Home ಸುದ್ದಿಗಳು ಉಚ್ಚಂಗಿದುರ್ಗ ಉಚ್ಚಂಗೆಮ್ಮ ಗುಡ್ಡಕ್ಕೆ ಸಾವಿರಾರು ಭಕ್ತರು
ಸುದ್ದಿಗಳು

ಉಚ್ಚಂಗಿದುರ್ಗ ಉಚ್ಚಂಗೆಮ್ಮ ಗುಡ್ಡಕ್ಕೆ ಸಾವಿರಾರು ಭಕ್ತರು

Share
uchangemma uchangidurga,harapanahalli,devi,temple
Share

ಉಚ್ಚಂಗಿದುರ್ಗಕ್ಕೆ ಭಕ್ತರ ದಂಡು 

ಹರಪನಹಳ್ಳಿ : ಗೌರಿ ಹುಣ್ಣಿಮೆ ಅಂಗವಾಗಿ ತಾಲ್ಲೂಕಿನ ಉಚ್ಚಂಗಿದುರ್ಗದ ಉಚ್ಚಂಗೆಮ್ಮ ಗುಡ್ಡಕ್ಕೆ ಸಾವಿರಾರು ಭಕ್ತರು ಆಗಮಿಸಿದ್ದರು.

ಮಂಗಳವಾರ ರಾತ್ರಿಯಿಂದಲೇ ಭಕ್ತರು ಆಗಮಿಸಿ ದೇವಿ ದರ್ಶನ ಪಡೆದರು. ಉಚ್ಚಂಗೆಮ್ಮ ನಿನ್ನಾಲ್ಕು ಉಧೋ ಉದೋ ಎಂದು ಉದ್ಗರಿಸುತ್ತಾ, ಗುಡ್ಡದ ಅರಿಶಿಣ ಹೊಂಡದಲ್ಲಿ ಸ್ನಾನ ಪೂರ್ಣಗೊಳಿಸಿ ದೇವಿಗೆ ಹಣ್ಣು, ಕಾಯಿ, ಹೂವು ಪಡ್ಲಿಗಿ ಸಮರ್ಪಿಸಿದರು. ಬಂದಿದ್ದ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಆಯೋಜಿಸಲಾಗಿತ್ತು.

ಗುಡ್ಡದ ಹಿಂಭಾಗ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಇಲ್ಲದೇ ಭಕ್ತರು ಪರದಾಡಿದರು. ಸಾವಿರಾರು ಭಕ್ತರು ಆಗಮಿಸಿದ್ದರಿಂದ ಬಂದೋಬಸ್ತ್ ಸಿಬ್ಬಂದಿ ಕೊರತೆಯಿಂದ ಕೆಲವೊತ್ತು ಅವ್ಯವಸ್ಥೆ ಉಂಟಾಗಿತ್ತು. ಹುಣ್ಣಿಮೆ ದಿವಸ ಗುಡ್ಡಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಿರುತ್ತದೆ, ಭದ್ರತೆ ಸಿಬ್ಬಂದಿ ಕಡಿಮೆ ಇದ್ದರೆ ಭಕ್ತರ ನಿಯಂತ್ರಣ ಕಷ್ಟವಾಗುತ್ತದೆ. ಹಾಗಾಗಿ ಹೆಚ್ಚಿನ ಸಂಖ್ಯೆಯ ಸಿಬ್ಬಂದಿ ನಿಯೋಜನೆಗೊಳಿಸಲು ದೇವಸ್ಥಾನ ಸಮಿತಿ ಒತ್ತಾಯಿಸಿದರು. ಪ್ರಭಾರಿ ಮುಖ್ಯ ಕಾರ್ಯನಿರ್ವಾಹಕಿ ಪುಷ್ಪಾವತಿ, ಪಿಎಸ್ಐ. ವಿಜಯಕೃಷ್ಣ, ದೇವಸ್ಥಾನದ ಗುಮಾಸ್ತ ಟಿ.ಗಂಗಾಧರ್, ಜೆ.ನಾಗರಾಜ್, ಹಾಲೇಶ್, ದೇವಸ್ಥಾನ ಸಮಿತಿ ಪದಾಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.