Home ಶಿಕ್ಷಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ನ್ಯಾಯಾಲಯದಿಂದ ತಡೆಯಾಜ್ಞೆ
ಶಿಕ್ಷಣಸುದ್ದಿಗಳು

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ನ್ಯಾಯಾಲಯದಿಂದ ತಡೆಯಾಜ್ಞೆ

Share
Share

ಬೆಂಗಳೂರು : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ ಪ್ರಕ್ರಿಯೆಗೆ ನಗರದ ಸಿವಿಲ್ ಮತ್ತು ಸತ್ರ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿದೆ. ಇದರಿಂದಾಗಿ ಮೇ 1ರಂದು ನಡೆಯಬೇಕಿದ್ದ ಚುನಾವಣೆಗೆ ಬ್ರೇಕ್ ಬಿದ್ದಂತಾಗಿದೆ.

ಸಂಘದ ಸದಸ್ಯರಾದ ಚಂದ್ರಶೇಖರ್ ಆರ್. ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ CCH28 14ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯವು ಈ ಮಹತ್ವದ ಆದೇಶ ಹೊರಡಿಸಿದ್ದು, ಇ ಕೋರ್ಟ್ ವೆಬ್ ಪುಟದಲ್ಲಿ ಪ್ರಕಟಿಸಿದ ಮಾಹಿತಿ ಇಲ್ಲಿದೆ.‌

Karnataka

ಪ್ರಕರಣದ ಹಿನ್ನೆಲೆ:
ಅರ್ಜಿದಾರರು ಸಂಘದ ಚುನಾವಣಾ ಪ್ರಕ್ರಿಯೆಯಲ್ಲಿನ ಲೋಪದೋಷಗಳನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರು, 5ನೇ ಪ್ರತಿವಾದಿಗೆ (Defendant No. 5) ಮೇ 1, 2026 ರಂದು ನಿಗದಿಯಾಗಿದ್ದ ಚುನಾವಣೆಯನ್ನು ನಡೆಸದಂತೆ ‘ಎಕ್ಸ್‌ಪಾರ್ಟೆ’ (ಏಕಪಕ್ಷೀಯ) ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದಾರೆ.

ನ್ಯಾಯಾಲಯದ ಆದೇಶದ ಮುಖ್ಯಾಂಶಗಳು:

ಚುನಾವಣೆಗೆ ತಡೆ: ಮುಂದಿನ ವಿಚಾರಣೆಯವರೆಗೆ ಸಂಘದ ಯಾವುದೇ ಚುನಾವಣಾ ಪ್ರಕ್ರಿಯೆಯನ್ನು ನಡೆಸುವಂತಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಸಿವಿಲ್ ಪ್ರಕ್ರಿಯಾ ಸಂಹಿತೆ (CPC) ಯ ಆರ್ಡರ್ XXXIX ರೂಲ್ 3(A) ಅನ್ವಯ ಪಾಲನೆಯಾದ ನಂತರವೇ ಈ ತಡೆಯಾಜ್ಞೆಯ ಆದೇಶ ಜಾರಿಗೆ ಬರಲಿದೆ ಎಂದು ಕಚೇರಿಗೆ ಸೂಚಿಸಲಾಗಿದೆ.

ನೋಟಿಸ್ ಜಾರಿ: ಅರ್ಜಿಯಲ್ಲಿನ ಪ್ರತಿವಾದಿಗಳಿಗೆ ನ್ಯಾಯಾಲಯವು ಸಮನ್ಸ್ ಮತ್ತು ನೋಟಿಸ್ ಜಾರಿಗೊಳಿಸಿದ್ದು, ಮುಂದಿನ ವಿಚಾರಣೆಯನ್ನು ಜೂನ್ 29, 2026ಕ್ಕೆ ಮುಂದೂಡಿದೆ. ಈ ಆದೇಶದಿಂದಾಗಿ ರಾಜ್ಯಾದ್ಯಂತ ಕುತೂಹಲ ಕೆರಳಿಸಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣಾ ಕಣ ಸದ್ಯಕ್ಕೆ ತಣ್ಣಗಾಗಿದ್ದು, ಜೂನ್ ಅಂತ್ಯದವರೆಗೆ ಯಾವುದೇ ಚಟುವಟಿಕೆಗಳು ನಡೆಯುವಂತಿಲ್ಲ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.