Home ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ
Homeಆರೋಗ್ಯ

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

Share
Share

ದಾವಣಗೆರೆ : ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್  ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ ಕಾಯಿಲೆಗಳ ಚಿಕಿತ್ಸಾ ಸೌಲಭ್ಯವನ್ನು ವಿಸ್ತರಿಸಿದೆ. ಈ ಉಪಕ್ರಮದ ಮೂಲಕ, ಪಾಲಿಸಿದಾರರಿಗೆ ‘ಟಾಕ್ ಟು ಸ್ಟಾರ್’ ಸೇವೆ ಹಾಗೂ ಮನೆ ಬಾಗಿಲಿನ ಆರೋಗ್ಯ ಸೇವೆ ಕಲ್ಪಿಸಿಕೊಡಲಾಗುತ್ತಿದೆ.

ಇದರ ನೆರವಿನಿಂದ ಆರಂಭಿಕ ಹಂತದಲ್ಲೇ ಅಗತ್ಯ ವೈದ್ಯಕೀಯ ಸಲಹೆ ಮತ್ತು ಪರೀಕ್ಷೆಗಳ ನೆರವು ಒದಗಿಸಲಾಗುತ್ತಿದೆ. ಜೊತೆಗೆ, ಸಾರ್ವಜನಿಕರು ಸ್ಟಾರ್ ಹೆಲ್ತ್ ಕಸ್ಟಮರ್ ಆ್ಯಪ್ ಮೂಲಕ 24*7 ಉಚಿತ ವರ್ಚುವಲ್ ವೈದ್ಯರ ಸಮಾಲೋಚನೆ ಪಡೆಯುವ ಅವಕಾಶವನ್ನೂ ಕಲ್ಪಿಸಲಾಗಿದೆ ಎಂದು ಸ್ಟಾರ್ ಹೆಲ್ತ್ ಇನ್ಶುರನ್ಸ್ ಕರ್ನಾಟಕ ವಹಿವಾಟು ವಿಭಾಗದ ಮುಖ್ಯಸ್ಥ ಆದಿತ್ಯ ಓಂಪ್ರಕಾಶ್ ಬಿಯಾನಿ ಹೇಳಿದ್ದಾರೆ.

ಪಾಲಿಸಿದಾರರಿಗೆ ಅನಿಯಮಿತ ಟೆಲಿ ಸಮಾಲೋಚನೆಯಡಿ ಪಾಲಿಸಿ ಅವಧಿಯಲ್ಲಿ ಎಷ್ಟೇ ಬಾರಿ ಬೇಕಾದರೂ ದೂರವಾಣಿ ಅಥವಾ ಆನ್‍ಲೈನ್ ಮೂಲಕ ವೈದ್ಯರ ಸಲಹೆ ಪಡೆಯಬಹುದು. ಜ್ವರ ಅಥವಾ ಸೋಂಕಿನ ಆರಂಭಿಕ ಲಕ್ಷಣಗಳು ಕಂಡುಬಂದ ಕೂಡಲೇ ವೈದ್ಯಕೀಯ ಸಲಹೆ ಪಡೆಯಲು ಇದು  ನೆರವಾಗುತ್ತದೆ. ಸಾರ್ವಜನಿಕರಿಗೆ ಉಚಿತ ವರ್ಚುವಲ್ ವೈದ್ಯರ ಸಮಾಲೋಚನೆಯೂ ಇರುತ್ತದೆ.

ಅಂತೆಯೇ ಪಾಲಿಸಿದಾರರು ‘ಟಾಕ್ ಟು ಸ್ಟಾರ್’ ಸೇವೆಯಡಿ 7200 222 333 ಸಂಖ್ಯೆಗೆ ಕರೆ ಮಾಡಿ ಮಾರ್ಗದರ್ಶನ ಪಡೆಯಬಹುದು. ನಗದುರಹಿತ ಮನೆ ಬಾಗಿಲಿನ ಆರೋಗ್ಯ ಸೇವೆಯಡಿ ಅರ್ಹ ಪಾಲಿಸಿದಾರರಿಗೆ ಸ್ಟಾರ್ ಹೆಲ್ತ್ ಕ್ಯಾಷ್‍ಲೆಸ್- ಸೌಲಭ್ಯದ ಮೂಲಕ  ಮನೆ ಬಾಗಿಲಿಗೇ ಆರೋಗ್ಯ ಸೇವೆ ಒದಗಿಸಲಾಗುತ್ತದೆ. ವೈದ್ಯರ ಸಲಹೆಯಂತೆ ನಸಿರ್ಂಗ್ ಸೇವೆ, ರಕ್ತ ಪರೀಕ್ಷೆ, ಆರೋಗ್ಯ ಮೇಲ್ವಿಚಾರಣೆ,  ಐವಿ ಫ್ಲೂಯಿಡ್ಸ್ ಹಾಗೂ ಚುಚ್ಚುಮದ್ದು ಸೇರಿದಂತೆ ಅಗತ್ಯ ಚಿಕಿತ್ಸೆಗಳನ್ನು ಮನೆಯಲ್ಲೇ ನೀಡಲಾಗುತ್ತದೆ ಎಂದು ಪ್ರಕಟಣೆ ಹೇಳಿದೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.