರಿಮೆ‌ ಮತ್ತೊಂದಿಲ್ಲ ಎಂದು‌ ಅಭಿಪ್ರಾಯಪಟ್ಟರು.ಧಾರವಾಡ ಕಾನೂನು ವಿಶ್ವವಿದ್ಯಾಲಯದ ವಿಶ್ರಾಂತ‌ ಕುಲ ಸಚಿವ ಜಿ.ಬಿ.ಪಾಟೀಲ್ ಅವರು, ಎಂ.ಜಿ.ತಿಪ್ಪೆಸ್ವಾಮಿ ನಾಗರತ್ನಮ್ಮ ರಂಗಮಂದಿರ‌ ಹಾಗೂ ಶಾಲಾ ಕೊಠಡಿಗಳನ್ನು ಜಿ.ಸದಾಶಿವಪ್ಪ ಉದ್ಘಾಟಿಸಿದರು.

ಡಾ.‌ದಾನಮ್ಮನವರ ಕೊಟ್ರಪ್ಪ, ಸಮತಾ ವಿದ್ಯಾಲಯದ ಅಧ್ಯಕ್ಷ ಎಂ.ಟಿ.ಸುಭಾಷ ಚಂದ್ರ ಮಾತನಾಡಿದರು. ಹರಿಹರ ಮಾಜಿ ಶಾಸಕ ಎಚ್.ಎಸ್.ಶಿವಶಂಕರ್, ದೂಡಾ ಮಾಜಿ ಅಧ್ಯಕ್ಷ ದೇವರಮನಿ ಶಿವಕುಮಾರ, ನಗರಸಭೆ ಮಾಜಿ ಅಧ್ಯಕ್ಷ ಬಿ.ವೀರಣ್ಣ, ಎಲ್.ಎಚ್.ಅರುಣ್‌ ಕುಮಾರ, ಎಂ.ಎಸ್.ನಾಗರಾಜಪ್ಪ, ಆರ್.ಎಂ.ಬಿ.ಬಾವರಾಜ, ಉತ್ತಮಚಂದ್ ಜೈನ್, ಆರ್.ಸಿ.ಪಾಟೀಲ್, ಯೋಗೇಶ್ವರಪ್ಪ, ಕುಮಾರ ಆನೆಕೊಂಡ, ಎನ್.ಎಸ್.ರಾಜು, ಸಂಸ್ಥೆಯ ನಿರ್ದೇಶಕಿ ವಸಂತ‌ ಸುಭಾಷಚಂದ್ರ, ಮುಖ್ಯ ಶಿಕ್ಷಕಿ ಸಿಂಡ್ರೇಲ್ ಲೋಪಿಸ್ ಇದ್ದರು.‌ಇದೇ ವೇಳೆ ಭಾರತಿ ವಾಧ್ಯ ವೃಂದದವರಿಂದ ರಸಮಂಜರಿ ಕಾರ್ಯಕ್ರಮ‌ ಜರುಗಿತು.

Share

Leave a comment

Leave a Reply

Your email address will not be published. Required fields are marked *

Related Articles
Homeಶಿಕ್ಷಣ

ಬಿ.ಐ.ಇ.ಟಿ. ಯಲ್ಲಿ ನೈಲಿಟ್‌ನ 90 ಗಂಟೆಗಳ ‘ಚಿಪ್‌ಕ್ರಾಫ್ಟ್’ ಸೆಮಿಕಂಡಕ್ಟರ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ : ಬಾಪೂಜಿ ಇಂಜಿನಿಯರಿಂಗ್  ಮತ್ತು ತಾಂತ್ರಿಕ ಮಹಾವಿದ್ಯಾಲಯ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್...

Homeಶಿಕ್ಷಣ

ವಿದ್ಯಾರ್ಥಿ ದೆಸೆಯಲ್ಲೇ ದೊಡ್ಡಮಟ್ಟದ ಸಾಧನೆಯ ಗುರಿ ಇರಲಿ

ಹರಪನಹಳ್ಳಿ: ಶಿಕ್ಷಣ ಪಡೆಯುವಾಗಲೇ ವಿದ್ಯಾರ್ಥಿಗಳು ದೊಡ್ಡಮಟ್ಟದ ಸಾಧನೆಯ ಗುರಿ ಇಟ್ಟುಕೊಳ್ಳಬೇಕು ಎಂದು ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಪಿ. ಮಹಾಬಲೇಶ್ವರಗೌಡ್ರು ಕಿವಿಮಾತು ಹೇಳಿದರು. ನಗರದ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಎಚ್.ಪಿ.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ 2026 -27ನೇ...

Homeಶಿಕ್ಷಣ

ಪದವಿ ಹಾಗೂ ಸ್ನಾತಕೋತ್ತರ ಪದವಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026-27 ನೇ ಸಾಲಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿ...

Homeಶಿಕ್ಷಣ

ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ :

ದಾವಣಗೆರೆ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (ಸಾಮಾನ್ಯ ಪದವಿ ಮಟ್ಟದ ಕೋರ್ಸಿನವಿದ್ಯಾರ್ಥಿಗಳಿಗೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.