Home ಶಿಕ್ಷಣ  ಜಿಲ್ಲೆಗೆ ಪ್ರಥಮ ಸ್ಥಾನಕ್ಕೆ ಪ್ರಯತ್ನಿಸಿ : ಎಂ.ಪಿ.ಲತಾ
ಶಿಕ್ಷಣ

 ಜಿಲ್ಲೆಗೆ ಪ್ರಥಮ ಸ್ಥಾನಕ್ಕೆ ಪ್ರಯತ್ನಿಸಿ : ಎಂ.ಪಿ.ಲತಾ

Share
SSLC,RESULTS,HARAPANAHALLI,
Share

ಹರಪನಹಳ್ಳಿ:  ಎಸ್‍.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಹರಪನಹಳ್ಳಿ ತಾಲ್ಲೂಕು ಜಿಲ್ಲೆಗೆ ಪ್ರಥಮ ಸ್ಥಾನ ಪಡೆಯುವ ನಿಟ್ಟಿನಲ್ಲಿ ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಹೇಳಿದರು.

ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಸುಧಾರಣಾ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಎಸ್‍ಎಸ್‍ಎಲ್‍ಸಿ  ವಿದ್ಯಾರ್ಥಿಗಳ ಭವಿಷ್ಯವನ್ನೆ ನಿರ್ಧರಿಸುವ ಹಂತ. ಶಿಕ್ಷಕರು ಮಕ್ಕಳಿಗೆ ಉತ್ತಮ ಪಾಠ ಬೋಧನೆ ಮಾಡಬೇಕು, ಅದೇ ಪ್ರಕಾರ ವಿದ್ಯಾರ್ಥಿಗಳು ಕಷ್ಟಪಟ್ಟು ಓದಬೇಕು ಎಂದರು.

ಅನ್ಯಮಾರ್ಗದಿಂದ ಅಂಕ ಪಡೆಯುವ ಪ್ರಯತ್ನ ಮಾಡಬೇಡಿ. ಪ್ರತಿಯೊಬ್ಬ ಶಿಕ್ಷಕರು, ವಿದ್ಯಾರ್ಥಿಗಳು ಪ್ರಾಮಾಣಿಕವಾಗಿ ಓದಿ ಫಲಿತಾಂಶ ಸುಧಾರಣೆ ಆಗಬೇಕು. ಜಿಲ್ಲೆಗೆ ಪ್ರಥಮ ಸ್ಥಾನ ಪಡೆಯುವ ಗುರಿ ನಮ್ಮದಾಗಬೇಕು ಎಂದು ತಿಳಿಸಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಎನ್.ಜಿ.ಮನೋಹರ ಮಾತನಾಡಿ, ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯ ಅನುದಾನವನ್ನು ಶಿಕ್ಷಣ ಕ್ಷೇತ್ರಕ್ಕೆ ಆಧ್ಯತೆ ನೀಡಿ ಶಾಸಕರು ಕೆಲಸ ಮಾಡುತ್ತಿದ್ದಾರೆ. ಅವರಿಗೆ ನಮ್ಮ ರಾಜ್ಯ ಸರ್ಕಾರಿನೌಕರರ ಸಂಘ, ಎಲ್ಲ ಶಿಕ್ಷಕರ ಸಂಘಗಳು ಅಭಾರಿಯಾಗಿವೆ ಎಂದು ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಲೇಪಾಕ್ಷಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ.ಅಂಜಿನಪ್ಪ, ಮುಖ್ಯ ಶಿಕ್ಷಕ ಚೇತನ್ ಬಣಕಾರ ಮಾತನಾಡಿದರು.ಗಣಿತ ವಿಷಯ ಕುರಿತು ವೀರೇಂದ್ರ, ವಿಜ್ಞಾನದಲ್ಲಿ ಘನೀಫ್, ವೀರೇಶ ಹಾಗೂ ಸಮಾಜ ವಿಜ್ಞಾನ ಕುರಿತು ಶಿಕ್ಷಕ ಸಂತೋಷ್ ತರಬೇತಿ ನೀಡಿದರು.

ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಗುರುಮೂರ್ತಿ, ಕ್ಷೇತ್ರ ಸಮನ್ವಯಾಧಿಕಾರಿ ಹೊನ್ನೆತ್ತೆಪ್ಪ, ಶಿಕ್ಷಣ ಸಂಯೋಜಕರಾದ ಎಸ್.ವೀರೇಶ, ಪಂಪಾನಾಯ್ಕ, ಲತಾ ರಾಥೋಡ್ , ಮುಖಂಡರಾದ ಸಾಸ್ವಿಹಳ್ಳಿ ನಾಗರಾಜ್, ಮತ್ತೂರು ಬಸವರಾಜ್ ಹಾಗೂ ವಿವಿಧ ಶಾಲೆಗಳ ಶಿಕ್ಷಕರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಶಿಕ್ಷಣ

ಬಿ.ಐ.ಇ.ಟಿ. ಯಲ್ಲಿ ನೈಲಿಟ್‌ನ 90 ಗಂಟೆಗಳ ‘ಚಿಪ್‌ಕ್ರಾಫ್ಟ್’ ಸೆಮಿಕಂಡಕ್ಟರ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ : ಬಾಪೂಜಿ ಇಂಜಿನಿಯರಿಂಗ್  ಮತ್ತು ತಾಂತ್ರಿಕ ಮಹಾವಿದ್ಯಾಲಯ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್...

Homeಶಿಕ್ಷಣ

ವಿದ್ಯಾರ್ಥಿ ದೆಸೆಯಲ್ಲೇ ದೊಡ್ಡಮಟ್ಟದ ಸಾಧನೆಯ ಗುರಿ ಇರಲಿ

ಹರಪನಹಳ್ಳಿ: ಶಿಕ್ಷಣ ಪಡೆಯುವಾಗಲೇ ವಿದ್ಯಾರ್ಥಿಗಳು ದೊಡ್ಡಮಟ್ಟದ ಸಾಧನೆಯ ಗುರಿ ಇಟ್ಟುಕೊಳ್ಳಬೇಕು ಎಂದು ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಪಿ. ಮಹಾಬಲೇಶ್ವರಗೌಡ್ರು ಕಿವಿಮಾತು ಹೇಳಿದರು. ನಗರದ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಎಚ್.ಪಿ.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ 2026 -27ನೇ...

Homeಶಿಕ್ಷಣ

ಪದವಿ ಹಾಗೂ ಸ್ನಾತಕೋತ್ತರ ಪದವಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026-27 ನೇ ಸಾಲಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿ...

Homeಶಿಕ್ಷಣ

ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ :

ದಾವಣಗೆರೆ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (ಸಾಮಾನ್ಯ ಪದವಿ ಮಟ್ಟದ ಕೋರ್ಸಿನವಿದ್ಯಾರ್ಥಿಗಳಿಗೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.