Home ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
Homeಸುದ್ದಿಗಳು

ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Share
Share

ದಾವಣಗೆರೆ : ಅಕ್ಟೋಬರ್ 1 ರಂದು  ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಪ್ರಯುಕ್ತ ವಿವಿಧ ಕ್ಷೇತ್ರಗಳಾದ ಶಿಕ್ಷಣ ಕ್ಷೇತ್ರ, ಸಾಹಿತ್ಯಕ್ಷೇತ್ರ, ಕಲೆ, ಕಾನೂನು, ಪ್ರತಿಭೆ, ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಈ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 6 ವೈಯಕ್ತಿಕ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 1 ಸಂಸ್ಥೆಗೆ ಪ್ರಶಸ್ತಿ ಸೇರಿ ಒಟ್ಟು 7 ಪ್ರಶಸ್ತಿಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ನಮೂನೆ-1 ಹಾಗೂ 2ರಲ್ಲಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ, ಸಲ್ಲಿಸುತ್ತಿರುವ ಹಿರಿಯ ನಾಗರಿಕರು ಹಾಗೂ ಸಂಸ್ಥೆಗಳು ದ್ವಿಪ್ರತಿಯಲ್ಲಿ ಅರ್ಜಿ ಸಲ್ಲಿಸಬಹುದು. ಈ ಅರ್ಜಿಗಳನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿಗಳ ಕಚೇರಿಯಿಂದ ಪಡೆದು ಆಗಸ್ಟ್ 24 ರೊಳಗೆ ಸಲ್ಲಿಸಬೇಕು.

ಅರ್ಜಿ ಪಡೆಯಲು ಹಾಗೂ ಹೆಚ್ಚಿನ ಮಾಹಿತಿಗಾಗಿ  ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ದೇವರಾಜ್‍ ಅರಸ್ ಬಡಾವಣೆ ಬಿ ಬ್ಲಾಕ್,ದಾವಣಗೆರೆ. ಜಿಲ್ಲಾ ವಿಕಲಚೇತನರ ಸಹಾಯವಾಣಿ ಕೇಂದ್ರ: ಫೋ: 08192-263939, ನಿವೃತ್ತ ನೌಕರರ ಸಂಘದ ಕಾರ್ಯದರ್ಶಿ,  ಗುರುಮೂರ್ತಿ ಮೊ.ಸಂ 9844143827, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ: ಫೋ: 7483968224, ಹಿರಿಯ ನಾಗರಿಕರ ಹಗಲು ಯೋಗ ಕ್ಷೇಮ ಕೇಂದ್ರ ಮೊ.ಸಂ: 9148672498 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ  ರಶ್ಮಿ. ಬಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.