ವಿಜಯನಗರ : ಜಿಲ್ಲಾಡಳಿತ, ಜಿಲ್ಲಾ ಪಮಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕರ, ವಕೀಲರ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಪೊಲೀಸ್ ಇಲಾಖೆ ಹಾಗೂ ವಿಶೇಷ ಬಾಲಾಪರಾಧ ಪೊಲೀಸ್ ಘಟಕ ವತಿಯಿಂದ ನಗರದ ಮಾರ್ಕಂಡೇಶ್ವರ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಬೆಳಗ್ಗೆ 9.30 ಕ್ಕೆ ಸುರಕ್ಷಿತ ಬಚ್‌ಪನ್ ಕಾರ್ಯಕ್ರಮ ಆಯೋಜಿಸಲಾಗಿದೆ.
ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಕೆ.ಎಂ.ರಾಜಶೇಖರ ಉದ್ಘಾಟಿಸಲಿದ್ದು, ಮಾರ್ಕಂಡೇಶ್ವರ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಅಧ್ಯಕ್ಷ ವಿ.ಎಂ.ಜಯರಾಮ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ.ಪಿ. ಕುಮಾರಸ್ವಾಮಿ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿಜೆಎಂ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎನ್.ಸುಬ್ರಮಣ್ಯ, ಪ್ರಧಾನ ಸಿವಿಲ್ ನ್ಯಾಯಾಧೀಶ ಪ್ರಶಾಂತ್ ನಾಗಲಾಪುರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಗಂಗಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಉಮಾಪತಿ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಕೃಷ್ಣದೇವರಾಯಲು, ಮಾರ್ಕಂಡೇಶ್ವರ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಮುಖ್ಯೋಪಾಧ್ಯಾಯ ಸಿರಾಜ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಯೋಜನಾಧಿಕಾರಿ ವಿದ್ಯಾ, ಗ್ರಾಮೀಣ ಪೊಲೀಸ್ ಠಾಣೆ ಪಿ.ಐ ಗುರುರಾಜ್ ಕಟ್ಟಿಮನಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Leave a comment