Home ಪಾರದರ್ಶಕವಾಗಿ ಪರೀಕ್ಷಾ ಕಾರ್ಯ ಯಶಸ್ವೀಗೊಳಿಸಿ : ಡಿಸಿ ಕವಿತಾ ಎಸ್ ಮನ್ನಿಕೇರಿ
Homeಸುದ್ದಿಗಳು

ಪಾರದರ್ಶಕವಾಗಿ ಪರೀಕ್ಷಾ ಕಾರ್ಯ ಯಶಸ್ವೀಗೊಳಿಸಿ : ಡಿಸಿ ಕವಿತಾ ಎಸ್ ಮನ್ನಿಕೇರಿ

Share
Share

ವಿಜಯನಗರ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸೆಪ್ಟೆಂಬರ್ 6 ರಂದು ನಡೆಯಲಿರುವ ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್ಟೇಬಲ್‌ಗಳ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ನಡೆಸುತ್ತಿದ್ದು, ಯಾವುದೇ ಪರೀಕ್ಷಾ ಅಕ್ರಮಗಳಿಗೆ ಆಸ್ಪದವಿಲ್ಲದಂತೆ ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೆಬಲ್ ಪರೀಕ್ಷೆಯ ಪೂರ್ವ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿಜಯನಗರ ಜಿಲ್ಲೆಗ ಸಂಬಂಧಿಸಿದಂತೆ ಹೊಸಪೇಟೆಯಲ್ಲಿ ಒಟ್ಟು 9 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಳಗಿನ ಸಮಯದಲ್ಲಿ 4406 ಅಭ್ಯರ್ಥಿಗಳು ಹಾಗೂ ಮಧ್ಯಾಹ್ನ ಅಧಿವೇಶನದಲ್ಲಿ 4500 ಅಭ್ಯರ್ಥಿಗಳು ಲಿಖಿತ ಪರೀಕ್ಷೆಗೆ ಬರೆಯುವರು. ಪರೀಕ್ಷಾ ಸಮಯದಲ್ಲಿ ಯಾವುದೇ ಗೊಂದಲಗಳಿಗೆ ಎಡೆ ಮಾಡಿಕೊಡದೇ ಅತ್ಯಂತ ಪಾರದರ್ಶಕವಾಗಿ ಯಾವುದೇ ಲೋಪಗಳಿಲ್ಲದೆ, ಸುವ್ಯವಸ್ಥಿತವಾಗಿ ಪರೀಕ್ಷಾ ನಡೆಸಬೇಕು ಎಂದು ಕಟ್ಟಿನಿಟ್ಟಿನ ಸೂಚನೆ ನೀಡಿದರು. ಈಗಾಗಲೇ ತಮಗೆಲ್ಲ ಸಾಕಷ್ಟು ಪರೀಕ್ಷಾ ನಡೆಸಿರುವ ಅನುವವಿದೆ. ಆದರೂ ಇಲಾಖೆ ನಿಯಮಗಳನ್ನು ಪಾಲಿಸುವ ಮೂಲಕ ಸಣ್ಣ ಲೋಪವುಂಟಾಗದೇ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದರು.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಉತ್ತಮ ಬೆಳಕಿನ ವ್ಯವಸ್ಥೆಯ ಕೊಠಡಿ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಬೇಕು ಎಂದರು. ಪ್ರಶ್ನೆಪತ್ರಿಕೆ ಇರಿಸುವ ಕೊಠಡಿಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಇವುಗಳನ್ನು ವೆಬ್ಕಾಸ್ಟಿಂಗ್ ಮೂಲಕ ನಿಗಾ ವಹಿಸಲಾಗುತ್ತದೆ. ಪರೀಕ್ಷಾ ಕೇಂದ್ರದ ಒಳಗೆ ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಬ್ಲೂಟೂತ್, ಕ್ಯುಲ್ಕುಲೇಟರ್ ಸೇರಿದಂತೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ಸ್ ಸಾಧನಗಳನ್ನು ತರುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ 144ನೇ ಸೆಕ್ಷನ್ ಜಾರಿಗೊಳಿಸಲಾಗುವುದು. ಅಷ್ಟೇ ಅಲ್ಲದೆ, ಕೇಂದ್ರದ ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷೆ ಮುಗಿಯುವವರೆಗೆ ಮುಚ್ಚಬೇಕು ಎಂದು ತಿಳಿಸಿದರು. ಈ ವೇಳೆ ಅಪರ ಜಿಲ್ಲಾಧಿಕಾರಿ ಪಿ. ಎನ್. ಲೋಕೇಶ್ ಸೇರಿದಂತೆ ವಿವಿದ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.