Home ಸುದ್ದಿಗಳು ಅಡುಗೆ ಅನಿಲ ವಿತರಣೆ ವಿಳಂಬ :  ʼಶಕ್ತಿ ಅಭಿಯಾನʼ ಪ್ರತಿಭಟನೆ
ಸುದ್ದಿಗಳು

ಅಡುಗೆ ಅನಿಲ ವಿತರಣೆ ವಿಳಂಬ :  ʼಶಕ್ತಿ ಅಭಿಯಾನʼ ಪ್ರತಿಭಟನೆ

Share
MP VEENA
Share

ಹರಪನಹಳ್ಳಿ :   ಅಡುಗೆ ಅನಿಲದ (ಎಲ್‌ಪಿಜಿ) ದರ ಮಿತಿಮೀರಿ ಏರಿಕೆ ಹಾಗೂ ಗ್ಯಾಸ್ ವಿತರಣೆಯಲ್ಲಿ ವ್ಯತ್ಯಯ  ಖಂಡಿಸಿ ‘ಶಕ್ತಿ ಅಭಿಯಾನ’ದ ವತಿಯಿಂದ ಶನಿವಾರ ಪ್ರತಿಭಟನಾ ಮೆರವಣಿಗೆ ಜರುಗಿತು.

ಡಾ.ಬಿ.ಆರ್.ಅಂಬೇಡ್ಕರ ವೃತ್ತದಿಂದ ತಾಲ್ಲೂಕು ಆಡಳಿತ ಸೌಧಕ್ಕೆ ಆಗಮಿಸಿದ ಶಕ್ತಿ ಅಭಿಯಾನದ ಕಾರ್ಯಕರ್ತರು ತಹಶೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಶಕ್ತಿ ಅಭಿಯಾನದ ರಾಜ್ಯ ಸಂಚಾಲಕಿ ಎಂ.ಪಿ.ವೀಣಾ ಮಹಾಂತೇಶ್ ಮಾತನಾಡಿ, ಅಡುಗೆ ಅನಿಲ ದರ ಮಿತಿಮೀರಿ ಏರಿಕೆಯಾಗಿದೆ. ಪ್ರತಿ ಹಳ್ಳಿಯಲ್ಲೂ ಯಾವುದೇ ಕುಟುಂಬ ಒಂದು ಸಿಲಿಂಡರ್ ಪಡೆಯಲು ವಾರಗಟ್ಟಲೆ ಕಾಯಬೇಕಾಗಿದೆ, ಇದರಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ ಎಂದು ಕಿಡಿಕಾರಿದರು.

ದಿನೇ ದಿನೇ ಗಗನಕ್ಕೇರುತ್ತಿರುವ ಅಡುಗೆ ಅನಿಲದ ಬೆಲೆಯಿಂದಾಗಿ ಸಾಮಾನ್ಯ ಹಾಗೂ ಮಧ್ಯಮ ವರ್ಗದ ಕುಟುಂಬಗಳ ದೈನಂದಿನ ಬದುಕು ಅಸ್ತವ್ಯಸ್ತಗೊಂಡಿದೆ. ಬೆಲೆ ಏರಿಕೆಯ ಬರೆಯ ಜೊತೆಗೆ, ತಾಲ್ಲೂಕಿನಲ್ಲಿ ಗ್ಯಾಸ್ ಸರಬರಾಜು ಸಂಪೂರ್ಣವಾಗಿ ಹದಗೆಟ್ಟಿದೆ. ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರಾಗಿರುವ ರಾಜ್ಯಪಾಲರು ಈ ಗಂಭೀರ ಸಮಸ್ಯೆಯನ್ನು ಪರಿಗಣಿಸಿ, ತಕ್ಷಣವೇ ಕೇಂದ್ರ ಸರ್ಕಾರದ ಗಮನಕ್ಕೆ ತರುವ ಮೂಲಕ ಬೆಲೆ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು. ದಾದಾಪೀರ, ಜೀಷಾನ್‌ ಹ್ಯಾರಿಸ್‌, ಎಚ್.ನೇತ್ರಾವತಿ, ರೇಣುಕಾ, ಗಾಯತ್ರಿ, ಸಾದಿಕ್‌, ಶಿವಣ್ಣ, ಗಂಗಜ್ಜಿ ನಾಗರಾಜ್‌, ಇಸ್ಮಾಯಿಲ್‌, ರಾಜು ಇತರರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.