Home ಶಿಕ್ಷಣ ಆತ್ಮವಿಶ್ವಾಸ ಶಿಕ್ಷಣದ ಮೊದಲ ಮೆಟ್ಟಿಲು  :  ಇಸ್ಮಾಯಿಲ್ ಯಲಿಗಾರ.  
ಶಿಕ್ಷಣ

ಆತ್ಮವಿಶ್ವಾಸ ಶಿಕ್ಷಣದ ಮೊದಲ ಮೆಟ್ಟಿಲು  :  ಇಸ್ಮಾಯಿಲ್ ಯಲಿಗಾರ.  

Share
ಆತ್ಮವಿಶ್ವಾಸ ಶಿಕ್ಷಣದ ಮೊದಲ ಮೆಟ್ಟಿಲು  :  ಇಸ್ಮಾಯಿಲ್ ಯಲಿಗಾರ.  
Share

 ಹರಪನಹಳ್ಳಿ : ಸ್ವಾರ್ಥಕ್ಕಾಗಿ ಬದುಕುವವರ ನೆನಪಿನಲ್ಲಿ ಉಳಿಯುವುದಿಲ್ಲ, ನಿಸ್ವಾರ್ಥಕ್ಕಾಗಿ ಬದುಕಿದವರು ಜನಮಾನಸದಲ್ಲಿ ಉಳಿಯುತ್ತಾರೆ ಎಂದು ಕಾಂಗ್ರೆಸ್ ಪಕ್ಷದ ವಕ್ತಾರ ಇಸ್ಮಾಯಿಲ್ ಎಲಿಗಾರ ತಿಳಿಸಿದರು.

ನಗರದ ಟಿ.ಎಂ.ಎ.ಇ ಶಿಕ್ಷಣ ಸಂಸ್ಥೆ ಎಸ್‍.ಸಿ.ಎಸ್. ಔಷಧ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಾಗಾರದಲ್ಲಿ ಅವರು ಯಶಸ್ಸು ವಿಷಯ ಕುರಿತು ಮಾತನಾಡಿದರು.ಹಣ ,  ಅಧಿಕಾರ,  ದೈಹಿಕ ಶಕ್ತಿ  ಪ್ರದರ್ಶನ ಮೊದಲಾದವುಗಳು ಯಶಸ್ಸು  ಅಗಲಾರವು. ಇವೆಲ್ಲ ವ್ಯಕ್ತಿಗತ ಸಾಧನೆ ಗಳು. ಇವು ಬರುತ್ತವೆ ಹೋಗುತ್ತವೆ.. ಯಾರು ಸ್ವಾರ್ಥ ಕ್ಕಾಗಿ ಬದುಕಿರತ್ತಾರೋ ಇಂಥವರು ನೆನಪಿನಲ್ಲಿ ಉಳಿಯಲಾರರು. ಯಾರು ಇತರರಿಗಾಗಿ ಬದುಕಿದ್ದರೋ ಅವರೇ ಯಶಸ್ಸನ್ನು ಗಳಿಸಿದವರು. ಇದಕ್ಕೆಲ್ಲಾ ಪ್ರೇರಣೆ, ಆತ್ಮವಿಶ್ವಾಸ ಹೆಚ್ಚಿಸುವ ಶಕ್ತಿ ಶಿಕ್ಷಣಕ್ಕೆ ಮಾತ್ರವಿದೆ ಎಂದರು.

ವಿದ್ಯಾರ್ಥಿಗಳು  ತಮ್ಮ ಬಗ್ಗೆ ತಾವೇ ಗೌರವ ಹೊಂದಿರಬೇಕು. ಜೊತೆಗೆ ಕುಟುಂಬದ ಬಗ್ಗೆ , ಊರಿನ ಬಗ್ಗೆ ನಾಡಿನ ಬಗ್ಗೆ ಮತ್ತು ದೇಶದ ಬಗ್ಗೆ ಗೌರವ ತಾಳಿರಬೇಕು. ಸತತ ಪರಿಶ್ರಮ, ಬುದ್ದಿವಂತಿಕೆ ,  ಸೃಜನ ಶೀಲತೆ ಗುಣವನ್ನು ರೂಡಿಸಿಕೊಳ್ಳಬೇಕು. ಆತ್ಮವಿಶ್ವಾಸ ವೇ ಶಿಕ್ಷಣದ ಮೊದಲ ಮೆಟ್ಟಿಲು ಎಂದು ತಿಳಿಸಿದರು.

