Home ಸಿಎಂ ರಾಜೀನಾಮೆಗೆ ಒಪ್ಪಿಗೆ, ಡಿಸಿಎಂ ಪ್ರೀತಿಯ ಅಪ್ಪುಗೆ !
Homeರಾಜಕೀಯ

ಸಿಎಂ ರಾಜೀನಾಮೆಗೆ ಒಪ್ಪಿಗೆ, ಡಿಸಿಎಂ ಪ್ರೀತಿಯ ಅಪ್ಪುಗೆ !

Share
Share

ಬೆಂಗಳೂರು: ಕಾಂಗ್ರೆಸ್ ವರಿಷ್ಠರು ಹಾಗೂ ರಾಹುಲ್ ಗಾಂಧಿ ಅವರ ಸೂಚನೆ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಬೆಳಿಗ್ಗೆ ಸಚಿವರೊಂದಿಗೆ ನಡೆದ ಉಪಾಹಾರ ಕೂಟದಲ್ಲಿ (ಬ್ರೇಕ್‌ಫಾಸ್ಟ್ ಮೀಟಿಂಗ್) ಅವರು ಈ ವಿಷಯವನ್ನು ಅಧಿಕೃತವಾಗಿ ತಿಳಿಸಿದ್ದಾರೆ.

ಪಾದಮುಟ್ಟಿ ನಮಸ್ಕರಿಸಿದ ಡಿಸಿಎಂ
ಸಿದ್ದರಾಮಯ್ಯ ಅವರು ರಾಜೀನಾಮೆ ನಿರ್ಧಾರ ಪ್ರಕಟಿಸಿದ್ದಾರೆ. ಅದರ ಬೆನ್ನಲ್ಲೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಗಳ ಪಾದ ಮುಟ್ಟಿ ನಮಸ್ಕರಿಸಿ, ಆಲಿಂಗನ ಮಾಡಿಕೊಂಡರು. ಈ ಭಾವನಾತ್ಮಕ ಕ್ಷಣವು, ರಾಜ್ಯದ ಮುಂದಿನ ಮುಖ್ಯಮಂತ್ರಿ ತಾವೇ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇದೇ ವೇಳೆ, ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸುವ ಸಾಧ್ಯತೆಯಿದೆ. ಹೈಕಮಾಂಡ್ ಶೀಘ್ರದಲ್ಲೇ ರಾಜ್ಯದ ನೂತನ ಮುಖ್ಯಮಂತ್ರಿ ಹಾಗೂ ನೂತನ ಕೆಪಿಸಿಸಿ ಅಧ್ಯಕ್ಷರ ಹೆಸರನ್ನು ಏಕಕಾಲದಲ್ಲಿ ಘೋಷಣೆ ಮಾಡುವ ನಿರೀಕ್ಷೆಯಿದೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.