ಹರಪನಹಳ್ಳಿ : ತಾಲ್ಲೂಕಿನ ಅನಂತನಹಳ್ಳಿ ಪಿ.ಎಂ.ಶ್ರೀ ಸರಕಾರಿ ಆದರ್ಶ ವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಅತಿಥಿ ಶಿಕ್ಷಕರ ಹುದ್ದೆಗಳ ಭರ್ತಿಗೆ ಅ ರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶಾಲೆಯಲ್ಲಿ ಒಟ್ಟು 5 ಅತಿಥಿ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ವಿಷಯವಾರು ವಿವರಗಳು ಈ ಕೆಳಗಿನಂತಿವೆ: · ಹಿಂದಿ (Hindi): 02 ಹುದ್ದೆಗಳು · ಇಂಗ್ಲಿಷ್ (English): 01 ಹುದ್ದೆ · ಸಮಾಜ ವಿಜ್ಞಾನ (Social Science): 01 ಹುದ್ದೆ · ಕನ್ನಡ (Kannada): 01 ಹುದ್ದೆ ಪ್ರಮುಖ ಸೂಚನೆ: ಈ ಹುದ್ದೆಗಳಿಗೆ ಇಂಗ್ಲಿಷ್ ಮಾಧ್ಯಮದಲ್ಲಿ (English Medium) ಬೋಧಿಸುವ ಸಾಮರ್ಥ್ಯ ಹಾಗೂ ಅರ್ಹತೆ ಇರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಆಯ್ಕೆಯಾಗುವ ಶಿಕ್ಷಕರಿಗೆ ಮಾಸಿಕ ₹12,500 ಗೌರವ ಧನ (Salary) ನೀಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ದಿನಾಂಕ 07-06-2026ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕಾಗಿ ವಿನಂತಿಸಲಾಗಿದೆ. ಹುದ್ದೆಗಳ ವಿವರ, ವಿದ್ಯಾರ್ಹತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಾಲೆಯ ಮುಖ್ಯೋಪಾಧ್ಯಾಯರಾದ ಚಂದ್ರಪ್ಪ ಹೆಚ್.ಕೆ. ಅವರನ್ನು ಖುದ್ದಾಗಿ ಅಥವಾ ಶಾಲೆಯ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹರಪನಹಳ್ಳಿ : ತಾಲ್ಲೂಕಿನ ಅನಂತನಹಳ್ಳಿ ಪಿಎಂ ಶ್ರೀ ಸರ್ಕಾರಿ ಆದರ್ಶ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅತಿಥಿ ಶಿಕ್ಷಕ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಂಗೀತ ಮತ್ತು ನೃತ್ಯ ಶಿಕ್ಷಕರು, ಕಂಪ್ಯೂಟರ್...