ಕಾರುಣ್ಯದ ಕಣ್ಣುಲ್ಲಾ  ಕಾಗೆ ಪಕ್ಷಿ ಯಲ್ಲಿ ಬಳಗ ಪ್ರಜ್ಞೆ ಯನ್ನು,  ಸಮಾನತೆ ಹಾಗು ಕೂಡಿ ಬದುಕುವ ಸಹಬಾಳ್ವೆ   ಯನ್ನು ನಾವು ಕಾಣಬಹುದು.  ಬುದ್ಧ, ಬಸವ, ಅಂಬೇಡ್ಕರ್ ಹಾಗು ಮಹಾತ್ಮ ಗಾಂಧಿ, ಎ ಪಿ ಜೆ ಅಬ್ದುಲ್ ಕಲಾಂ , ಕೆ ಆರ್ ನಾರಾಯಣ್, ಮನಮೋಹನ್ ಸಿಂಗ್ , ಭಗತ್ ಸಿಂಗ್ , ಅಬ್ರಾಹಂ ಲಿಂಕನ್ ಅವರ ಬದುಕಿನ ಕಥೆಗಳನ್ನು ವಿವರಿಸಿದರು. ಪ್ರಾಚಾರ್ಯ ನಾಗೇಂದ್ರ ರಾವ್, ಪ್ರಾಧ್ಯಾಪಕ ವೀರನಗೌಡ, ಷಣ್ಮುಖ, ಎನ್‍.ಎಸ್.ಎಸ್. ಅಧಿಕಾರಿ ದರ್ಶನ್ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
nivrutta
Homeಕಲೆಕ್ರೀಡೆಶಿಕ್ಷಣ

ನೌಕರರ ಹಿತರಕ್ಷಣೆಗೆ ಸಂಘ ಸದಾ ಬದ್ಧ: ಎನ್.ಜಿ. ಮನೋಹರ ಭರವಸೆ

ಹರಪನಹಳ್ಳಿ: "ಸರ್ಕಾರಿ ನೌಕರರಿಗೆ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದಂತೆ ನೋಡಿಕೊಳ್ಳಲು ರಾಜ್ಯ ನೌಕರರ ಸಂಘ ಹಾಗೂ ತಾಲೂಕು ಘಟಕವು ಸದಾ ನಿಮ್ಮ ಬೆನ್ನೆಲುಬಾಗಿ ನಿಲ್ಲಲಿದೆ" ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾದ ಎನ್.ಜಿ. ಮನೋಹರ ಅವರು ಭರವಸೆ ನೀಡಿದರು. ಇಲ್ಲಿನ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಭಾನುವಾರ ತಾಲೂಕು ಘಟಕದ ವತಿಯಿಂದ ಆಯೋಜಿಸಲಾಗಿದ್ದ ವಿವಿಧ ಇಲಾಖೆಗಳ ನಿವೃತ್ತ ನೌಕರರು, ನಿವೃತ್ತ ಶಿಕ್ಷಕರು ಹಾಗೂ ಬಡ್ತಿ ಹೊಂದಿದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. "ಶಿಕ್ಷಕರು ವೃತ್ತಿಯಿಂದ ನಿವೃತ್ತರಾಗುತ್ತಿದ್ದಾರೆಯೇ ವಿನಃ ಅವರ ಅನುಭವದಿಂದಲ್ಲ. ನಿವೃತ್ತಿಯ ನಂತರವೂ ನಾವು ಮತ್ತು ನಿವೃತ್ತ ನೌಕರರ ಸಂಘ ಸದಾ ನಿಮ್ಮ ಜೊತೆಗಿರುತ್ತೇವೆ. ನಿವೃತ್ತ ಜೀವನದಲ್ಲಿ ಪ್ರತಿಯೊಬ್ಬರೂ ಪ್ರತಿದಿನ ವ್ಯಾಯಾಮ, ಪುಸ್ತಕ ಓದುವುದು, ತೋಟಗಾರಿಕೆ, ಸಂಗೀತ, ಕಲೆ, ಯೋಗ ಅಥವಾ ವಾಕಿಂಗ್ ಮಾಡುವ ಮೂಲಕ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬೇಕು" ಎಂದು ಮನೋಹರ ಅವರು ಕಿವಿಮಾತು ಹೇಳಿದರು. ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ಲತಾ ಟಿ.ಎಚ್.ಎಂ ಮಾತನಾಡಿ, "ಮಹಿಳಾ ನೌಕರರಿಗೆ ಋತುಚಕ್ರದ ರಜೆ ಘೋಷಿಸುವಂತೆ ಸರ್ಕಾರಕ್ಕೆ ನಮ್ಮ ಸಂಘಟನೆಯು ಮೊದಲೇ ಧ್ವನಿಗೂಡಿಸಿ ಒತ್ತಾಯಿಸಿತ್ತು. ಹರಪನಹಳ್ಳಿ ತಾಲೂಕಿನಲ್ಲಿ ಈ ಹಿಂದೆ ನೌಕರರ ಪರವಾಗಿ ಇಂತಹ ಸಕ್ರಿಯ ಕಾರ್ಯಕ್ರಮಗಳು ನಡೆದಿರಲಿಲ್ಲ. ಆದರೆ ಪ್ರಸ್ತುತ ಅಧ್ಯಕ್ಷರಾದ ಮನೋಹರ್ ಅವರು ಹತ್ತಾರು ಜನಪರ ಕಾರ್ಯಕ್ರಮಗಳ ಮೂಲಕ ತಾಲೂಕು ಸಂಘಟನೆಯನ್ನು ಇಡೀ ರಾಜ್ಯಕ್ಕೆ ಮಾದರಿಯಾಗಿಸಿದ್ದಾರೆ. ಸಂಘಟನೆಗಳು ವೃತ್ತಿಯ ಜೊತೆಗೆ ಪ್ರವೃತ್ತಿಯಾಗಬೇಕೇ ಹೊರತು, ಸಂಘಟನೆಯೇ ವೃತ್ತಿಯಾಗಬಾರದು. ನಾವೆಲ್ಲರೂ ಸೇರಿ ತಾಲೂಕಿನ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸೋಣ" ಎಂದರು. ಮಂಜುನಾಥ ಪೂಜಾರ್ ಅವರು ಮಾತನಾಡಿ, "ಶಾಲೆಗಳಲ್ಲಿ ೩೦ ವರ್ಷಗಳಿಗೂ ಹೆಚ್ಚು ಕಾಲ ಸುದೀರ್ಘ ಸೇವೆ ಸಲ್ಲಿಸಿ, ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿರುವ ಶಿಕ್ಷಕರ ಸಮಯಪಾಲನೆ, ಕರ್ತವ್ಯ ನಿಷ್ಠೆ ಮತ್ತು ಮಕ್ಕಳೊಂದಿಗಿನ ಮಧುರ ಬಾಂಧವ್ಯ ನಿಜಕ್ಕೂ ಶ್ಲಾಘನೀಯ. ಇವರ ನಿವೃತ್ತ ಜೀವನ ಸುಖಕರವಾಗಿರಲಿ" ಎಂದು ಹಾರೈಸಿದರು. ಬಿಇಒ ಕಚೇರಿಯ ಇಸಿಒ ವೀರೇಶ್ ಮಾತನಾಡಿ, ನಿವೃತ್ತ ಹಾಗೂ ಬಡ್ತಿ ಪಡೆದ ಮುಖ್ಯ ಶಿಕ್ಷಕರನ್ನು ಕರೆಸಿ ಗೌರವಿಸುತ್ತಿರುವ ನೌಕರರ ಸಂಘದ ಕಾರ್ಯ ಸ್ತುತ್ಯರ್ಹ ಎಂದರು. ಶಿಕ್ಷಕ ಬಿ. ಆಂಜನೇಯ ಅವರೂ ಸಹ ವೇದಿಕೆಯಲ್ಲಿ ಅನಿಸಿಕೆಗಳನ್ನು ಹಂಚಿಕೊಂಡರು. ಇದೇ ವೇಳೆ ನಿವೃತ್ತ ಶಿಕ್ಷಕ ಸಲಾಂ ಅವರು "ಪ್ರೀತಿಯ ಗಾಳಿ ಬೀಸುತ್ತಿದೆ..." ಎಂಬ ಗೀತೆಯನ್ನು ಹಾಡಿ ನೆರೆದಿದ್ದವರನ್ನು ರಂಜಿಸಿದರು.  ಸರ್ಕಾರಿ ನೌಕರರ ಸಂಘದ ರಾಜ್ಯ...

