ಬಳ್ಳಾರಿ : ತುಂಗಭದ್ರಾ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಪ್ರಸ್ತುತ ತೀವ್ರ ಮಳೆ ಕೊರತೆ ಉಂಟಾಗಿರುವುದರಿಂದ ತುಂಗಭದ್ರಾ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಸಂಗ್ರಹವಾಗಿರುವುದಿಲ್ಲ.
ಈ ಹಿನ್ನೆಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನ ಬೆಳೆಗಳಿಗೆ ಜಲಾಶಯದ ಬಲದಂಡೆ ಮತ್ತು ಎಡದಂಡೆ ನಾಲೆಗಳಲ್ಲಿ ನೀರು ಹರಿಸಲು ಸಾಧ್ಯವಾಗುವುದಿಲ್ಲ. ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಸಲು ಸರ್ಕಾರ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಅಚ್ಚುಕಟ್ಟು ಭಾಗದ ಎಲ್ಲಾ ರೈತ ಬಾಂಧವರು ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಕೋರಲಾಗಿದೆ.
ಮುಂಬರುವ ದಿನಗಳಲ್ಲಿ ಜಲಾನಯನ ಪ್ರದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗಿ ಜಲಾಶಯ ಭರ್ತಿಯಾದಲ್ಲಿ, ನೀರಾವರಿ ಸಲಹಾ ಸಮಿತಿ ಸಭೆಯನ್ನು ಆಯೋಜಿಸಿ ಬೆಳೆಗಳಿಗೆ ನೀರು ಹರಿಸುವ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಈ ಕುರಿತು ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಹಾಗೂ ಅಧೀಕ್ಷಕ ಅಭಿಯಂತರರಾದ ಎಸ್.ಬಿ. ಮಲ್ಲಿಗವಾಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a comment