ದಾವಣಗೆರೆ : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರು, ದಾವಣಗೆರೆ ದಕ್ಷಿಣ ವಿದಾನಸಭೆ ಕ್ಷೇತ್ರದ ಶಾಸರಾಗಿದ್ದ ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು 1931, ಜೂನ್ 16ರಂದು ಜನಿಸಿದ್ದರು. ಮುತ್ಸದ್ದಿ ರಾಜಕಾರಣಿ ಆಗಿದ್ದ ಶಿವಶಂಕರಪ್ಪ ಅವರು ಕಾಂಗ್ರೆಸ್ ಪಕ್ಷದ ಖಜಾಂಚಿಯಾಗಿ ಹಲವು ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.
ರಾಜ್ಯ ಸರ್ಕಾರದಲ್ಲಿ ಸಚಿವರಾಗಿ ಹಲವು ಖಾತೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಇದರೊಟ್ಟಿಗೆ ಸಮಾಜ ಸೇವೆಯಲ್ಲಿ ಮುಂಚೂಣಿ ವಹಿಸಿದ್ದರು. ಶ್ಯಾಮನೂರ್ ಶಿವಶಂಕರಪ್ಪರವರು ದಾವಣಗೆರೆಯ ಅಂಗವಿಕಲರ ಆಶಾಕಿರಣ ಟ್ರಸ್ಟ್, ದಾವಣಗೆರೆ ಕ್ರಿಕೆಟ್ ಕ್ಲಬ್ ಮತ್ತು ದಾವಣಗೆರೆ ಸ್ಪೋರ್ಟ್ಸ್ ಕ್ಲಬ್ನ ಅಧ್ಯಕ್ಷರಾಗಿದ್ದರು. ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ ಮತ್ತು ಹಲವಾರು ವೃತ್ತಿಪರ ಶಿಕ್ಷಣ ಸಂಸ್ಥೆಗಳು ಸೇರಿ ಸರಪಳಿಯಾಗಿರುವ, ಬಾಪೂಜಿ ಎಂಜಿನಿಯರಿಂಗ್ ಅಸೋಸಿಯೇಷನ್ ಅಧ್ಯಕ್ಷರಾಗಿದ್ದರು. ಮತ್ತು ಕೈಗಾರಿಕೋದ್ಯಮಿಯಾಗಿದ್ದು, ಹರಪನಹಳ್ಳಿ ತಾಲ್ಲೂಕು ದುಗ್ಗಾವತಿ ಗ್ರಾಮದಲ್ಲಿ ಶಾಮನೂರು ಶುಗರ್ಸ್ ಸಕ್ಕರೆ ಕಾರ್ಖಾನೆ ಮತ್ತು ಡಿಸ್ಟಿಲರೀಸ್ ಉದ್ಯಮ ಕಟ್ಟಿ ಬೆಳೆಸಿದ್ದರು.
ರಾಜಕೀಯ
ಶಿವಶಂಕರಪ್ಪನವರು ದಾವಣಗೆರೆ ಜಿಲ್ಲೆಯಲ್ಲಿ 2008 ಹಾಗು 2013, 2018ರ ವಿಧಾನ ಸಭಾ ಚುನಾವಣೆ ಸೇರಿ ಒಟ್ಟು 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಹಾಗೂ ಸಂಪುಟ ದರ್ಜೆಯ ಸಚಿವರಾಗಿ ಹಲವು ಬಾರಿ ಕಾರ್ಯ ನಿರ್ವಹಿಸಿದ್ದರು.