harapanahalli-muslim-employees-aid-to-students
ಶಿಕ್ಷಣಸುದ್ದಿಗಳು

ಹರಪನಹಳ್ಳಿ ಮುಸ್ಲಿಂ ನೌಕರರಿಂದ ವಿದ್ಯಾರ್ಥಿಗಳಿಗೆ ನೆರವು

ಹರಪನಹಳ್ಳಿ: ‘ದಾನಧರ್ಮ ಮಾಡುವುದು ಇಸ್ಲಾಂ ಧರ್ಮದ ಪ್ರಮುಖ ತತ್ವಗಳಲ್ಲಿ ಒಂದಾಗಿದೆ. ಆರ್ಥಿಕವಾಗಿ ಹಿಂದುಳಿದವರಿಗೆ ಮತ್ತು ಅರ್ಹರಿಗೆ...

ಶಿಕ್ಷಣ

ಡಿಪ್ಲೋಮಾ ಕೋರ್ಸುಗಳಿಗೆ ಅರ್ಜಿ ಆಹ್ವಾನ

ವಿಜಯನಗರ (ಹೊಸಪೇಟೆ) :  ತಾಲೂಕಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಿಂದ (ಜಿಟಿಟಿಸಿ) ಪ್ರಸಕ್ತ ಸಾಲಿನಲ್ಲಿ...

ಶಿಕ್ಷಣಸುದ್ದಿಗಳು

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ ದಿಢೀರ್ ಸ್ಥಗಿತ! ಕಾರಣವೇನು?**

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ 2026-31ನೇ ಸಾಲಿನ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.