Home ಟಾಟಾ ಪವರ್‌ಗೆ ಸಮಾನಾಂತರ ವಿದ್ಯುತ್ ವಿತರಣೆ ಪರವಾನಗಿ ಕಿಸಾನ್ ಸಭಾ ವಿರೋಧ :
Homeಸುದ್ದಿಗಳು

ಟಾಟಾ ಪವರ್‌ಗೆ ಸಮಾನಾಂತರ ವಿದ್ಯುತ್ ವಿತರಣೆ ಪರವಾನಗಿ ಕಿಸಾನ್ ಸಭಾ ವಿರೋಧ :

Share
Share

ಹರಪನಹಳ್ಳಿ: ರಾಜ್ಯದಲ್ಲಿ ಸಮಾನಾಂತರ ವಿದ್ಯುತ್ ವಿತರಣೆಗಾಗಿ ಮೆ. ಟಾಟಾ ಪವರ್ ಕಂಪನಿ ಲಿಮಿಟೆಡ್‌ಗೆ ಪರವಾನಗಿ ನೀಡಲು ಮುಂದಾಗಿರುವುದನ್ನು ಅಖಿಲ ಭಾರತ ಕಿಸಾನ್ ಸಭಾ ತೀವ್ರವಾಗಿ ಖಂಡಿಸಿದೆ. ಈ ಕುರಿತು ಆಕ್ಷೇಪಣೆ ವ್ಯಕ್ತಪಡಿಸಿ ಪತ್ರಿಕಾ ಪ್ರಕಟಣೆ ನೀಡಿರುವ ಸಂಘಟನೆಯ ಜಿಲ್ಲಾಧ್ಯಕ್ಷ ಗುಡಿಹಳ್ಳಿ ಹಾಲೇಶ, “ಸಾವಿರಾರು ಕೋಟಿ ರೂಪಾಯಿಗಳ ಸಾರ್ವಜನಿಕ ಹೂಡಿಕೆಯಿಂದ ನಿರ್ಮಾಣಗೊಂಡಿರುವ ವಿದ್ಯುತ್ವಿತರಣಾ ಜಾಲವನ್ನು ಕಡೆಗಣಿಸಿ, ಖಾಸಗಿ ಕಂಪನಿಗೆ ಸಮಾನಾಂತರ ಜಾಲ ನಿರ್ಮಿಸಲು ಅವಕಾಶ ನೀಡುವುದು ಸಾರ್ವಜನಿಕ ಸಂಪನ್ಮೂಲಗಳ ಪೋಲಿಗೆ ಕಾರಣವಾಗಲಿದೆ” ಎಂದು ಎಚ್ಚರಿಸಿದ್ದಾರೆ.

ರಾಜ್ಯ, ಕೇಂದ್ರ ಸರ್ಕಾರಗಳು ಹಾಗೂ ಗ್ರಾಹಕರ ಹಣದಿಂದ ದಶಕಗಳ ಕಾಲ ಶ್ರಮಿಸಿ ಕಟ್ಟಿರುವ ಉಪಕೇಂದ್ರಗಳು, ವಿತರಣಾ ಮಾರ್ಗಗಳು ಮತ್ತು ಟ್ರಾನ್ಸ್‌ಫಾರ್ಮರ್‌ಗಳ ಬಳಕೆ ಇದರಿಂದ ಕಡಿಮೆಯಾಗಲಿದೆ. ಅಲ್ಲದೆ, ರಾಜ್ಯ ಸ್ವಾಮ್ಯದ ಎಸ್ಕಾಂಗಳ ಆರ್ಥಿಕ ಸ್ಥಿರತೆಗೆ ಭಾರೀ ಪೆಟ್ಟು ಬೀಳಲಿದ್ದು, ರೈತರು ಹಾಗೂ ಗ್ರಾಮೀಣ ಗ್ರಾಹಕರಿಗೆ ಸಿಗುತ್ತಿರುವ ಕಲ್ಯಾಣ ಯೋಜನೆಗಳು ಮತ್ತು ಉದ್ಯೋಗಾವಕಾಶಗಳಿಗೂ ಕುತ್ತು ಬರಲಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಖಾಸಗಿ ಕಂಪನಿಗೆ ಪರವಾನಗಿ ನೀಡುವುದರಿಂದ ರಾಜ್ಯದ ವಿದ್ಯುತ್ ವಿತರಣಾ ವ್ಯವಸ್ಥೆಯ ದೀರ್ಘಕಾಲೀನ ಸ್ಥಿರತೆಯ ಮೇಲೆ ವ್ಯಾಪಕ ದುಷ್ಪರಿಣಾಮ ಉಂಟಾಗಲಿದೆ ಎಂದು ಹಗರಿಗುಡಿಹಳ್ಳಿ ಶಿವರಾಂ, ಹರಿಯಮ್ಮನಹಳ್ಳಿ ಬಸವರಾಜ, ಭೂಮ್ಮಲಿಂಗಪ್ಪ ಹಾಗೂ ರಾಗಿಮಸಲಡ ಹನುಮಂತಪ್ಪ ಮತ್ತಿತರರು ತೀವ್ರವಾಗಿ ವಿರೋಧಿಸಿದ್ದಾರೆ.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ವಸತಿ ಶಾಲೆಗಳ 6ನೇ ತರಗತಿ : ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ಜಿಲ್ಲೆಯ ವಿವಿಧ ವಸತಿ ಶಾಲೆಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶಾತಿಗಾಗಿ...

Homeಸುದ್ದಿಗಳು

ಬರಪೀಡಿತ ತಾಲೂಕು ಘೋಷಣೆಗೆ ಆಗ್ರಹ: ತಹಸೀಲ್ದಾರರಿಗೆ ಬಿಜೆಪಿ ವತಿಯಿಂದ ಮನವಿ ಸಲ್ಲಿಕೆ

 ಹರಪನಹಳ್ಳಿ : ಇಂದು ಮಂಡಲ ಬಿಜೆಪಿ ವತಿಯಿಂದ ಬರಗಾಲದ ಕಾರಣದಿಂದ ಹರಪನಹಳ್ಳಿ ತಾಲೂಕನ್ನು ಬರಪೀಡಿತ ತಾಲೂಕನ್ನಾಗಿ...

Homeಸುದ್ದಿಗಳು

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ತಾಲೂಕಿನ ವಿವಿಧ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ...

Homeಸುದ್ದಿಗಳು

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ಹೊಸಪೇಟೆ ತಾಲೂಕಿನ ಸಮಗ್ರ ಗಣಿ ಪರಿಸರ ಪುನಶ್ಚೇತನ ಯೋಜನೆಯಡಿ ತೋಟಗಾರಿಕೆ ಇಲಾಖೆ ವತಿಯಿಂದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.